Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರೂ ಅನ್ಯಧರ್ಮೀಯರೂ ಈ ವಿಷಯವನ್ನು ಕೇಳಿ ಭಯಭೀತರಾದರು. ಪ್ರಭು ಯೇಸುವಿನ ನಾಮವನ್ನು ಸಂಕೀರ್ತಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರಿಗೆ ಭಯಹಿಡಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಎಫೆಸದಲ್ಲಿದ್ದ ಯೆಹೂದ್ಯರು ಮತ್ತು ಗ್ರೀಕರು ಇದನ್ನು ಕೇಳಿ ಭಯಗ್ರಸ್ತರಾದರು ಮತ್ತು ಪ್ರಭು ಯೇಸುವಿನ ಹೆಸರನ್ನು ಸನ್ಮಾನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಎಫೆಸಾತ್ ರ್‍ಹಾತಲಿ ಜುದೆವಾಂಚಿ ಅನಿ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾನಿ ಜೆಜುಚ್ಯಾ ವಿಶಯಾತ್ ಆಯ್ಕಲ್ಯಾನಿ, ಅನಿ ಭಿಂವ್ಲ್ಯಾನಿ, ಅನಿ ಧನಿಯಾ ಜೆಜುಚ್ಯಾ ನಾವಾಕ್ ಲೈ ಮಾನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:17
22 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.


ಕಡೆಯದಾಗಿ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿಹರಡಿದ ಪ್ರಕಾರವೇ ಅದು ಬೇಗನೆ ಪಸರಿಸಿ ಮಹಿಮೆ ಹೊಂದಲಿ,


ಹೇಗೆಂದರೆ ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವುದರಿಂದ ಬದುಕಿದರೂ ಸರಿಯೇ ಅಥವಾ ಸತ್ತರೂ ಸರಿಯೇ ನನ್ನ ಶರೀರದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನ್ನ ಬಹು ಅಭಿಲಾಷೆಯಾಗಿದೆ, ಹಾಗೆಯೇ ಆಗುವುದೆಂಬ ಭರವಸೆವುಂಟು.


ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.


ಮತ್ತು ಸರ್ವ ಸಭೆಯವರೂ ಈ ಸಂಗತಿಗಳನ್ನು ಕೇಳಿದವರೆಲ್ಲರೂ ಭಯ ಭ್ರಾಂತರಾದರು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಅವರ ಜೊತೆಯಲ್ಲಿರುವುದಕ್ಕೆ ಉಳಿದವರಲ್ಲಿ ಒಬ್ಬರಿಗೂ ಧೈರ್ಯವಿರಲಿಲ್ಲ. ಆದರೂ ಜನರು ಅವರನ್ನು ಬಹಳವಾಗಿ ಕೊಂಡಾಡುತ್ತಿದ್ದರು.


ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


ಇದನ್ನು ಕೇಳಿದ ನೆರೆಹೊರೆಯವರಿಗೆಲ್ಲಾ ಹೆದರಿಕೆಯುಂಟಾಯಿತು ಮತ್ತು ಈ ಎಲ್ಲಾ ಸಂಗತಿಗಳನ್ನು ಕುರಿತು ಯೂದಾಯದ ಮಲೆನಾಡಿನಲ್ಲೆಲ್ಲಾ ಮಾತನಾಡಿಕೊಳ್ಳುತ್ತಿದ್ದರು.


ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.


ಆ ದಿನ ದಾವೀದನು ಯೆಹೋವನಿಗೆ ಭಯಪಟ್ಟು, “ಯೆಹೋವನ ಮಂಜೂಷವನ್ನು ನಾನಿರುವಲ್ಲಿಗೆ ತೆಗೆದುಕೊಂಡು ಹೋಗುವುದು ಹೇಗೆ?” ಎಂದುಕೊಂಡು,


ಪರಿಶುದ್ಧ ದೇವರಾದ ಯೆಹೋವನ ಮುಂದೆ ಯಾರು ನಿಂತಾರು? ನಮ್ಮನ್ನು ಬಿಟ್ಟು ಈತನು ಹೋಗತಕ್ಕ ಸ್ಥಳ ಯಾವುದು ಎಂದು ಮಾತನಾಡಿಕೊಂಡು


ಆಗ ಮೋಶೆ ಆರೋನನಿಗೆ, “ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನೆಂದರೆ, ‘ನಾನು ಪರಿಶುದ್ಧನೆಂಬುದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬುದೇ’” ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಮತ್ತು ದುರಾತ್ಮ ಹಿಡಿದಿದ್ದ ಆ ಮನುಷ್ಯನು ಅವರ ಮೇಲೆ ಹಾರಿ ಬಿದ್ದು, ಅವರನ್ನೂ ಸೋಲಿಸಿ ಸದೆಬಡಿದಿದ್ದರಿಂದ ಅವರು ಗಾಯಗೊಂಡು ಬೆತ್ತಲೆಯಾಗಿ ಆ ಮನೆಯೊಳಗಿಂದ ಓಡಿಹೋದರು.


ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು