Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪೌಲನು ಇನ್ನು ಅನೇಕ ದಿನಗಳ ಕಾಲ ಅಲ್ಲಿದ್ದ ಅನಂತರ ಸಹೋದರರಿಂದ ಅಪ್ಪಣೆತೆಗೆದುಕೊಂಡು ತನಗೆ ದೀಕ್ಷೆ ಇದ್ದುದರಿಂದ ಕೆಂಖ್ರೆಯ ಪಟ್ಟಣದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಪೌಲನು ಇನ್ನು ಅನೇಕ ದಿವಸ ಅಲ್ಲಿದ್ದ ಮೇಲೆ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ತನಗೆ ದೀಕ್ಷೆ ಇದ್ದದರಿಂದ ಕೆಂಖ್ರೆಯದಲ್ಲಿ ಕ್ಷೌರಮಾಡಿಸಿಕೊಂಡು ಹಡಗನ್ನು ಹತ್ತಿ ಸಿರಿಯಕ್ಕೆ ಹೊರಟನು. ಪ್ರಿಸ್ಕಿಲ್ಲಳೂ ಅಕ್ವಿಲನೂ ಅವನ ಸಂಗಡ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಪೌಲನು ಅನೇಕ ದಿನಗಳವರೆಗೆ ಸಹೋದರರೊಂದಿಗೆ ಇದ್ದನು. ಬಳಿಕ ಅವನು ಅಲ್ಲಿಂದ ಸಿರಿಯಕ್ಕೆ ನೌಕಾಯಾನ ಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲ ಸಹ ಅವನೊಂದಿಗಿದ್ದರು. ಕೆಂಖ್ರೆ ಎಂಬ ಸ್ಥಳದಲ್ಲಿ ಪೌಲನು ತನ್ನ ತಲೆಕೂದಲನ್ನು ಕತ್ತರಿಸಿಕೊಂಡನು. ಅವನು ದೇವರಿಗೆ ಹರಕೆಯನ್ನು ಮಾಡಿಕೊಂಡಿದ್ದನೆಂಬುದನ್ನು ಅದು ಸೂಚಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಇನ್ನು ಕೆಲವು ದಿನ ಪೌಲನು ಅಲ್ಲಿಯೇ ಉಳಿದುಕೊಂಡನು. ಅನಂತರ ಸಹೋದರರಿಂದ ಅಪ್ಪಣೆ ತೆಗೆದುಕೊಂಡು ಕೆಂಖ್ರೆಯ ಎಂಬ ಸ್ಥಳದಲ್ಲಿ ತಲೆ ಕೂದಲನ್ನು ಕ್ಷೌರಮಾಡಿಸಿಕೊಂಡು ತಾನು ಹೊತ್ತ ಹರಕೆ ಪೂರೈಸಿದ ಮೇಲೆ ಸಿರಿಯಕ್ಕೆ ನೌಕೆ ಪ್ರಯಾಣಮಾಡಿದನು. ಪ್ರಿಸ್ಕಿಲ್ಲ ಮತ್ತು ಅಕ್ವಿಲರು ಅವನ ಜೊತೆಯಲ್ಲಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಪಾವ್ಲು ವಿಶ್ವಾಸಿ ಭಾವಾಚ್ಯಾ ವಾಂಗ್ಡಾ ಕೊರಿಂಥಾತ್ ಉಲ್ಲಿ ದಿಸಾ ರ್‍ಹಾಲೊ ತೆಚ್ಯಾ ಮನಾ ಸಮುಂದ್ರರಾಚ್ಯಾ ವಾಟೆನ್ ಪ್ರಿಸ್ಕಿಲಾ ಅನಿ ಅಕ್ವಿಲ್ ಮನ್ತಲ್ಲ್ಯಾಂಚ್ಯಾ ವಾಂಗ್ಡಾ ಸಿರಿಯಾಕ್ ಜಾವ್ಕ್ ಲಾಗಲ್ಲೊ, ಪ್ರಯಾನ್ ಕರುಚ್ಯಾ ಅದ್ದಿಚ್ ತೆನಿ ಕೆಂಕ್ರೆ ಶಾರಾತ್ ಅಪ್ಲಿ ಕೆಸಾ ಕಾತ್ರುನ್ ಘೆವ್ಕ್ ಗೆಲೊ, ಕಶ್ಯಾಕ್ ಮಟ್ಲ್ಯಾರ್, ತೆನಿ ಶಪತ್ ಕರಲ್ಲೆ ಹೊತ್ತೆ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:18
17 ತಿಳಿವುಗಳ ಹೋಲಿಕೆ  

ನೀನು ಅವರನ್ನು ಕರೆದುಕೊಂಡು ಹೋಗಿ, ಅವರೊಡನೆ ನಿನ್ನನ್ನು ಶುದ್ಧಿಮಾಡಿಕೊಂಡು ಅವರು ತಮ್ಮ ಕ್ಷೌರದ ಶಪಥವನ್ನು ತೀರಿಸಿಕೊಳ್ಳುವುದಕ್ಕಾಗಿ, ಆಗುವ ವೆಚ್ಚವನ್ನು ನೀನು ಕೊಡು. ಹೀಗೆ ಮಾಡಿದರೆ ಎಲ್ಲರೂ ನಿನ್ನ ವಿಷಯವಾಗಿ ತಾವು ಕೇಳಿದ ಸುದ್ದಿ ನಿಜವಲ್ಲವೆಂತಲೂ, ನೀನು ಧರ್ಮಶಾಸ್ತ್ರವನ್ನು ಕೈಕೊಂಡು ನಡೆಯುತ್ತೀ, ಎಂತಲೂ ತಿಳಿದುಕೊಳ್ಳುವರು.


ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.


ಯೆಹೂದ್ಯರನ್ನು ಸಂಪಾದಿಸಿಕೊಳ್ಳುವುದಕ್ಕೆ ಯೆಹೂದ್ಯರಿಗೆ ಯೆಹೂದ್ಯನಂತಾದೆನು. ನಾನು ಧರ್ಮಶಾಸ್ತ್ರಕ್ಕೆ ಅಧೀನನಲ್ಲದವನಾದರೂ, ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಸಂಪಾದಿಸಿಕೊಳ್ಳುವುದಕ್ಕಾಗಿ ಅವರಿಗೋಸ್ಕರ ಧರ್ಮಶಾಸ್ತ್ರಕ್ಕೆ ಅಧೀನನಂತಾದೆನು.


ನಾನು ನಿಮ್ಮ ಬಳಿಗೆ ಕಳುಹಿಸುವ ನಮ್ಮ ಸಹೋದರಿಯಾದ ಪೊಯಿಬೆಯನ್ನು ಪ್ರೀತಿಯಿಂದ ಅಂಗೀಕರಿಸಿರಿ. ಆಕೆಯು ಕೆಂಖ್ರೆಯ ಪಟ್ಟಣದಲ್ಲಿರುವ ಸಭೆಯ ಸೇವಕಿಯಾಗಿದ್ದಾಳೆ;


ಪೊಂತದಲ್ಲಿ ಹುಟ್ಟಿದ ಅಕ್ವಿಲನೆಂಬ ಒಬ್ಬ ಯೆಹೂದ್ಯನನ್ನು ಅಲ್ಲಿ ಕಂಡನು. ಯೆಹೂದ್ಯರೆಲ್ಲರೂ ರೋಮಾಪುರವನ್ನು ಬಿಟ್ಟುಹೋಗಬೇಕೆಂದು ಕ್ಲೌದಿಯ ಚಕ್ರವರ್ತಿಯು ಆಜ್ಞೆ ವಿಧಿಸಿದ ಕಾರಣ ಅಕ್ವಿಲನೂ ಅವನ ಹೆಂಡತಿಯಾದ ಪ್ರಿಸ್ಕಿಲ್ಲಳೂ ಕೆಲವು ದಿನಗಳ ಮೊದಲೇ ಇತಾಲ್ಯ ದೇಶದಿಂದ ಅಲ್ಲಿಗೆ ಬಂದಿದ್ದರು.


ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,


ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.


ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಆ ಮೇಲೆ ಅಖಾಯಕ್ಕೆ ಹೋಗಬೇಕೆಂದು ಅವನಿಗೆ ಮನಸ್ಸಾದಾಗ ಸಹೋದರರು ಅವನನ್ನು ಪ್ರೋತ್ಸಾಹಗೊಳಿಸಿ ಅಲ್ಲಿದ್ದ ಶಿಷ್ಯರಿಗೆ ಇವನನ್ನು ಸೇರಿಸಿಕೊಳ್ಳಬೇಕೆಂದು ಪತ್ರಿಕೆಯನ್ನು ಬರೆದುಕೊಟ್ಟರು.


ಅದಕಾರಣ ನಾವು ನಿನಗೆ ಹೇಳುವ ಕೆಲಸವನ್ನು ಮಾಡು. ನಮ್ಮಲ್ಲಿ ಶಪಥಮಾಡಿದ ನಾಲ್ಕುಮಂದಿ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು