Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಆದರೆ ಪಾಂಫೀಲಿಯದಲ್ಲಿ ಇದ್ದಾಗ ಧರ್ಮಪ್ರಚಾರ ಕಾರ್ಯದಲ್ಲಿ ಸಹಕರಿಸದೆ ತಮ್ಮನ್ನು ಬಿಟ್ಟಗಲಿದ ಅವನನ್ನು ಜೊತೆಯಲ್ಲಿ ಕರೆದುಕೊಂಡು ಹೋಗುವುದು ಉಚಿತವಲ್ಲವೆಂಬುದು ಪೌಲನ ಅಭಿಪ್ರಾಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಪೌಲನು - ನಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫೂಲ್ಯದಲ್ಲಿ ನಮ್ಮನ್ನು ಬಿಟ್ಟವನನ್ನು ಕರೆದುಕೊಂಡು ಹೋಗುವದು ತಕ್ಕದಲ್ಲವೆಂದು ನೆನಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಪಂಫುಲ್ಯದಲ್ಲಿ ತಮ್ಮನ್ನು ಬಿಟ್ಟು ತಮ್ಮೊಂದಿಗೆ ಸೇವೆಗೆ ಸಹಕರಿಸದೆ ಹೋದ ಮಾರ್ಕನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ಪೌಲನು ಭಾವಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

38 ಖರೆ ತೆನಿ ಅದ್ದಿ ಜಾವ್ನಗೆತ್ ರ್‍ಹಾತಾನಾ ಮಾರ್ಕ್ ಮನ್ತಲ್ಯಾ ಜುವಾಂವಾನ್ ತೆಂಕಾ ಪಾಂಫಿಲಿಯಾ ಮನ್ತಲ್ಯಾ ಗಾಂವಾಕ್ಡೆ ಸೊಡುನ್ ಗೆಲ್ಯಾನ್, ತೊ ತೆಂಚ್ಯಾ ವಾಂಗ್ಡಾ ಸೆವಾ ಕರುಕ್ ಫಿಡೆ ಯೆವ್ಕ್ ನಾ, ತಸೆ ಹೊವ್ನ್ ತೆಕಾ ಬಲ್ವುನ್ ಘೆವ್ನ್ ಜಾತಲೊ ಪಾವ್ಲುಕ್ ಮನ್ ನತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:38
7 ತಿಳಿವುಗಳ ಹೋಲಿಕೆ  

ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.


ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.


ಕಷ್ಟಕಾಲದಲ್ಲಿ ದ್ರೋಹಿಯಲ್ಲಿಡುವ ನಂಬಿಕೆಯು, ಮುರುಕಹಲ್ಲು ಮತ್ತು ಜಾರುವ ಕಾಲು.


ಎಫ್ರಾಯೀಮ್ ಕುಲದವರು ಬಿಲ್ಲುಗಳಿಂದ ಸಿದ್ಧರಾಗಿ, ಯುದ್ಧಸಮಯದಲ್ಲಿ ಹಿಂದಿರುಗಿ ಓಡಿಹೋದರು.


ಇನ್ನೊಬ್ಬನು ಸಹ, “ಕರ್ತನೇ, ನಾನು ನಿನ್ನನ್ನು ಹಿಂಬಾಲಿಸುತ್ತೇನೆ, ಆದರೆ ಮೊದಲು ನನ್ನ ಮನೆಯವರಿಗೆ ಬೀಳ್ಕೊಟ್ಟು ಬರುವುದಕ್ಕೆ ನನಗೆ ಅಪ್ಪಣೆಯಾಗಬೇಕು” ಅಂದನು.


ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು