Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಕೊನೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ; “ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ, ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ, ಪಾಲಕರಾಗಿದ್ದಾರೆಂಬುದನ್ನು ತಿಳಿಯದಿರುವ ಮನುಷ್ಯನು ಯಾವನಿದ್ದಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಕಟ್ಟಕಡೆಗೆ ಪಟ್ಟಣದ ಅಧಿಕಾರಿ ಒಬ್ಬನು ಜನಸಮೂಹವನ್ನು ಶಾಂತಗೊಳಿಸುತ್ತಾ ಹೀಗೆಂದನು: “ಎಫೆಸದ ಮಹಾಜನರೇ, ಅರ್ತೆಮೀ ಮಹಾದೇವಿಯ ಗುಡಿಯನ್ನು ಹಾಗೂ ಆಕಾಶದಿಂದ ಬಿದ್ದ ಶಿಲೆಯನ್ನು ಎಫೆಸ ಪಟ್ಟಣವು ಎಚ್ಚರಿಕೆಯಿಂದ ಸಂರಕ್ಷಿಸುತ್ತಾ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಕಡೆಗೆ ಪಟ್ಟಣದ ಯಜಮಾನನು ಜನರ ಗುಂಪನ್ನು ಸಮಾಧಾನಪಡಿಸಿ - ಎಫೆಸದವರೇ, ಎಫೆಸ ಪಟ್ಟಣದವರು ಅರ್ತೆಮೀ ಮಹಾದೇವಿಯ ದೇವಸ್ಥಾನಕ್ಕೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಗೂ ಪಾಲಕರಾಗಿದ್ದಾರೆಂಬದನ್ನು ತಿಳಿಯದಿರುವ ಮನುಷ್ಯನು ಇದ್ದಾನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬಳಿಕ ಪಟ್ಟಣದ ಅಧಿಕಾರಿಯು ಜನಸಮೂಹವನ್ನು ಶಾಂತಗೊಳಿಸಿ ಅವರಿಗೆ, “ಎಫೆಸದ ಜನರೇ, ಮಹಾದೇವತೆಯಾದ ಅರ್ತೆಮಿ ದೇವಿಯ ಗುಡಿಯನ್ನು ಎಫೆಸ ಪಟ್ಟಣವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ತಿಳಿದಿದೆ. ಆಕೆಯ ಪವಿತ್ರ ಕಲ್ಲನ್ನು ಸಹ ನಾವು ಕಾಪಾಡಿಕೊಂಡು ಬಂದಿರುವುದು ಜನರೆಲ್ಲರಿಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಗರದ ಗುಮಾಸ್ತ ಜನಸಮೂಹವನ್ನು ಸುಮ್ಮನಿರಿಸಿ, “ಎಫೆಸದ ಜನರೇ, ಮಹಾ ಅರ್ತೆಮೀ ದೇವಿಯ ಮಂದಿರ ಹಾಗೂ ಆಕಾಶದಿಂದ ಬಿದ್ದ ಆಕೆಯ ಮೂರ್ತಿಯನ್ನು ಎಫೆಸ ಪಟ್ಟಣವು ಕಾಪಾಡುತ್ತಿದೆ ಎಂಬುದನ್ನು ತಿಳಿಯದಿರುವ ಮನುಷ್ಯನು ಇದ್ದಾನೆಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ತ್ಯಾ ಶಾರಾತ್ಲ್ಯಾ ಯಜಮಾನಾನ್ ಸಗ್ಳ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಶಾಂತ್‍ ಕರುನ್, ತೆಂಕಾ ಎಪೆಸಾತ್ಲ್ಯಾ ಲೊಕಾನು ಮಳ್ಬಾಕ್ನಾ ಪಡಲಿ ಮೊಟ್ಯಾ ಅರ್ತೆಮೆ ದೆವತೆಚಿ ಗುಡಿ ಅನಿ ತಿಜಿ ಮುರ್ತಿ ರಾಕುನ್ ಘೆವ್ನ್ ಯೆಲ್ಲೆ ಎಪೆಸಾತ್ಲ್ಯಾ ಲೊಕಾನಿಚ್ ಮನ್ತಲೆ ಸಗ್ಳ್ಯಾ ಜಗಾಕುಚ್ ಗೊತ್ತ್ ಹಾಯ್ ನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:35
9 ತಿಳಿವುಗಳ ಹೋಲಿಕೆ  

ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು,


ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಆದರೆ ಅವನು ಯೆಹೂದ್ಯನೆಂದು ತಿಳಿದಾಗ ಎಲ್ಲರೂ ಒಂದೇ ಶಬ್ದದಿಂದ; “ಎಫೆಸದವರ ಅರ್ತೆಮೀದೇವಿ ಮಹಾದೇವಿ” ಎಂದು ಎರಡು ಘಂಟೆ ಹೊತ್ತು ಕೂಗಿದರು.


ಈ ಸಂಗತಿ ಅಲ್ಲವೆನ್ನುವುದಕ್ಕೆ ಯಾರಿಂದಲೂ ಆಗದಿರುವುದರಿಂದ ನೀವು ಶಾಂತಿಯಿಂದಿರಬೇಕು; ದುಡುಕಿ ಏನೂ ಮಾಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು