Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ - ನೀನು ಹೇಳುವ ಈ ನೂತನತರವಾದ ಉಪದೇಶವನ್ನು ನಾವು ತಿಳಿಯಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರು ಪೌಲನನ್ನು ಅರಿಯೊಪಾಗ ನ್ಯಾಯಸಭೆಗೆ ಕರೆದುಕೊಂಡು ಹೋದರು. ಅವರು ಅವನಿಗೆ, “ನೀನು ಉಪದೇಶಿಸುತ್ತಿರುವ ಹೊಸ ತತ್ವವನ್ನು ದಯವಿಟ್ಟು ನಮಗೆ ವಿವರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ತೆನಿ ಪಾವ್ಲುಕ್ ಅರಿಯೊಪಾಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಜಾಗ್ಯಾಕ್ ಬಲ್ವುನ್ ನ್ಹೆಲಾನಿ, ತೆಕಾ “ತಿಯಾ ಶಿಕಾಪ್ ಕರುಲಾಗಲೊ ನವೊ ತತ್ವ ದಯಾ ಕರುನ್ ಅಮ್ಕಾ ಸಾಂಗ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:19
12 ತಿಳಿವುಗಳ ಹೋಲಿಕೆ  

ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.


ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.


ಆಗ ಅಗ್ರಿಪ್ಪನು, ಪೌಲನಿಗೆ; “ನೀನು ನಿನ್ನ ಪರವಾಗಿ ಮಾತನಾಡಬಹುದು” ಅನ್ನಲು, ಪೌಲನು ಕೈಯೆತ್ತಿ, ಪ್ರತಿವಾದ ಮಾಡಿದ್ದೇನಂದರೆ;


ಅದಕ್ಕೆ ಅಗ್ರಿಪ್ಪನು; “ಆ ಮನುಷ್ಯನು ಹೇಳಿಕೊಳ್ಳುವುದನ್ನು ಕೇಳುವುದಕ್ಕೆ ನನಗೂ ಮನಸ್ಸಿದೆ” ಎಂದು ಹೇಳಲು, ಫೆಸ್ತನು; “ನಾಳೆ ಕೇಳಬಹುದು” ಎಂದನು.


ಕೆಲವು ದಿನಗಳಾದ ಮೇಲೆ ಫೇಲಿಕ್ಸನು, ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಬಂದು, ಪೌಲನನ್ನು ಕರೆಯಿಸಿಕೊಂಡು ಕ್ರಿಸ್ತ ಯೇಸುವಿನಲ್ಲಿಡತಕ್ಕ ನಂಬಿಕೆಯ ವಿಷಯವಾಗಿ ಅವನು ಹೇಳಿದ ಮಾತುಗಳನ್ನು ಕೇಳಿದನು.


ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.


ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಕರೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವಿರಿ.


ಕೆಲವರು ಅವನನ್ನು ಸೇರಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊಪಾಗದ ಸಭೆಯವನಾದ ದಿಯೊನುಸ್ಯನೂ, ದಾಮರಿಯೆಂಬಾಕೆಯೂ ಹಾಗು ಇನ್ನೂ ಕೆಲವರೂ ಇದ್ದರು.


ಸಹಸ್ರಾಧಿಪತಿಯು ಅವನನ್ನು ಕೈಹಿಡಿದು ಒಂದು ಕಡೆಗೆ ಏಕಾಂತವಾಗಿ ಕರೆದುಕೊಂಡು ಹೋಗಿ; “ನೀನು ನನಗೆ ಹೇಳಬೇಕಾದದ್ದು ಏನು?” ಎಂದು ಕೇಳಿದನು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ಆಮೇಲೆ ಬಂದು ವಿಚಾರಿಸಿರಿ” ಎಂದು ಕಾವಲುಗಾರನು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು