ಅಪೊಸ್ತಲರ ಕೃತ್ಯಗಳು 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು; “ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು, ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವುದಕ್ಕೆ ಅವರಿಗೆ ಅಪ್ಪಣೆಕೊಡಬೇಕು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಫರಿಸಾಯ ಪಂಥಕ್ಕೆ ಸೇರಿದ ಕೆಲವು ಭಕ್ತರು ಮಾತ್ರ ಎದ್ದುನಿಂತು, ಅನ್ಯಧರ್ಮೀಯರು ಸುನ್ನತಿಮಾಡಿಸಿಕೊಳ್ಳಲೇಬೇಕು, ಅವರು ಮೋಶೆಯ ನಿಯಮಗಳನ್ನು ಅನುಸರಿಸುವಂತೆ ಆಜ್ಞೆ ಮಾಡಲೇಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆದರೆ ಫರಿಸಾಯ ಮತದವರಲ್ಲಿ ಯೇಸುವನ್ನು ನಂಬಿದ್ದ ಕೆಲವರು ಎದ್ದು - ದೇವರ ಕಡೆಗೆ ತಿರುಗಿಕೊಂಡಿರುವ ಅನ್ಯಜನರಿಗೆ ಸುನ್ನತಿಮಾಡಿಸಬೇಕು ಮತ್ತು ಮೋಶೆಯ ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುವದಕ್ಕೆ ಅವರಿಗೆ ಅಪ್ಪಣೆಕೊಡಬೇಕು ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳಲ್ಲಿ ಕೆಲವರು ಫರಿಸಾಯರ ಗುಂಪಿಗೆ ಸೇರಿದವರಾಗಿದ್ದರು. ಅವರು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದ ವಿಶ್ವಾಸಿಗಳು ಸುನ್ನತಿ ಮಾಡಿಸಿಕೊಳ್ಳಬೇಕು. ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕೆಂದು ನಾವು ಅವರಿಗೆ ಹೇಳಬೇಕು!” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದರೆ ಫರಿಸಾಯರ ಪಂಗಡಕ್ಕೆ ಸೇರಿದ ಕೆಲವು ವಿಶ್ವಾಸಿಗಳು ಎದ್ದು ನಿಂತುಕೊಂಡು, “ಯೆಹೂದ್ಯರಲ್ಲದವರು ಸುನ್ನತಿ ಹೊಂದಬೇಕು ಮತ್ತು ಮೋಶೆಯ ನಿಯಮಕ್ಕೆ ವಿಧೇಯರಾಗಬೇಕು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಖರೆ ದೆವಾಚ್ಯಾ ಲೊಕಾಂತ್ಲಿ ಥೊಡಿ ಲೊಕಾ ಫಾರಿಜೆವಾಂಚ್ಯಾ ತಾಂಡ್ಯಾಚಿ ಲೊಕಾ ಹೊಲ್ಲಿ ಅನಿ ತೆನಿ ಉಟುನ್ ಇಬೆ ರ್‍ಹಾವ್ನ್ “ಜುದೆವಾಂಚಿ ನ್ಹಯ್ ಹೊಲ್ಲ್ಯಾ ಲೊಕಾನಿ ಸುನ್ನತ್ ಕರುನ್ ಘೆವ್ಚೆ ಅನಿ ತೆನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಕ್ ಮಾನುಚೆ ಮನುನ್ ಅಮಿ ತೆಂಕಾ ಸಾಂಗುಚೆ!” ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |