Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ದೇವರು ಪೌಲನ ಕೈಯಿಂದ ಅಸಾಧಾರಣ ಅದ್ಭುತಗಳನ್ನು ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವ್ ಪಾವ್ಲುಚ್ಯಾ ಹಾತಿನ್ ಹೊಯ್ ನಸಲ್ಲಿ ಮೊಟಿ ಕಾಮಾ ಕರ್ಸುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:11
10 ತಿಳಿವುಗಳ ಹೋಲಿಕೆ  

ಇದಲ್ಲದೆ ಅಪೊಸ್ತಲರ ಕೈಯಿಂದ ಅನೇಕ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ಜನರೊಳಗೆ ನಡೆಯುತ್ತಾ ಇದ್ದವು. ಮತ್ತು ಎಲ್ಲರು ಒಗ್ಗಟ್ಟಾಗಿ ಸೊಲೊಮೋನನ ಮಂಟಪದಲ್ಲಿ ಸೇರಿಬರುತ್ತಿದ್ದರು.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ಆಗ ಸೀಮೋನನೂ ಕೂಡ ನಂಬಿ ದೀಕ್ಷಾಸ್ನಾನಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಆಗುತ್ತಿದ್ದುದನ್ನು ನೋಡಿ ಬೆರಗಾಗುತ್ತಿದ್ದನು.


ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.


ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?


ಗುಂಪುಸೇರಿದ್ದವರೆಲ್ಲರೂ ಈ ಮಾತುಗಳನ್ನು ಕೇಳಿ ಮೌನವಾಗಿದ್ದು ಬಾರ್ನಬನೂ ಪೌಲನೂ ತಮ್ಮ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ್ದ ಎಲ್ಲಾ ಸೂಚಕ ಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ವಿವರಿಸಿದ್ದನ್ನು ಕಿವಿಗೊಟ್ಟು ಕೇಳಿದರು.


ಹೀಗಿರಲಾಗಿ ಅವರು ಬಹುಕಾಲ ಅಲ್ಲಿದ್ದು ಕರ್ತನು ಅವರ ಕೈಯಿಂದ ಸೂಚಕಕಾರ್ಯಗಳೂ, ಅದ್ಭುತಕಾರ್ಯಗಳೂ ನಡೆಯುವಂತೆ ದಯಪಾಲಿಸಿ ತನ್ನ ಕೃಪಾವಾಕ್ಯಕ್ಕೆ ಸಾಕ್ಷಿಕೊಟ್ಟಿದ್ದರಿಂದ ಆತನ ಮೇಲೆ ಭರವಸವಿಟ್ಟು ಧೈರ್ಯದಿಂದ ಮಾತನಾಡುತ್ತಿದ್ದರು.


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು