Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಪೌಲನನ್ನು ಸಾಗಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡುಹೋಗಿ - ಸೀಲನನ್ನೂ ತಿಮೊಥೆಯನನ್ನೂ ಕೂಡಿದ ಮಟ್ಟಿಗೆ ಬೇಗ ನನ್ನ ಬಳಿಗೆ ಬರಹೇಳಿರಿ ಎಂಬ ಅಪ್ಪಣೆಯನ್ನು ಅವನಿಂದ ಹೊಂದಿ ಹೊರಟುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪೌಲನೊಂದಿಗೆ ಹೋದ ವಿಶ್ವಾಸಿಗಳು ಅವನನ್ನು ಅಥೆನ್ಸ್ ಪಟ್ಟಣಕ್ಕೆ ಕರೆದುಕೊಂಡು ಹೋದರು. ಈ ಸಹೋದರರು ಪೌಲನಿಂದ ಸೀಲ ತಿಮೊಥೆಯರಿಗೆ ಒಂದು ಸಂದೇಶವನ್ನು ತೆಗೆದುಕೊಂಡು ಹಿಂತಿರುಗಿ ಬಂದರು. “ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬನ್ನಿರಿ” ಎಂಬುದೇ ಆ ಸಂದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಪೌಲನನ್ನು ಬಿಟ್ಟು ಬರಲು ಹೋದವರು ಅವನ ಜೊತೆ ಅಥೇನೆ ಪಟ್ಟಣದವರೆಗೆ ಹೋದರು. ಸೀಲ ಮತ್ತು ತಿಮೊಥೆಯರು ಸಾಧ್ಯವಾದಷ್ಟು ಬೇಗನೇ ತನ್ನ ಬಳಿ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪಾವ್ಲುಕ್ ತೆಚ್ಯಾ ವಾಂಗ್ಡಾ ಗೆಲ್ಲ್ಯಾ ದೆವಾಚ್ಯಾ ತಾಂಡ್ಯಾತ್ಲ್ಯಾ ಲೊಕಾನಿ ಅಥೆನ್ಸ್ ಶಾರಾಕ್ ಬಲ್ವುನ್ ನ್ಹೆಲ್ಯಾನಿ , ತೆನಿ ಫಾಟಿ ಪರ್ತುನ್ ಯೆತಾನಾ ಪಾವ್ಲುಕ್ನಾ ಸಿಲಾಸ್ ಅನಿ ತಿಮೊಥಿಕ್ ಎಕ್ ಖಬರ್ ಘೆವ್ನ್ ಯೆಲ್ಯಾನಿ, “ಹೊಲ್ಲ್ಯಾ ಯೆವ್ಡೆ ಲಗ್ಗುನಾಚ್ ಮಾಜ್ಯಾ ಜಗ್ಗೊಳ್ ಯೆವಾ” ಮನ್ತಲಿಚ್ ತಿ ಖಬರ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:15
11 ತಿಳಿವುಗಳ ಹೋಲಿಕೆ  

ಆದುದರಿಂದ ನಾನು ಇನ್ನು ತಾಳಲಾರದೆ ಅಥೇನೆಯಲ್ಲಿ ಒಬ್ಬಂಟಿಗನಾಗಿಯೇ ಇರುವುದು ಒಳ್ಳೆಯದೆಂದು ಯೋಚಿಸಿ,


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.


ಅಥೇನೆಯರೂ ಅಲ್ಲಿ ವಾಸವಾಗಿದ್ದ ಪರಸ್ಥಳದವರೂ ಹೊಸ ಹೊಸ ಸಂಗತಿಗಳನ್ನು ಹೇಳುವುದನ್ನೂ, ಕೇಳುವುದನ್ನೂ ಬಿಟ್ಟು, ಬೇರೆ ಯಾವುದಕ್ಕೂ ಸಮಯ ಕೊಡುತ್ತಿರಲಿಲ್ಲ.


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.


ಆದುದರಿಂದ ಸಭೆಯವರು ಅವರನ್ನು ಸಾಗ ಕಳುಹಿಸಲು, ಅವರು ಫೊಯಿನಿಕೆ ಮತ್ತು ಸಮಾರ್ಯ ಸೀಮೆಗಳನ್ನು ಹಾದು ಹೋಗುತ್ತಿರುವಾಗ ಅನ್ಯಜನರು ಕರ್ತನ ಕಡೆಗೆ ತಿರುಗಿಕೊಂಡ ಸಂಗತಿಯನ್ನು ಅಲ್ಲಿದ್ದ ಸಹೋದರರಿಗೆ ವಿವರವಾಗಿ ಹೇಳಿ ಅವರೆಲ್ಲರನ್ನು ಬಹಳವಾಗಿ ಸಂತೋಷಪಡಿಸಿದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.


ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು