Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಮತ್ತು ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋಗಿ; “ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರನ್ನು ಅಲ್ಲಿ ಕಾಣದಿರಲು ಯಾಸೋನನನ್ನೂ ಕೆಲವು ಭಕ್ತವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುತಂದು, “ಎಲ್ಲೆಲ್ಲೂ ಅಲ್ಲೋಲ ಕಲ್ಲೋಲ ಎಬ್ಬಿಸಿದ ಆ ವ್ಯಕ್ತಿಗಳು ಈಗ ನಮ್ಮ ನಗರಕ್ಕೂ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಅವರು ಪೌಲ ಸೀಲರನ್ನು ಅಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ಯಾಸೋನನನ್ನೂ ಕೆಲವು ವಿಶ್ವಾಸಿಗಳನ್ನೂ ನಗರಾಧಿಕಾರಿಗಳ ಮುಂದೆ ಎಳೆದುಕೊಂಡು ಬಂದು, “ಈ ಜನರು (ಪೌಲ ಸೀಲರು) ಪ್ರಪಂಚದ ಎಲ್ಲಾ ಕಡೆಗಳಲ್ಲೂ ಗಲಭೆಯನ್ನು ಉಂಟುಮಾಡಿ ಈಗ ಇಲ್ಲಿಗೂ ಬಂದಿದ್ದಾರೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಅಲ್ಲಿ ಅವರಿಲ್ಲದಿರುವುದನ್ನು ಕಂಡು ಅವರು ಯಾಸೋನನನ್ನೂ ಕೆಲವು ಸಹೋದರರನ್ನೂ ಎಳೆದುಕೊಂಡು ಬಂದು ಪಟ್ಟಣದ ಅಧಿಕಾರಿಗಳ ಮುಂದೆ ನಿಲ್ಲಿಸಿ, “ಲೋಕವನ್ನು ತಲೆಕೆಳಗೆ ಮಾಡಿರುವ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ತೆಂಕಾ ಥೈ ಪಾವ್ಲು ಅನಿ ಸಿಲಾಸ್ ದಿಸಿನಸಲ್ಲ್ಯಾ ತನ್ನಾ, ತೆನಿ ಯೊಸಾನಾಕ್ ಅನಿ ಥೊಡ್ಯಾ ದೆವಾಚ್ಯಾ ಲೊಕಾಕ್ನಿ ಶಾರಾಚ್ಯಾ ಅಧಿಕಾರಿಚ್ಯಾ ಫಿಡೆ ವಡುನ್ ಹಾನುನ್ ಹಿ ಲೊಕಾ ಜಗಾತ್ ಸಗ್ಳ್ಯಾಕ್ಡೆ ಬಿ ಧಾಂದಲ್ ಉಟ್ವುನ್ ಅತ್ತಾ ಹಿತ್ತೆಬಿ ಯೆಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:6
18 ತಿಳಿವುಗಳ ಹೋಲಿಕೆ  

“ಈ ಮನುಷ್ಯನನು ‘ಹಾನಿಕರವೂ ಲೋಕದ ಎಲ್ಲೆಡೆ ಇರುವ, ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ, ನಜರೇನ ಎಂಬ ಪಂಥದ ನಾಯಕ ಎಂತಲೂ ಕಂಡೆವು.’


ಆದರೆ, ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವುದು ನಮಗೆ ಯುಕ್ತವೆಂದು ತೋರುತ್ತದೆ. ಆ ಪಂಥದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತನಾಡುತ್ತಾರೆಂಬದೊಂದೇ ನಮಗೆ ಗೊತ್ತದೆ” ಅಂದರು.


ಅದಕ್ಕೆ ಅವರು, “ಗಲಿಲಾಯದಿಂದ ಮೊದಲುಗೊಂಡು ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆ ಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ” ಎಂದು ಇನ್ನೂ ಒತ್ತಿ ಹೇಳಿದರು.


ಇದಲ್ಲದೆ ರಾಜ್ಯದ ಈ ಸುವಾರ್ತೆಯು ಸರ್ವಲೋಕದಲ್ಲಿ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವುದು; ಆಗ ಅಂತ್ಯವು ಬರುವುದು.


ಆಗ ಬೇತೇಲಿನ ಯಾಜಕನಾದ ಅಮಚ್ಯನು, ಇಸ್ರಾಯೇಲಿನ ಅರಸನಾದ ಯಾರೊಬ್ಬಾಮನಿಗೆ, “ಆಮೋಸನು ಇಸ್ರಾಯೇಲರ ಮಧ್ಯದಲ್ಲಿ ನಿನ್ನ ಮೇಲೆ ಒಳಸಂಚು ಮಾಡಿದ್ದಾನೆ. ದೇಶವು ಅವನ ವಿಪರೀತವಾದ ಮಾತುಗಳನ್ನು ತಾಳಲಾರದು” ಅಂದನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಕೂಡಲೇ ಸಹೋದರರು ಪೌಲನನ್ನು ಸಮುದ್ರದ ತನಕ ಹೋಗುವುದಕ್ಕೆ ಕಳುಹಿಸಿಕೊಟ್ಟರು. ಆದರೆ ಸೀಲನೂ, ತಿಮೊಥೆಯನೂ ಅಲ್ಲೇ ನಿಂತರು.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು