Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಬಳಿಕ ಪೌಲ ಮತ್ತು ಸೀಲರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಬಡಿಸಿದನು. ದೇವರಲ್ಲಿ ವಿಶ್ವಾಸವಿಡುವ ಸದವಕಾಶ ದೊರಕಿದ್ದಕ್ಕಾಗಿ ಅವನೂ ಅವನ ಮನೆಯವರೆಲ್ಲರೂ ಉಲ್ಲಾಸಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ತರುವಾಯ ಅವರನ್ನು ತನ್ನ ಮನೆಗೆ ಕರಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ನಂಬಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಇದಾದ ಮೇಲೆ ಅವನು ಪೌಲ ಸೀಲರನ್ನು ಮನೆಗೆ ಕರೆದೊಯ್ದು ಅವರಿಗೆ ಊಟಮಾಡಿಸಿದನು. ಆ ಜನರೆಲ್ಲರೂ ಪ್ರಭುವಿನಲ್ಲಿ ನಂಬಿಕೆ ಇಟ್ಟದ್ದರಿಂದ ಬಹ ಸಂತೋಷಭರಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಸೆರೆಮನೆಯ ಅಧಿಕಾರಿ ಅವರನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅವರಿಗೆ ಊಟಬಡಿಸಿದನು ಮತ್ತು ಅವನೂ ತನ್ನ ಮನೆಯವರೆಲ್ಲರೂ ದೇವರಲ್ಲಿ ವಿಶ್ವಾಸವಿಟ್ಟಿದ್ದಕ್ಕಾಗಿ ಉಲ್ಲಾಸಗೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಯೆವ್ಡೆ ಹೊಲ್ಲ್ಯಾ ತನ್ನಾ, ತೆನಿ ಸಗ್ಳಿ ಲೊಕಾ ಧನಿಯಾಚೆರ್ ವಿಶ್ವಾಸ್ ಥವಲ್ಲ್ಯಾಸಾಟಿ ಲೈ ಕುಶಿ ಹೊಲೆ ಮಾನಾ ತೆನಿ ಪಾವ್ಲುಕ್ ಅನಿ ಸಿಲಾಸಾಕ್ ಅಪ್ಲ್ಯಾ ಘರಾಕ್ ಬಲ್ವುನ್ ನ್ಹೆವ್ನ್ ಜೆವಾನ್ ಕರಸ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:34
26 ತಿಳಿವುಗಳ ಹೋಲಿಕೆ  

ನಿರೀಕ್ಷೆಯನ್ನು ಕೊಡುವ ದೇವರು ಪವಿತ್ರಾತ್ಮನ ಶಕ್ತಿಯಿಂದ ಸಮೃದ್ಧವಾದ ನಿರೀಕ್ಷೆಯುಳ್ಳವರಾಗಿ ನಂಬುವುದರಿಂದ ಉಂಟಾಗುವ ಸಂತೋಷವನ್ನೂ ಮನಶ್ಯಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಲ್ಲಿ, ನೀವು ಪವಿತ್ರಾತ್ಮನಲ್ಲಿ ಬಲಗೊಂಡವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.


ಇಷ್ಟು ಮಾತ್ರವಲ್ಲದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಸಂಧಾನವಾದದ್ದರಿಂದ ಆತನ ಮುಖಾಂತರ ದೇವರಲ್ಲಿ ಉಲ್ಲಾಸಪಡುತ್ತೇವೆ.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


ನನ್ನ ಪ್ರಿಯ ಮಕ್ಕಳೇ, ನೀವು ಬರೀ ಮಾತಿನಿಂದಾಗಲಿ, ಬಾಯುಪಚಾರದಿಂದಾಗಲಿ, ಪ್ರೀತಿಸುವವರಾಗಿರದೆ ಕ್ರಿಯೆಗಳಿಂದಲೂ ಮತ್ತು ನಿಜ ಪ್ರೀತಿಯಿಂದ ಪ್ರೀತಿಸುವವರಾಗಿರಬೇಕು.


ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವುದಿಲ್ಲ, ನಿಮ್ಮ ಲೆಕ್ಕಕ್ಕೆ ಸಮೃದ್ಧಿಯುಂಟಾಗುವ ಫಲವನ್ನೇ ಅಪೇಕ್ಷಿಸುತ್ತೇನೆ.


ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ, ಸಂತೋಷಪಡಿರಿ ಎಂದು ಪುನಃ ಹೇಳುತ್ತೇನೆ.


ಈಗ ನಾವು ನೆಲೆಗೊಂಡಿರುವ ದೇವರ ಕೃಪಾಶ್ರಯಕ್ಕೆ ಆತನ ಮುಖಾಂತರವೇ ನಂಬಿಕೆಯಿಂದ ಸೇರಿದವರಾಗಿದ್ದೇವೆ ಮತ್ತು ದೇವರ ಮಹಿಮೆಯ ನಿರೀಕ್ಷೆಯಲ್ಲಿ ಉಲ್ಲಾಸಪಡುತ್ತೇವೆ.


ಅವನು ನಿನಗೆ ಸಂದೇಶವನ್ನು ಹೇಳುವನು, ಆ ಸಂದೇಶದಿಂದ ನಿನಗೂ ನಿನ್ನ ಮನೆಯವರೆಲ್ಲರಿಗೂ ರಕ್ಷಣೆಯಾಗುವದು” ಎಂದು ಹೇಳಿದನೆಂಬುದಾಗಿ ತಿಳಿಸಿದನು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಆ ಕಂಚುಕಿಯು ಫಿಲಿಪ್ಪನನ್ನು ಪುನಃ ಕಾಣಲಿಲ್ಲ. ಅವನು ಸಂತೋಷವುಳ್ಳವನಾಗಿ ತನ್ನ ಪ್ರಯಾಣವನ್ನು ಮುಂದುವರಿಸಿದನು.


ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.


ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.


ತರುವಾಯ ಲೇವಿಯು ತನ್ನ ಮನೆಯಲ್ಲಿ ಯೇಸುವಿಗೆ ಒಂದು ದೊಡ್ಡ ಔತಣವನ್ನು ಏರ್ಪಡಿಸಿರಲು, ಸುಂಕದವರೂ ಇತರರೂ ಗುಂಪಾಗಿ ಕೂಡಿ ಬಂದು ಅವರ ಸಂಗಡ ಊಟಕ್ಕೆ ಕುಳಿತುಕೊಂಡಿದ್ದರು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.


ನೀವು ಆನಂದಭರಿತರಾಗಿ ಹೊರಡುವಿರಿ, ಸಮಾಧಾನದಿಂದ ಮೆರವಣಿಗೆಯಾಗಿ ಬರುವಿರಿ; ಬೆಟ್ಟ ಗುಡ್ಡಗಳು ನಿಮ್ಮ ಮುಂದೆ ಜಯಘೋಷ ಮಾಡುವವು.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,


ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.


ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು