Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವನು ಸೆಜರೇಯವನ್ನು ಸೇರಿದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಧರ್ಮಸಭೆಯನ್ನು ಸಂಧಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಕೈಸರೈಯದಲ್ಲಿ ಇಳಿದು ಯೆರೂಸಲೇವಿುಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಪೌಲನು ಸೆಜರೇಯ ಪಟ್ಟಣಕ್ಕೆ ಹೋದನು. ಅಲ್ಲಿಂದ ಜೆರುಸಲೇಮಿಗೆ ಹೋಗಿ ಸಭೆಯವರನ್ನು ವಂದಿಸಿದನು. ಅನಂತರ ಪೌಲನು ಅಂತಿಯೋಕ್ಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅನಂತರ ಅವನು ಕೈಸರೈಯವನ್ನು ಸೇರಿದಾಗ, ಅಲ್ಲಿದ್ದ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೊ ಸೆಜಾರೆಯಾಕ್ ಯೆವ್ನ್ ಪಾವಲ್ಯಾ ತನ್ನಾ ಜೆರುಜಲೆಮಾಕ್ ಜಾವ್ನ್ ದೆವಾಚ್ಯಾ ಲೊಕಾಚ್ಯಾ ತಾಂಡ್ಯಾಕ್ ಜಾವ್ನ್ ಯೆತಾ ಮನುನ್ ಸಾಂಗುನ್ ಅಂತಿಯೊಕಾಕ್‍ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:22
16 ತಿಳಿವುಗಳ ಹೋಲಿಕೆ  

ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಆದರೆ ಫೆಸ್ತನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಿಕೊಳ್ಳಬೇಕೆಂದು ಅಪೇಕ್ಷಿಸಿ ಪೌಲನನ್ನು; “ನೀನು ಯೆರೂಸಲೇಮಿಗೆ ಹೋಗಿ ಅಲ್ಲಿ ಈ ಕಾರ್ಯಗಳ ವಿಷಯವಾಗಿ ನನ್ನ ಮುಂದೆ ವಿಚಾರಿಸಲ್ಪಡುವುದಕ್ಕೆ ನಿನಗೆ ಮನಸ್ಸುಂಟೋ?” ಎಂದು ಕೇಳಲು, ಪೌಲನು;


ಫೆಸ್ತನು ಅಧಿಕಾರ ವಹಿಸಿಕೊಂಡು, ಮೂರು ದಿನಗಳಾದ ನಂತರ ಕೈಸರೈಯದಿಂದ ಯೆರೂಸಲೇಮಿಗೆ ಹೋದನು.


ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”


ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.


ಹೀಗೆ ಅವರು ಅಪ್ಪಣೆ ತೆಗೆದುಕೊಂಡು ಅಂತಿಯೋಕ್ಯಕ್ಕೆ ಬಂದು ಸಭೆಯನ್ನು ಸೇರಿಸಿ ಆ ಪತ್ರವನ್ನು ಅವರಿಗೆ ಒಪ್ಪಿಸಿದರು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ಅವರು ಯೆರೂಸಲೇಮಿಗೆ ಬಂದ ಮೇಲೆ ಸಭೆಯವರೂ ಅಪೊಸ್ತಲರೂ ಸಭೆಯ ಹಿರಿಯರೂ ಅವರನ್ನು ಸೇರಿಸಿಕೊಂಡಾಗ ದೇವರು ತಮ್ಮೊಂದಿಗಿದ್ದು ಮಾಡಿದ ಕಾರ್ಯಗಳನ್ನೆಲ್ಲಾ ಅವರಿಗೆ ವಿವರಿಸಿದರು.


ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.


ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.


ಆ ಕ್ಷಣದಲ್ಲೇ ಮೂವರು ಪುರುಷರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತಿರಕ್ಕೆ ಕಳುಹಿಸಲ್ಪಟ್ಟವರು.


ಮರುದಿನ ಅವನು ಕೈಸರೈಯಕ್ಕೆ ಬಂದು ಸೇರಿದನು. ಕೊರ್ನೆಲ್ಯನು ತನ್ನ ಬಂಧುಬಳಗದವರನ್ನೂ ಮತ್ತು ಅಪ್ತಮಿತ್ರರನ್ನೂ ಕರೆಯಿಸಿ ಪೇತ್ರನಿಗಾಗಿ ಎದುರುನೋಡುತ್ತಿದ್ದನು.


ಕೈಸರೈಯ ಪಟ್ಟಣದಲ್ಲಿ ಇತಾಲ್ಯ ಸೈನ್ಯದ ಶತಾಧಿಪತಿಯಾದ ಕೊರ್ನೆಲ್ಯನೆಂಬ ಒಬ್ಬ ಮನುಷ್ಯನಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು