Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಮಾರನೆಯ ಬೆಳಿಗ್ಗೆ ನ್ಯಾಯಾಧಿಪತಿಗಳು ಜವಾನರ ಮುಖಾಂತರ, “ಈ ವ್ಯಕ್ತಿಗಳನ್ನು ಬಿಟ್ಟುಬಿಡು,” ಎಂದು ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಬೆಳಗಾದ ಮೇಲೆ ಅಧಿಪತಿಗಳು ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಜವಾನರ ಕೈಯಲ್ಲಿ ಹೇಳಿಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಮರುದಿನ ಮುಂಜಾನೆ ನಾಯಕರು ಸೆರೆಮನೆಯ ಅಧಿಕಾರಿಗೆ, “ಈ ಜನರನ್ನು ಬಿಟ್ಟುಬಿಡು!” ಎಂದು ಕೆಲವು ಸೈನಿಕರ ಮೂಲಕ ಹೇಳಿ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ದುಸ್ರ್ಯಾಂದಿಸಿ ಸಕ್ಕಾಳಿ ರೊಮಾಚ್ಯಾ ಮುಖಂಡಾನಿ ಬಂಧಿಖಾನ್ಯಾಚ್ಯಾ ಅಧಿಕಾರಿಕ್ ಸೈನಿಕಾಂಚ್ಯಾಕ್ನಾ ಹ್ಯಾ ಲೊಕಾಕ್ನಿ ಸುಟ್ಕಾ ಕರ್ ಮನುನ್ ಸಾಂಗುನ್ ಧಾಡಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:35
9 ತಿಳಿವುಗಳ ಹೋಲಿಕೆ  

ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.


ನಡೆದಿದ್ದ ಸೂಚಕ ಕಾರ್ಯಕ್ಕೋಸ್ಕರ ಜನರೆಲ್ಲರು ದೇವರನ್ನು ಕೊಂಡಾಡುತ್ತಿದ್ದ ಕಾರಣ ಅವರ ದೆಸೆಯಿಂದ ಸಭೆಯವರು ಅಪೊಸ್ತಲರನ್ನು ದಂಡಿಸತಕ್ಕ ಉಪಾಯವನ್ನು ಕಾಣದೆ ಅವರನ್ನು ಇನ್ನಷ್ಟು ಬೆದರಿಸಿ ಬಿಟ್ಟು ಬಿಟ್ಟರು.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಅವರು ನಿಮ್ಮನ್ನು ಸಭಾಮಂದಿರಗಳಿಗೂ, ಸಭಾಮಂದಿರಗಳ ಅಧಿಕಾರಿಗಳ ಎದುರಿಗೂ, ಅಧಿಪತಿಗಳ ಎದುರಿಗೂ, ಹಿಡಿದುಕೊಂಡು ಹೋಗುವಾಗ ಹೇಗೆ ಉತ್ತರ ಕೊಡಬೇಕು? ಏನು ಉತ್ತರ ಕೊಡಬೇಕು? ಏನು ಹೇಳಬೇಕು? ಎಂದು ಚಿಂತೆಮಾಡಬೇಡಿರಿ.


ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.


ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.


ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.


ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು