Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ ತಿಮೊಥೆಯನೂ ಅಲ್ಲೇ ನಿಂತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ವಿಶ್ವಾಸಿಗಳು ಪೌಲನನ್ನು ಸಮುದ್ರತೀರಕ್ಕೆ ಆ ಕೂಡಲೇ ಕಳುಹಿಸಿದರು. ಆದರೆ ಸೀಲ ತಿಮೊಥೆಯರು ಬೆರೋಯದಲ್ಲಿ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸಹೋದರರು ಕೂಡಲೇ ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೆ ಬೆರೋಯದಲ್ಲಿಯೇ ಉಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊವ್ನ್, ದೆವಾಚ್ಯಾ ತಾಂಡ್ಯಾಚ್ಯಾ ಲೊಕಾನಿ ಪಾವ್ಲುಕ್ ಸಮುಂದ್ರಾಚ್ಯಾ ದಂಡೆಕ್ಲ್ಯಾ ಗಾಂವಾಕ್ ಧಾಡುನ್ ದಿಲ್ಯಾನಿ, ಖರೆ ಸಿಲಾಸ್ ಅನಿ ತಿಮೊಥಿ ಬೆರೊಯ್ ಶಾರಾತುಚ್ ರಾಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:14
16 ತಿಳಿವುಗಳ ಹೋಲಿಕೆ  

ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.


ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.


ಆಗ ಅಪೊಸ್ತಲರೂ, ಸಭೆಯ ಹಿರಿಯರೂ ಸರ್ವಸಭೆಯ ಅನುಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಮತ್ತು ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವುದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ, ಸೀಲನನ್ನೂ ಆರಿಸಿಕೊಂಡು,


“ನಿಮ್ಮನ್ನು ಹಿಂದಟ್ಟುವವರಿಗೆ ನೀವು ಸಿಕ್ಕದಂತೆ ಆ ಬೆಟ್ಟಕ್ಕೆ ಓಡಿ ಹೋಗಿ ಅಲ್ಲಿ ಮೂರು ದಿನ ಅಡಗಿಕೊಂಡಿದ್ದು, ತರುವಾಯ ಅವರು ಹಿಂದಿರುಗಿದ ಮೇಲೆ ನಿಮ್ಮ ದಾರಿ ಹಿಡಿದು ಹೋಗಿರಿ” ಎಂದಳು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.


ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು