Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಮತ್ತು ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ತನ್ನ ಇಬ್ಬರು ಸಹಾಯಕರಾದ ತಿಮೊಥೇಯ ಮತ್ತು ಎರಾಸ್ತನನ್ನು ಮಕೆದೋನಿಯಕ್ಕೆ ಕಳುಹಿಸಿಬಿಟ್ಟು, ತಾನು ಇನ್ನೂ ಸ್ವಲ್ಪಕಾಲ ಏಷ್ಯದಲ್ಲೇ ಉಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆದರೆ ಅವನು ತನಗೆ ಸೇವೆಮಾಡುವವರಲ್ಲಿ ಇಬ್ಬರಾದ ತಿಮೊಥೆಯನನ್ನೂ ಎರಸ್ತನನ್ನೂ ಮಕೆದೋನ್ಯಕ್ಕೆ ಕಳುಹಿಸಿ ತಾನು ಆಸ್ಯಸೀಮೆಯಲ್ಲಿ ಕೆಲವು ಕಾಲ ನಿಂತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ತಿಮೊಥೆ ಮತ್ತು ಎರಸ್ತ ಎಂಬುವರು ಪೌಲನ ಸಹಾಯಕರಾಗಿದ್ದರು. ಪೌಲನು ಅವರನ್ನು ಮಕೆದೋನಿಯ ದೇಶಕ್ಕೆ ಮುಂಚಿತವಾಗಿಯೇ ಕಳುಹಿಸಿದನು. ಪೌಲನು ಇನ್ನೂ ಸ್ವಲ್ಪಕಾಲ ಏಷ್ಯಾದಲ್ಲಿ ತಂಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತಸೆ ಹೊವ್ನ್, ತೆನಿ ಅಪ್ಲೆ ಮಜತ್ ಕಾರಿ ತಿಮೊಥಿ, ಅನಿ ಎರಸ್ತಾಕ್ ಮೆಸೆದೊನಿಯಾಕ್ ಧಾಡುನ್ ದಿವ್ನ್ ಅಪ್ನಿ ಆಸ್ಯಾ ಸಿಮೆತ್ ರಾಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:22
18 ತಿಳಿವುಗಳ ಹೋಲಿಕೆ  

ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.


ನನಗೂ ಮತ್ತು ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕನಾಗಿರುವ ಎರಸ್ತನೂ, ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.


ಆಗ ಊರಿನಲ್ಲೆಲ್ಲಾ ಗಲಿಬಿಲಿಯಾಯಿತು. ಪ್ರಯಾಣದಲ್ಲಿ ಪೌಲನಿಗೆ ಜೊತೆಯವರಾಗಿದ್ದ ಮಕೆದೋನ್ಯದ ಗಾಯನನ್ನೂ, ಅರಿಸ್ತಾರ್ಕನನ್ನೂ ಜನರು ಹಿಡಿದುಕೊಂಡು ಒಟ್ಟಾಗಿ ನಾಟಕ ಶಾಲೆಯೊಳಗೆ ನುಗ್ಗಿದರು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಸೀಲನೂ ಮತ್ತು ತಿಮೊಥೆಯನೂ ಮಕೆದೋನ್ಯದಿಂದ ಬಂದಾಗ ಪೌಲನು ದೇವರ ವಾಕ್ಯವನ್ನು ಬೋಧಿಸುವುದರಲ್ಲಿ ಅತ್ಯಾಸಕ್ತಿಯುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಹೇಳಿದನು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.


ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.


ಸಹೋದರರೇ, ಮಕೆದೋನ್ಯದ ಸಭೆಗಳಿಗೆ ಅನುಗ್ರಹಿಸಲ್ಪಟ್ಟ ದೇವರ ಕೃಪೆಯ ಕುರಿತು ನಿಮಗೆ ತಿಳಿಯಬೇಕೆಂದು ಬಯಸುತ್ತೇವೆ,


ಮೊದಲು ನಿಮ್ಮ ಬಳಿಗೆ ಬಂದು ನಿಮ್ಮ ಮಾರ್ಗವಾಗಿ ಮಕೆದೋನ್ಯಕ್ಕೆ ಹೋಗಿ ಅನಂತರ ಮಕೆದೋನ್ಯವನ್ನು ಬಿಟ್ಟು ತಿರುಗಿ ನಿಮ್ಮ ಬಳಿಗೆ ಬಂದು ನೀವು ನನ್ನನ್ನು ಯೂದಾಯಕ್ಕೆ ಕಳುಹಿಸಿ ಕೊಡಬೇಕೆಂದು ಯೋಚಿಸಿದ್ದೆನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ. ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವುದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು. ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಆದರೂ ನನ್ನ ಸಹೋದರ ತೀತನು ನನಗೆ ಅಲ್ಲಿ ಸಿಕ್ಕಲಿಲ್ಲವಾದ ಕಾರಣ ನನ್ನ ಮನಸ್ಸಿಗೆ ಸಮಾಧಾನವಿಲ್ಲದೆ ಅಲ್ಲಿದ್ದವರಿಗೆ ವಂದಿಸಿ ಅಲ್ಲಿಂದ ಹೊರಟು ಮಕೆದೋನ್ಯಕ್ಕೆ ಬಂದೆನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.


ಇದು ಮಾತ್ರವಲ್ಲದೆ, ಕರ್ತನ ಮಹಿಮೆಗಾಗಿ ಮತ್ತು ನಮ್ಮ ಸಿದ್ಧ ಮನಸ್ಸನ್ನು ತೋರಿಸುವುದಕ್ಕಾಗಿ ನಾವು ನಡಿಸುವ ಧರ್ಮಕಾರ್ಯದ ಸಂಬಂಧವಾಗಿ ನಮ್ಮ ಸಂಗಡ ಪ್ರಯಾಣಮಾಡುವಂತೆ ಸಭೆಗಳಿಂದ ಇವನು ಆರಿಸಲ್ಪಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು