Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವುದಕ್ಕೆ ಸೇರಿ ಬಂದಾಗ, ಅವರಲ್ಲಿ ಬಹು ವಿವಾದವು ನಡೆದ ಮೇಲೆ ಪೇತ್ರನು ಎದ್ದು ಅವರಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರೇಷಿತರು ಮತ್ತು ಸಭಾಪ್ರಮುಖರು ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಪೊಸ್ತಲರೂ ಸಭೆಯ ಹಿರಿಯರೂ ಈ ವಿಷಯವನ್ನು ಕುರಿತು ಆಲೋಚಿಸುವದಕ್ಕೆ ಕೂಡಿ ಬಂದಿರುವಾಗ ಬಹು ವಿವಾದವು ನಡೆದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ, ಅಪೊಸ್ತಲರು ಮತ್ತು ಹಿರಿಯರು ಈ ಸಮಸ್ಯೆಯನ್ನು ಪರಿಶೀಲಿಸಲು ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅಪೊಸ್ತಲರು ಮತ್ತು ಹಿರಿಯರು ಈ ವಿಷಯದ ಕುರಿತಾಗಿ ವಿಚಾರಿಸಲು ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಾನಾ, ಅಪೊಸ್ತಲಾ ಅನಿ ಜಾಂನ್ತಿ ಲೊಕಾ ಹ್ಯಾ ಸಮಸ್ಯಾಚ್ಯಾ ವಿಶಯಾತ್ ಚರ್ಚಾ ಕರುಕ್ ಮನುನ್ ಗೊಳಾ ಹೊವ್ನ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:6
12 ತಿಳಿವುಗಳ ಹೋಲಿಕೆ  

ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.


ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.


ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.


ನಾವು ಕೆಲವರನ್ನು ಆರಿಸಿಕೊಂಡು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತ ಜೀವದ ಹಂಗನ್ನು ತೊರೆದವರಾದ,


ಮರುದಿನ ಪೌಲನು ನಮ್ಮನ್ನು ಕರೆದುಕೊಂಡು ಯಾಕೋಬನ ಬಳಿಗೆ ಹೋದನು. ಸಭೆಯ ಹಿರಿಯರೆಲ್ಲರು ಸಹ ಬಂದರು.


ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.


ಆಗ ಹನ್ನೆರಡು ಮಂದಿ ಅಪೊಸ್ತಲರು ಶಿಷ್ಯರನ್ನು ಒಟ್ಟುಗೂಡಿಸಿ, “ನಾವು ದೇವರ ವಾಕ್ಯೋಪದೇಶವನ್ನು ಬಿಟ್ಟು ಉಪಚಾರಮಾಡುವುದು ಸರಿಯಲ್ಲವಲ್ಲಾ.


ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.


ಹಾಗೆಯೇ ಮಾಡಿ, ಅದನ್ನು ಬಾರ್ನಬನ ಮತ್ತು ಸೌಲರ ಕೈಯಿಂದ ಸಭೆಯ ಹಿರಿಯರಿಗೆ ಕಳುಹಿಸಿಕೊಟ್ಟರು.


ಅವರೊಂದಿಗೆ ಪೌಲ ಮತ್ತು ಬಾರ್ನಬರಿಗೆ ಚರ್ಚೆಯೂ ಮಹಾ ವಿವಾದವೂ ಉಂಟಾದಾಗ ಇದರ ವಿಷಯವಾಗಿ ಪೌಲ, ಬಾರ್ನಬರು ಮತ್ತು ತಮ್ಮಲ್ಲಿ ಬೇರೆ ಕೆಲವರು ಯೆರೂಸಲೇಮಿನಲ್ಲಿದ್ದ ಅಪೊಸ್ತಲರ ಮತ್ತು ಸಭೆಯ ಹಿರಿಯರ ಬಳಿಗೆ ಹೋಗಬೇಕೆಂದು ಸಹೋದರರು ತೀರ್ಮಾನಿಸಿದರು.


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು