Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಎಚ್ಚೆತ್ತ ಅಧಿಕಾರಿ ಸೆರೆಮನೆಯ ಬಾಗಿಲುಗಳೆಲ್ಲಾ ತೆರೆದಿರುವುದನ್ನು ಕಂಡನು. ಕೈದಿಗಳೆಲ್ಲರು ತಪ್ಪಿಸಿಕೊಂಡಿರುವರೆಂದು ಭಾವಿಸಿ ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳುವುದರಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಸೆರೆಮನೆಯ ಅಧಿಕಾರಿ ಎಚ್ಚತ್ತುಕೊಂಡು, ಸೆರೆಮನೆಯ ಬಾಗಿಲುಗಳು ತೆರೆದಿರುವುದನ್ನು ಕಂಡು, ಸೆರೆಯಾಳುಗಳು ತಪ್ಪಿಸಿಕೊಂಡು ಹೋಗಿರಬಹುದೆಂದು ಭಾವಿಸಿ, ತನ್ನ ಖಡ್ಗವನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ತನ್ನಾ ಬಂದಿಖಾನ್ಯಾಚೊ ಅಧಿಕಾರಿ ನಿಜೆತ್ನಾ ಜಾಗೊ ಹೊಲೊ, ದಾರಾ ಸಗ್ಳಿ ಉಗಡಲ್ಲಿ ಹೊತ್ತಿ ಬಗುನ್ ಅತ್ತಾ ಸಗ್ಳಿ ಚೊರಾಬಿ ಚುಕ್ವುನ್ ಘೆವ್ನ್ ಪಳುನ್ ಜಾವ್ಕ್ ಫಿರೆ ಮನುನ್ ಚಿಂತುನ್, ತೆನಿ ಅಪ್ಲೊ ಕೊಯ್ತೊ ಘೆವ್ನ್ ಜಿವ್ ಕಾಡುನ್ ಘೆವ್ಚೆ ಮನುನ್ ಹೊತ್ತ್ಯಾ ತನ್ನಾಚ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:27
9 ತಿಳಿವುಗಳ ಹೋಲಿಕೆ  

ಹೆರೋದನು ಅವನನ್ನು ಹುಡುಕಿಸಿ ಅವನು ಸಿಕ್ಕಲಿಲ್ಲವಾದ್ದರಿಂದ, ಕಾವಲುಗಾರರನ್ನು ವಿಚಾರಣೆಮಾಡಿ, ಅವರಿಗೆ ಮರಣದಂಡನೆಯನ್ನು ವಿಧಿಸಿದನು. ಬಳಿಕ ಹೆರೋದನು ಯೂದಾಯದಿಂದ ಕೈಸರೈಗೆ ಹೋಗಿ ಅಲ್ಲಿ ಕೆಲವು ಕಾಲ ಇದ್ದನು.


ಆಗ ಅವನು ದೇವಾಲಯದಲ್ಲಿ ಆ ಹಣವನ್ನು ಎಸೆದು ಹೊರಟುಹೋಗಿ ನೇಣು ಹಾಕಿಕೊಂಡು ಸತ್ತನು.


ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.


ಅಹೀತೋಫೆಲನು ತನ್ನ ಆಲೋಚನೆಯು ನಡೆಯಲಿಲ್ಲವೆಂದು ತಿಳಿದಾಗ ಅವನು ಕತ್ತೆಗೆ ತಡಿಹಾಕಿಸಿ, ಅದರ ಮೇಲೆ ತನ್ನ ಊರಿಗೆ ಹೋದನು. ತನ್ನ ಮನೆಯಲ್ಲಿ ವ್ಯವಸ್ಥೆಮಾಡಿದ ನಂತರ, ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅವನು ಕೂಡಲೆ ತನ್ನ ಆಯುಧ ಹೊರುವವನನ್ನು ಕರೆದು ಅವನಿಗೆ, “ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ನಾನು ಹೆಂಗಸಿನ ಕೈಯಿಂದ ಸತ್ತನೆಂದು ಜನರು ಹೇಳಾರು” ಎನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದುಹಾಕಿದನು.


ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.


ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು