Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅಂತೆಯೇ ತನ್ನ ಮನೆಯವರ ಸಮೇತ ದೀಕ್ಷಾಸ್ನಾನವನ್ನು ಪಡೆದಳು. ಅನಂತರ, “ನಾನು ಪ್ರಭುವಿನ ನಿಜವಾದ ವಿಶ್ವಾಸಿಯೆಂದು ನೀವು ಒಪ್ಪಿಕೊಳ್ಳುವುದಾದರೆ ನನ್ನ ಮನೆಗೆ ಬಂದು ತಂಗಿರಿ,” ಎಂದು ನಮ್ಮನ್ನು ಒತ್ತಾಯಪೂರ್ವಕವಾಗಿ ಆಹ್ವಾನಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ ಆಕೆ - ನಾನು ಕರ್ತನನ್ನು ನಂಬಿದವಳೆಂದು ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಇರ್ರಿ ಎಂದು ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಕೆ ಮತ್ತು ಆಕೆಯ ಮನೆಯಲ್ಲಿ ವಾಸವಾಗಿದ್ದ ಎಲ್ಲಾ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆಕೆಯು, “ನಾನು ಪ್ರಭು ಯೇಸುವಿನಲ್ಲಿ ನಿಜವಾದ ವಿಶ್ವಾಸಿಯೆಂದು ನೀವು ಯೋಚಿಸುವುದಾಗಿದ್ದರೆ, ನನ್ನ ಮನೆಗೆ ಬಂದು ತಂಗಿರಿ” ಎಂದು ಕೇಳಿಕೊಂಡು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಕೆಯೂ ಆಕೆಯ ಮನೆಯವರೂ ದೀಕ್ಷಾಸ್ನಾನ ಹೊಂದಿದಾಗ, “ನಾನು ಕರ್ತ ಯೇಸುವಿಗೆ ನಂಬಿಗಸ್ತಳೆಂದು ನೀವು ತೀರ್ಮಾನಿಸಿಕೊಂಡರೆ, ಬಂದು ನನ್ನ ಮನೆಯಲ್ಲಿ ತಂಗಿರಿ,” ಎಂದು ನಮ್ಮನ್ನು ಒತ್ತಾಯ ಮಾಡಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಲಿಡಿಯಾ ಅನಿ ತೆಚ್ಯಾ ಘರಾತ್ ಹೊತ್ತ್ಯಾ ಸಗ್ಳ್ಯಾ ಲೊಕಾನಿಬಿ ಬಾಲ್ತಿಮ್ ಘೆಟ್ಲ್ಯಾನಿ, ಅನಿ ತೆನಿ ಮಿಯಾ ಧನಿಯಾ ಜೆಜುಚ್ಯಾ ವರ್‍ತಿ ಖರೊ ವಿಶ್ವಾಸ್ ಥವಲ್ಲಿ ಮನುನ್ ತುಮಿ ಯೆವಜ್ತ್ಯಾಸಿ ಹೊಲ್ಯಾರ್ ಮಾಜ್ಯಾ ಘರಾಕ್ ಯೆವ್ನ್ ರ್‍ಹಾವಾ ಮನುನ್ ಒತ್ತಾಯ್ ಕರ್‍ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:15
32 ತಿಳಿವುಗಳ ಹೋಲಿಕೆ  

ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.


ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.


ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.


ಆದರೆ ಅವರು, “ನಮ್ಮ ಸಂಗಡ ಇರು. ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂದಿತು” ಎಂದು ಆತನಿಗೆ ಹೇಳಿ ಬಲವಂತ ಮಾಡಲು, ಆತನು ಅವರ ಕೂಡ ಇರುವುದಕ್ಕೆ ಹೋದನು.


ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.


ಆದುದರಿಂದ, ನಾವು ಸತ್ಯಕ್ಕೆ ಸಹಕಾರಿಗಳಾಗುವಂತೆ, ಅಂಥವರನ್ನು ಸೇರಿಸಿಕೊಳ್ಳುವ ಹಂಗಿನಲ್ಲಿದ್ದೇವೆ.


ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ನೀನು ನನ್ನನ್ನು ಜೊತೆಗಾರನೆಂದು ಭಾವಿಸುವುದಾದರೆ ನನ್ನನ್ನು ಸೇರಿಸಿಕೊಳ್ಳುವ ಪ್ರಕಾರವೇ ಅವನನ್ನು ಸೇರಿಸಿಕೋ.


ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಬಂಧನದಲ್ಲಿರುವಾಗಲೂ, ಸುವಾರ್ತೆಯ ಕುರಿತಾದ ವಾದ-ಪ್ರತಿವಾದಗಳಲ್ಲಿಯು ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿರಿಸಿಕೊಂಡಿದ್ದೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವುದೇನಂದರೆ,


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.


ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ.


ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟು ದೀಕ್ಷಾಸ್ನಾನ ಮಾಡಿಸಿಕೊಂಡರು.


ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಆಗ ಆ ಯಜಮಾನನು ತನ್ನ ಆಳಿಗೆ ಹೇಳಿದ್ದೇನೆಂದರೆ, ‘ನೀನು ಹಾದಿಗಳಿಗೂ ಬೀದಿಗಳಿಗೂ ಹೋಗಿ ಅಲ್ಲಿ ಸಿಕ್ಕಿದವರನ್ನು ಬಲವಂತಮಾಡಿ ಒಳಕ್ಕೆ ಕರೆದುಕೊಂಡು ಬಾ, ನನ್ನ ಮನೆ ತುಂಬಲಿ.


ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.


ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.


ಅವನು, “ಒಲ್ಲೆನು, ಊಟಮಾಡುವುದಿಲ್ಲ” ಅಂದನು. ಆದರೆ ಅವನ ಸೇವಕರೂ ಆ ಸ್ತ್ರೀಯೂ ಬಹಳವಾಗಿ ಬೇಡಿಕೊಂಡದ್ದರಿಂದ ಅವನು ಅವರ ಮಾತಿಗೆ ಒಪ್ಪಿಕೊಂಡು ನೆಲದಿಂದೆದ್ದು ಮಂಚದ ಮೇಲೆ ಕುಳಿತುಕೊಂಡನು.


ದೇವರು ನನಗೆ ಕೃಪೆಯನ್ನು ತೋರಿದ್ದರಿಂದ ನನಗೆ ಸಮೃದ್ಧಿಯುಂಟಾಯಿತು. ಆದಕಾರಣ ನಾನು ಸಮರ್ಪಿಸುವ ಉಡುಗೊರೆಯನ್ನು ನೀನು ದಯವಿಟ್ಟು ಅಂಗೀಕರಿಸಬೇಕು” ಎಂದು ಹೇಳಿ ಏಸಾವನನ್ನು ಬಲವಂತ ಮಾಡಿದ್ದರಿಂದ ಅವನು ಆ ಉಡುಗೊರೆಯನ್ನು ತೆಗೆದುಕೊಂಡನು.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,


ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು