Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ, ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು, ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಅನಂತರ ಮೂರು ತಿಂಗಳ ಕಾಲ ಪೌಲನು ಪ್ರಾರ್ಥನಾಮಂದಿರಕ್ಕೆ ಹೋಗಿ ಧೈರ್ಯದಿಂದ ಮಾತನಾಡಿದನು. ದೇವರ ಸಾಮ್ರಾಜ್ಯದ ಬಗ್ಗೆ ಅಲ್ಲಿದ್ದವರೊಡನೆ ಚರ್ಚಿಸುತ್ತಾ, ಅವರನ್ನು ವಿಶ್ವಾಸಿಗಳನ್ನಾಗಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಪಟ್ಟಣದಲ್ಲಿ ಪೌಲನು ಸಭಾಮಂದಿರದೊಳಗೆ ಹೋಗಿ ಮೂರು ತಿಂಗಳು ಅಲ್ಲೇ ದೇವರ ರಾಜ್ಯದ ವಿಷಯಗಳನ್ನು ಕುರಿತು ವಾದಿಸುತ್ತಾ ಜನರನ್ನು ಒಡಂಬಡಿಸುತ್ತಾ ಧೈರ್ಯದಿಂದ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅನಂತರ ಮೂರು ತಿಂಗಳ ಕಾಲ ಪೌಲನು ಸಭಾಮಂದಿರಕ್ಕೆ ಹೋಗಿ ಬಹು ಧೈರ್ಯದಿಂದ ಮಾತಾಡಿದನು. ಅವನು ಯೆಹೂದ್ಯರಿಗೆ ದೇವರ ರಾಜ್ಯದ ಸಂಗತಿಗಳನ್ನು ತಿಳಿಸಿ ಅವರನ್ನು ಒಡಂಬಡಿಸಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಪೌಲನು ಸಭಾಮಂದಿರದೊಳಗೆ ಪ್ರವೇಶಿಸಿದನು. ಅಲ್ಲಿ ಮೂರು ತಿಂಗಳುಗಳ ಕಾಲ, ಧೈರ್ಯವಾಗಿ ಬೋಧನೆ ಮಾಡಿದನು. ದೇವರ ರಾಜ್ಯದ ಬಗ್ಗೆ ಅವರೊಡನೆ ಮನವೊಲಿಸುವಂತೆ ಚರ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಶಾರಾತ್ ಪಾವ್ಲುನ್ ಸಿನಾಗೊಕ್ ಜಾವ್ನ್ ಧೈರ್ಯಾನ್ ಬೊಲುನ್ಗೆತ್ ಸುಮಾರ್ ತಿನ್ ಮ್ಹ್ನನ್ಯಾನ್ ಲೊಕಾಂಚ್ಯಾ ವಾಂಗ್ಡಾ ದೆವಾಚ್ಯಾ ರಾಜಾಂಚ್ಯಾ ವಿಶಯಾತ್ ಬೊಲುನ್ಗೆತ್ ತೆಂಚೆ ಮನ್ ಪರ್ತುಕ್ ಬಗ್ಲ್ಯಾನ್ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:8
17 ತಿಳಿವುಗಳ ಹೋಲಿಕೆ  

ಯೇಸುವು ಬಾಧೆಪಟ್ಟು ಸತ್ತ ನಂತರ ತಾನು ಜೀವಂತನಾಗಿ ಎದ್ದು ಬಂದಿದ್ದೇನೆ ಎಂದು ಅನೇಕ ಸಂಭವಗಳ ಮೂಲಕ ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಸ್ಪಷ್ಟಪಡಿಸಿದನು. ಸತತವಾಗಿ ನಲವತ್ತು ದಿನಗಳ ತನಕ ಅವರಿಗೆ ಕಾಣಿಸಿಕೊಳ್ಳುತ್ತಾ ದೇವರ ರಾಜ್ಯದ ವಿಷಯವನ್ನು ಕುರಿತು ಅವರಿಗೆ ಬೋಧಿಸಿದನು.


ಅವರು ಅವನಿಗೆ ಒಂದು ದಿನವನ್ನು ಗೊತ್ತುಮಾಡಲು, ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗ್ಗಿನಿಂದ ಸಾಯಂಕಾಲದ ವರೆಗೂ ದೇವರ ರಾಜ್ಯವನ್ನು ಕುರಿತು ಪ್ರಾಮಾಣಿಕವಾಗಿ ಸಾಕ್ಷಿಹೇಳುತ್ತಾ, ಮೋಶೆಯ ಧರ್ಮಶಾಸ್ತ್ರವನ್ನೂ, ಪ್ರವಾದಿಗಳ ಗ್ರಂಥಗಳನ್ನೂ, ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಪ್ರಿಯರೇ, ನಮಗೆ ಹುದುವಾಗಿರುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಾಸಕ್ತಿಯಿಂದ ಪ್ರಯತ್ನ ಮಾಡುತ್ತಿದ್ದಾಗ, ದೇವಜನರಿಗೆ ಶಾಶ್ವತವಾಗಿರುವಂತೆ ಒಂದೇ ಸಾರಿ ಒಪ್ಪಿಸಲ್ಪಟ್ಟ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ, ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.


ಆದುದರಿಂದ ಅವನು ಸಭಾಮಂದಿರದಲ್ಲಿ ಯೆಹೂದ್ಯರ ಮತ್ತು ಯೆಹೂದ್ಯ ಮತಾವಲಂಬಿಗಳೊಂದಿಗೆ ಮತ್ತು ಪ್ರತಿದಿನ ಪೇಟೆಯಲ್ಲಿ ಕಂಡುಬಂದವರ ಸಂಗಡಲೂ ಚರ್ಚಿಸಿದನು.


ಇಕೋನ್ಯದಲ್ಲಿ ಪೌಲ ಮತ್ತು ಬಾರ್ನಬರು ಅದೇ ಪ್ರಕಾರವಾಗಿ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಪ್ರೇರಣಾತ್ಮಕವಾದ ಬೋಧನೆ ನೀಡಿ ಮಾತನಾಡಿದ್ದರಿಂದ ಯೆಹೂದ್ಯರಲ್ಲಿಯೂ, ಗ್ರೀಕರಲ್ಲಿಯೂ ಬಹುಮಂದಿ ಕರ್ತನಾದ ಯೇಸುಕ್ರಿಸ್ತನನ್ನು ನಂಬುವವರಾದರು.


ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.


ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಅಲ್ಲಿ ಸುಮಾರು ಹನ್ನೆರಡು ಮಂದಿ ಗಂಡಸರಿದ್ದರು.


ಇದು ಎರಡು ವರ್ಷಗಳ ವರೆಗೂ ನಡೆದಿದ್ದರಿಂದ ಅಸ್ಯಸೀಮೆಯಲ್ಲಿ ವಾಸವಾಗಿದ್ದ ಎಲ್ಲಾ ಯೆಹೂದ್ಯರೂ, ಗ್ರೀಕರೂ, ಕರ್ತನ ವಾಕ್ಯವನ್ನು ಕೇಳಿದರು.


ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು