Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಒಂದು ವೇಳೆ ಅವರು ತಡವಾಗಿಯಾದರೂ ತನ್ನನ್ನು ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಜನರು ತಮ್ಮನ್ನು ಅರಸಬೇಕೆಂಬುದೇ ಅವರ ಉದ್ದೇಶ; ಹೀಗಾದರೂ ತಮ್ಮನ್ನು ಅರಸಿ ಸಾಕ್ಷಾತ್ಕರಿಸಿಕೊಂಡಾರು ಎಂದು ದೇವರು ಹೀಗೆ ಮಾಡಿದರು. ಆದರೂ, ನಮ್ಮಲ್ಲಿ ಯಾರೊಬ್ಬರಿಂದಲೂ ದೇವರು ದೂರವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಒಂದು ವೇಳೆ ಅವರು ತಡಕಾಡಿ ಕಂಡುಕೊಂಡಾರೇನೋ ಎಂದು ತನ್ನನ್ನು ಹುಡುಕುವವರನ್ನಾಗಿ ಮಾಡಿದನು. ಆತನು ನಮ್ಮಲ್ಲಿ ಒಬ್ಬನಿಗೂ ದೂರವಾದವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಜನರು ತನ್ನನ್ನು ಹುಡುಕಬೇಕೆಂಬುದು ದೇವರ ಉದ್ದೇಶವಾಗಿತ್ತು. ತನಗಾಗಿ ಸುತ್ತಮುತ್ತಲೆಲ್ಲಾ ಹುಡುಕಿ ಕಂಡುಕೊಳ್ಳಬಹುದೆಂದು ದೇವರು ಹಾಗೆ ಮಾಡಿದನು. ಆದರೆ ಆತನು ನಮ್ಮಲ್ಲಿ ಯಾರಿಗೂ ಬಹುದೂರವಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ದೇವರು ನಮ್ಮಲ್ಲಿ ಯಾರಿಂದಲೂ ದೂರವಾಗಿಲ್ಲವಾದರೂ ದೇವರನ್ನು ನಾವು ಅಪೇಕ್ಷಿಸುವಂತೆ ನಾವು ದೇವರನ್ನು ಹುಡುಕಿ ಕಂಡುಕೊಳ್ಳುವಂತೆ ಹೀಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಲೊಕಾನಿ ಅಪ್ನಾಕ್ ಹುಡ್ಗುಚೆ ಮನ್ತಲಿ ದೆವಾಚಿ ಇಚ್ಚ್ಯಾ ಹೊಲ್ಲೆ ಅಪ್ನಾಸಾಟ್ನಿ ಅಜುಭಾಜುಕ್ ಸಗ್ಳ್ಯೆ ಹುಡ್ಕುನ್ ಕಾಡುನ್ ಘೆವ್ಕ್ ಹೊತಾ ಮನುನ್ ದೆವಾನ್ ತಸೆ ಕರ್‍ಲ್ಯಾನ್, ಖರೆ ಅಮ್ಕಾ ಕೊನಾಕ್ಬಿ ತೊ ಎಕ್ಲ್ಯಾಕ್ಬಿ ಧುರ್ ಹೊವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:27
9 ತಿಳಿವುಗಳ ಹೋಲಿಕೆ  

ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


ಆದರೆ ದೇವರು ತನ್ನ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಮೂಲಕ ಸಾಕ್ಷಿ ನೀಡುತ್ತಲೇ ಬಂದಿದ್ದಾನೆ; ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ, ಸುಗ್ಗಿಕಾಲಗಳನ್ನೂ ದಯಪಾಲಿಸಿ, ಆಹಾರ ಕೊಟ್ಟು ನಿಮ್ಮ ಮನಸ್ಸುಗಳನ್ನು ಆನಂದದಿಂದ ತುಂಬಿಸಿ, ಉಪಕಾರಮಾಡುತ್ತಾ ಬಂದವನು ಆತನೇ” ಎಂದು ಹೇಳಿದರು.


ಹೇಗೆಂದರೆ ಕಣ್ಣಿಗೆ ಕಾಣದಿರುವ ಆತನ ಗುಣಲಕ್ಷಣಗಳು ಅಂದರೆ ಆತನ ನಿತ್ಯ ಶಕ್ತಿಯೂ, ದೈವತ್ವವೂ, ಜಗದುತ್ಪತ್ತಿ ಮೊದಲುಗೊಂಡು ಆತನು ಮಾಡಿದ ಸೃಷ್ಟಿಗಳ ಮೂಲಕ ಬುದ್ಧಿಗೆ ಗೊತ್ತಾಗಿ ಕಾಣಬರುತ್ತದೆ. ಹೀಗಿರುವುದರಿಂದ ಅವರು ನೆಪವನ್ನು ಹೇಳಲು ಆಗುವುದಿಲ್ಲ.


ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?


ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು