Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಅವನ ಮಾತಿಗೆ ಒಪ್ಪಿಕೊಂಡವರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿವಸ ಸುಮಾರು ಮೂರುಸಾವಿರ ಜನರು ಅವರಲ್ಲಿ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಪೇತ್ರನ ಸಂದೇಶವನ್ನು ಸ್ವೀಕರಿಸಿದವರು ದೀಕ್ಷಾಸ್ನಾನ ಪಡೆದರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತೆಂಚ್ಯಾತ್ಲ್ಯಾ ಲೈ ಲೊಕಾನಿ ಪೆದ್ರು ಸಾಂಗ್ತಲೆ ವಿಶ್ವಾಸ್ ಕರ್‍ಲ್ಯಾನಿ ಅನಿ ಬಾಲ್ತಿಮ್ ಘೆಟ್ಲ್ಯಾನಿ, ತ್ಯಾ ದಿಸಿ ಸುಮಾರ್ ತಿನ್ ಹಜಾರ್ ಲೊಕಾ ದೆವಾಚ್ಯಾ ಲೊಂಕಾಂಚ್ಯಾ ತಾಂಡ್ಯಾಕ್ ಮಿಳ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:41
21 ತಿಳಿವುಗಳ ಹೋಲಿಕೆ  

ಆದರೆ ವಾಕ್ಯವನ್ನು ಕೇಳಿದವರಲ್ಲಿ ಅನೇಕರು ನಂಬಿದರು; ಗಂಡಸರ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.


ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;


“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಇದಲ್ಲದೆ ನೀವು ಬಹಳ ಹಿಂಸೆಯನ್ನು ಅನುಭವಿಸಬೇಕಾಗಿ ಬಂದಿದ್ದರೂ ಪವಿತ್ರಾತ್ಮನಿಂದುಂಟಾದ ಆನಂದದೊಡನೆ ದೇವರ ವಾಕ್ಯವನ್ನು ಅಂಗೀಕರಿಸಿ, ನಮ್ಮನ್ನು ಮತ್ತು ಕರ್ತನಾದ ಯೇಸುವನ್ನು ಅನುಸರಿಸುವವರಾದಿರಿ.


ಆ ಪ್ರವಾದಿಯ ಮಾತನ್ನು ಕೇಳದಿರುವ ಪ್ರತಿಯೊಬ್ಬನು ನಮ್ಮ ಜನರೊಳಗಿಂದ ಸಂಪೂರ್ಣವಾಗಿ ನಾಶವಾಗುವನು’ ಎಂಬುದೇ.


ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು.


ಆ ಹಡಗಿನಲ್ಲಿದ್ದ ನಾವೆಲ್ಲರೂ ಒಟ್ಟು ಇನ್ನೂರ ಎಪ್ಪತ್ತಾರು ಮಂದಿ ಇದ್ದೇವು.


ಪ್ರತಿ ಮನುಷ್ಯನು ತನ್ನ ಮೇಲಿರುವ ಅಧಿಕಾರಿಗಳಿಗೆ ಅಧೀನನಾಗಿರಲಿ. ಯಾಕೆಂದರೆ ದೇವರಿಂದ ಹೊರತು ಒಬ್ಬರಿಗೂ ಅಧಿಕಾರವು ದೊರೆತಿರುವುದಿಲ್ಲ. ಇರುವ ಅಧಿಕಾರಿಗಳಾದರೋ ದೇವರಿಂದ ನೇಮಿಸಲ್ಪಟ್ಟವರು.


ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.


ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.


ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು