Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನನ್ನು ನಂಬಿದವರಲ್ಲಿ ಅನೇಕರು ಪಶ್ಚಾತ್ತಾಪದಿಂದ ಬಂದು ತಮ್ಮ ತಮ್ಮ ಪಾಪಕೃತ್ಯಗಳನ್ನು ಒಪ್ಪಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಭಕ್ತವಿಶ್ವಾಸಿಗಳಾದ ಅನೇಕರು ಮುಂದೆ ಬಂದು ತಮ್ಮ ದುಷ್ಕೃತ್ಯಗಳನ್ನು ಬಹಿರಂಗವಾಗಿ ಒಪ್ಪಿಕೊಂಡು ನಿವೇದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂತು. ಆತನನ್ನು ನಂಬಿದವರಲ್ಲಿ ಅನೇಕರು ಬಂದು ತಮ್ಮ ಕೃತ್ಯಗಳನ್ನು ಒಪ್ಪಿಕೊಂಡು ತಿಳಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ವಿಶ್ವಾಸಿಗಳಲ್ಲಿ ಅನೇಕರು ತಾವು ಮಾಡಿದ ಪಾಪಗಳನ್ನು ಒಪ್ಪಿಕೊಂಡು ಅರಿಕೆ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ವಿಶ್ವಾಸವಿಟ್ಟವರಲ್ಲಿ ಅನೇಕರು ಅಲ್ಲಿಗೆ ಬಂದು ತಮ್ಮ ಕೃತ್ಯಗಳನ್ನು ಅರಿಕೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಜ್ಯಾರ್ ವಿಶ್ವಾಸ್ ಕರಲ್ಲ್ಯಾ ಲೈ ಲೊಕಾನಿ ಯೆವ್ನ್ ಲೊಕಾಂಚ್ಯಾ ಫಿಡ್ಯಾತ್ ಅಪ್ನಿ ಕರಲಿ ಚುಕೆಚಿ ಕಾಮಾ ಸಗ್ಳಿ ಮಾಳಾಕ್ ಹಾನುನ್ ಸಾಂಗುನ್ ಘೆಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:18
14 ತಿಳಿವುಗಳ ಹೋಲಿಕೆ  

ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.


ತಮ್ಮ ಪಾಪಗಳನ್ನು ಅರಿಕೆಮಾಡಿಕೊಂಡು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು.


ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ


ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿಮಿತ್ತ ಇನ್ನು ಬಾಯಿ ತೆರೆಯದಿರುವಿ” ಇದು ಕರ್ತನಾದ ಯೆಹೋವನ ನುಡಿ.


ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ


ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.


ಈ ಸಂಗತಿಯು ಎಫೆಸದಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರಿಗೂ, ಗ್ರೀಕರಿಗೂ ತಿಳಿದುಬಂದಾಗ ಅವರೆಲ್ಲರೂ ಭಯಭೀತರಾದರು. ಮತ್ತು ಕರ್ತನಾದ ಯೇಸುವಿನ ಹೆಸರು ಪ್ರಖ್ಯಾತಿಗೆ ಬಂದಿತು.


ಇದಲ್ಲದೆ ಮಾಟ ಮಂತ್ರಗಳನ್ನು ನಡಿಸಿದವರಲ್ಲಿ ಅನೇಕರು ತಮ್ಮ ಮಾಟಮಂತ್ರಗಳ ಪುಸ್ತಕಗಳನ್ನು ತಂದು, ಕೂಡಿಸಿ ಎಲ್ಲರ ಮುಂದೆ ಸುಟ್ಟುಬಿಟ್ಟರು. ಅವುಗಳ ಮೌಲ್ಯವನ್ನು ಲೆಕ್ಕಮಾಡಿ ಐವತ್ತು ಸಾವಿರ ಬೆಳ್ಳಿ ನಾಣ್ಯ ಆಯಿತೆಂದು ತಿಳಿದುಕೊಂಡರು.


ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು