ಅಪೊಸ್ತಲರ ಕೃತ್ಯಗಳು 2:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 “ಕಡೆ ದಿನಗಳಲ್ಲಿ ನಾನು ಎಲ್ಲಾ ಜನರ ಮೇಲೆ ನನ್ನ ಆತ್ಮವನ್ನು ಸುರಿಸುವೆನು, ಆಗ ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಸುರಿಸುವೆನು ಸರ್ವರ ಮೇಲೂ ಎನ್ನಾತ್ಮವನು ಅಂತಿಮ ದಿನಗಳಲಿ; ಪ್ರವಾದಿಸುವರಾಗ ನಿಮ್ಮ ಕುವರ ಕುವರಿಯರು; ದಿವ್ಯದರ್ಶನ ಪಡೆವರು ನಿಮ್ಮ ಯುವಜನರು; ಕನಸುಕಾಣುವರು ನಿಮ್ಮ ವಯೋವೃದ್ಧರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಕಡೇ ದಿವಸಗಳಲ್ಲಿ ನಾನು ಎಲ್ಲಾ ಮನುಷ್ಯರ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ನಿಮ್ಮಲ್ಲಿರುವ ಗಂಡಸರೂ ಹೆಂಗಸರೂ ಪ್ರವಾದಿಸುವರು; ನಿಮ್ಮ ಯೌವನಸ್ಥರಿಗೆ ದಿವ್ಯದರ್ಶನಗಳಾಗುವವು; ನಿಮ್ಮ ಹಿರಿಯರಿಗೆ ಕನಸುಗಳು ಬೀಳುವವು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ‘ದೇವರು ಹೀಗೆನ್ನುತ್ತಾನೆ: ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ದೇವರು ಹೇಳುವುದೇನೆಂದರೆ: ‘ಅಂತ್ಯ ದಿನಗಳಲ್ಲಿ ನನ್ನ ಆತ್ಮವನ್ನು ಎಲ್ಲಾ ಮನುಷ್ಯರ ಮೇಲೆ ಸುರಿಸುವೆನು, ನಿಮ್ಮ ಗಂಡು ಹೆಣ್ಣುಮಕ್ಕಳು ಪ್ರವಾದಿಸುವರು, ನಿಮ್ಮ ಯುವಜನರಿಗೆ ದರ್ಶನಗಳು ಕಾಣುವವು, ನಿಮ್ಮ ಹಿರಿಯರಿಗೆ ಕನಸುಗಳು ಬೀಳುವುವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಆಕ್ರಿಚ್ಯಾ ದಿಸಾತ್ನಿ ಅಪ್ನಿ ಕರ್‍ತಲೆ ಕಾಯ್ ಮನುನ್ ದೆವ್ ಸಾಂಗ್ತಾ! ಮಿಯಾ ಮಾಜೊ ಆತ್ಮೊ ಸಗ್ಳ್ಯಾ ಲೊಕಾಂಚ್ಯಾ ವರ್‍ತಿ ಘಾಲ್ತಾ, ತುಮ್ಚಿ ಲೆಕಾ ಅನಿ ಲೆಕಿಯಾ ಪ್ರವಾದ್ ಕರ್ತಾತ್, ತುಮ್ಚಿ ದಾಂಡ್ಗಿ ಲೊಕಾ ದರ್ಶನ್ ಬಗ್ತ್ಯಾತ್, ಅನಿ ತುಮ್ಚಿ ಮ್ಹಾತಾರಿ ಮಾನ್ಸಾ ಸಪ್ನಾ ಬಗ್ತ್ಯಾತ್. ಅಧ್ಯಾಯವನ್ನು ನೋಡಿ |
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.