Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹೀಗೆ ಎರಡು ವರ್ಷಗಳು ಕಳೆದವು. ಇದರ ಪರಿಣಾಮವಾಗಿ ಏಷ್ಯಾದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಪ್ರಭುವಿನ ವಾಕ್ಯವನ್ನು ಕೇಳಲು ಅನುಕೂಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯಸೀಮೆಯಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಎಲ್ಲರೂ ಕರ್ತನ ವಾಕ್ಯವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಹೀಗೆ ಎರಡು ವರ್ಷಗಳು ಕಳೆದವು. ಇದರಿಂದಾಗಿ, ಏಷ್ಯಾದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರು ಮತ್ತು ಗ್ರೀಕರು ಪ್ರಭುವಿನ ವಾಕ್ಯವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದು ಎರಡು ವರ್ಷಗಳ ಕಾಲ ಮುಂದುವರಿಯಿತು. ಇದರಿಂದ ಏಷ್ಯಾ ಪ್ರಾಂತದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ ಗ್ರೀಕರೂ ಕರ್ತ ಯೇಸುವಿನ ವಾಕ್ಯವನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಹೆ ದೊನ್ ವರ್ಸಾ ಪತರ್ ಚಲುನ್ಗೆತ್ ಹೊತ್ಯಾ ಸಾಟ್ನಿ ಆಸ್ಯಾ ಪ್ರಾಂತ್ಯಾಲ್ಲಿ ಸಗ್ಳಿ ಜುದೆವಾಂಚಿ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾನಿ ಧನಿಯಾ ಜೆಜುಚಿ ಬರಿ ಖಬರ್ ಆಯಿಕ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:10
23 ತಿಳಿವುಗಳ ಹೋಲಿಕೆ  

ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ಆಸ್ಯಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಕೈಬಿಟ್ಟರೆಂಬುದನ್ನು ನೀನು ಬಲ್ಲೆ. ಅವರಲ್ಲಿ ಪುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”


ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.


ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೊಳ್ಳುವವನಲ್ಲ. ಆ ಸುವಾರ್ತೆಯು ಮೊದಲು ಯೆಹೂದ್ಯರಿಗೆ ಆ ಮೇಲೆ ಗ್ರೀಕರಿಗೆ ಅಂತೂ ನಂಬುವವರೆಲ್ಲರಿಗೂ ರಕ್ಷಣೆ ಉಂಟುಮಾಡುವ ದೇವರ ಬಲಸ್ವರೂಪವಾಗಿದೆ.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವುದೇನಂದರೆ; ಇರುವಾತನೂ, ಇದ್ದಾತನೂ, ಬರುವಾತನೂ ಆಗಿರುವಾತನಿಂದ ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ


ಯೇಸು ಕ್ರಿಸ್ತನ ಅಪೊಸ್ತಲನಾದ ಪೇತ್ರನು ಪೊಂತ, ಗಲಾತ್ಯ, ಕಪ್ಪದೋಕ್ಯ, ಆಸ್ಯ, ಬಿಥೂನ್ಯ ಎಂಬ ಸೀಮೆಗಳಲ್ಲಿ ಚದುರಿಹೋಗಿರುವಂಥ ಪರದೇಶಸ್ಥರಾದ ದೇವಜನರಿಗೆ ಅಂದರೆ,


ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.


ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.


ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.


ಅವನು ಒಂದು ವರ್ಷ ಆರು ತಿಂಗಳು ಅಲ್ಲೇ ಇದ್ದುಕೊಂಡು ಆ ಜನರಿಗೆ ದೇವರ ವಾಕ್ಯವನ್ನು ಉಪದೇಶಮಾಡುತ್ತಿದ್ದನು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಈ ರೀತಿಯಾಗಿ ಕರ್ತನ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು