Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕೂಡಲೇ ಸಹೋದರರು ರಾತ್ರಿಯಲ್ಲಿ ಪೌಲ ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತ್ಯಾ ದಿಸಾ ರಾತ್ತಿನಿ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲುಕ್ ಅನಿ ಸಿಲಾಸಾಕ್ ಬೆರೊಯಾಕ್ ಧಾಡ್ಲ್ಯಾನಿ, ಥೈ ಹೆನಿ ದೊಗಾ ಜುದೆವಾಂಚ್ಯಾ ಲೊಕಾಂಚ್ಯಾ ಸಿನಾಗೊತ್ ಗೆಲೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:10
16 ತಿಳಿವುಗಳ ಹೋಲಿಕೆ  

ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಪೌಲನು ತನ್ನ ಪದ್ಧತಿಯ ಪ್ರಕಾರ ಅಲ್ಲಿದ್ದವರ ಬಳಿಗೆ ಹೋಗಿ ಮೂರು ಸಬ್ಬತ್ ದಿನಗಳಲ್ಲಿ ದೇವರ ವಾಕ್ಯದಿಂದ ಅವರ ಸಂಗಡ ವಾದಿಸಿ,


ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.


ಅನಂತರ ಯೋನಾತಾನನು ದಾವೀದನಿಗೆ, “ಸಮಾಧಾನದಿಂದ ಹೋಗು. ನಾವು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟು ಒಡಂಬಡಿಕೆಯನ್ನು ಮಾಡಿಕೊಂಡಿದ್ದೇವಲ್ಲಾ. ಆತನೇ ನನಗೂ ನಿನಗೂ, ನನ್ನ ಸಂತಾನಕ್ಕೂ ನಿನ್ನ ಸಂತಾನಕ್ಕೂ ಸದಾ ಸಾಕ್ಷಿಯಾಗಿರಲಿ” ಎಂದು ಹೇಳಿದನು. ತರುವಾಯ ದಾವೀದನು ಹೊರಟುಹೋದನು. ಯೋನಾತಾನನು ಊರೊಳಕ್ಕೆ ಹೋದನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಅವನು ಕೂಡಲೇ, ಸಭಾಮಂದಿರಗಳಲ್ಲಿ ಯೇಸುವಿನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರುವುದಕ್ಕೆ ಪ್ರಾರಂಭಮಾಡಿದನು.


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು