ಅಪೊಸ್ತಲರ ಕೃತ್ಯಗಳು 17:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ಪಟ್ಟಣದಲ್ಲಿ ನಾನು ತಿರುಗಾಡುತ್ತಾ, ನೀವು ಪೂಜಿಸುವ ವಿಗ್ರಹಗಳನ್ನು ಗಮನಿಸುತ್ತಾ ಇದ್ದಾಗ ಒಂದು ಬಲಿಪೀಠವು ಕಣ್ಣಿಗೆ ಬಿದ್ದಿತು. ಅದರ ಮೇಲೆ ‘ಅಜ್ಞಾತ ದೇವರಿಗೆ’ ಎಂಬ ಲಿಖಿತವಿತ್ತು. ನೀವು ಅರಿಯದೆ ಆರಾಧಿಸುವ ಆ ದೇವರನ್ನೇ ಅರುಹಿಸಲು ನಾನು ಬಂದಿರುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ತಿಳಿಯದ ದೇವರಿಗೆ ಎಂದು ಬರೆದಿತ್ತು. ಆದಕಾರಣ ನೀವು ಯಾವದನ್ನು ತಿಳಿಯದೆ ಪೂಜಿಸುತ್ತೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಾನು ನಿಮ್ಮ ಪಟ್ಟಣದಲ್ಲಿ ನಡೆದು ಹೋಗುವಾಗ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಕಂಡೆನು. ಒಂದು ಯಜ್ಞವೇದಿಕೆಯ ಮೇಲೆ, ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು. ನಿಮಗೆ ಗೊತ್ತಿಲ್ಲದ ದೇವರನ್ನು ನೀವು ಆರಾಧಿಸುತ್ತಿದ್ದೀರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನಾನು ಸುತ್ತಮುತ್ತಲೂ ತಿರುಗಾಡುತ್ತಾ, ನಿಮ್ಮ ಆರಾಧನಾ ವಿಗ್ರಹಗಳನ್ನು ಲಕ್ಷ್ಯವಿಟ್ಟು ಗಮನಿಸಿದಾಗ, ‘ತಿಳಿಯದ ದೇವರಿಗೆ’ ಎಂಬ ಬರಹವಿದ್ದ ಬಲಿಪೀಠವನ್ನು ನೋಡಿದೆನು. ಆದ್ದರಿಂದ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿರುವಿರೋ ಅದನ್ನೇ ನಾನು ನಿಮಗೆ ಪ್ರಕಟಿಸುತ್ತೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ಮಿಯಾ ತುಮ್ಚ್ಯಾ ಶಾರಾತ್ ಚಲುನ್ ಜಾಯ್ತ್ ರಾತಾನಾ ತುಮಿ ಫುಜ್ಯಾ ಕರ್‍ತಲಿ ದೆವಾಂಚಿ ಮುರ್ತಿಯಾ ಬಗಟ್ಲೊ ಎಕ್ ಬಲಿ ಭೆಟ್ವುತಲ್ಯಾ ಜಗ್ಯಾಕ್ “ಗೊತ್ತ್ ನತ್ತ್ಯಾ ದೆವಾಕ್” ಮನುನ್ ಲಿವಲ್ಲೆ ಹೊತ್ತೆ ತುಮ್ಕಾ ಗೊತ್ತ್ ನತ್ತ್ಯಾ ದೆವಾಕ್ ತುಮಿ ಆರಾಧನ್ ಕರುಲ್ಲ್ಯಾಸಿ, ತ್ಯಾ ದೆವಾಚ್ಯಾ ವಿಶಯಾತ್ ಮಿಯಾ ತುಮ್ಕಾ ಸಾಂಗ್ತಾ. ಅಧ್ಯಾಯವನ್ನು ನೋಡಿ |