Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಎಲ್ಲರೂ ಭಯ ಪರವಶರಾದರು. ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ, ಸೂಚಕಕಾರ್ಯಗಳೂ ಅಪೊಸ್ತಲರ ಮುಖಾಂತರ ನಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಪ್ರೇಷಿತರ ಮುಖಾಂತರ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ನಡೆಯುತ್ತಿದ್ದವು. ಇವನ್ನು ಕಂಡು ಜನರು ಭಯಭ್ರಾಂತರಾಗುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಎಲ್ಲರಿಗೂ ಭಯ ಉಂಟಾಯಿತು, ಇದಲ್ಲದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಅಪೊಸ್ತಲರ ಕೈಯಿಂದ ನಡೆದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಅಪೊಸ್ತಲರು ಅನೇಕ ಶಕ್ತಿಯುತ ಮತ್ತು ಅದ್ಭುತಕಾರ್ಯಗಳನ್ನು ಮಾಡುತ್ತಿದ್ದರು; ಮತ್ತು ಪ್ರತಿಯೊಬ್ಬರಿಗೂ ದೇವರಲ್ಲಿ ಭಯಭಕ್ತಿ ಉಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಪ್ರತಿಯೊಬ್ಬರೂ ಭಯಭಕ್ತಿಉಳ್ಳವರಾಗಿದ್ದರು. ಅಪೊಸ್ತಲರು ಅನೇಕ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಅಪೊಸ್ತಲಾನಿ ಲೈ ಅಜಾಪಾ ಅನಿ ವಿಚಿತ್ರಾ ಕರಿತ್ ಹೊತ್ತ್ಯಾನಿ ಅನಿ ಹರ್ ಎಕ್ಲ್ಯಾಕ್ಬಿ ದೆವಾಚ್ಯಾ ವರ್‍ತಿ ಭಕ್ತಿ ವಾಡ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:43
15 ತಿಳಿವುಗಳ ಹೋಲಿಕೆ  

“ನಿಮಗೆ ನಿಜನಿಜವಾಗಿ ಹೇಳುತ್ತೇನೆ. ನನ್ನನ್ನು ನಂಬುವವನು ನಾನು ಮಾಡುವ ಕಾರ್ಯಗಳನ್ನು ತಾನು ಸಹ ಮಾಡುತ್ತಾನೆ; ಮತ್ತು ಇವುಗಳಿಗಿಂತ ಮಹತ್ತಾದ ಕ್ರಿಯೆಗಳನ್ನು ಮಾಡುವನು, ಏಕೆಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ.


ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.


ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.


“ಇದಲ್ಲದೆ ನಂಬುವವರಿಂದ ಈ ಸೂಚಕಕಾರ್ಯಗಳು ಉಂಟಾಗುವವು; ಅವರು ನನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸುವರು, ಹೊಸ ಭಾಷೆಗಳಲ್ಲಿ ಮಾತನಾಡುವರು;


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು.


ಮತ್ತು ಕರ್ತನಾದ ಯೇಸುವಿನ ಪುನರುತ್ಥಾನಕ್ಕೆ ಅಪೊಸ್ತಲರು ಬಹು ಬಲವಾಗಿ ಸಾಕ್ಷಿ ಹೇಳುತ್ತಿದ್ದರು; ದೇವರ ದಯವು ಅವರೆಲ್ಲರ ಮೇಲೆ ಪೂರ್ಣವಾಗಿತ್ತು.


ಅನಂತರ ಅವರು ತಮ್ಮ ದೇವರಾದ ಯೆಹೋವನನ್ನೂ ಮತ್ತು ತಮ್ಮ ರಾಜನಾದ ದಾವೀದನನ್ನೂ ಪುನಃ ಆಶ್ರಯಿಸುವರು. ಹೌದು, ಅಂತ್ಯಕಾಲದಲ್ಲಿ ಯೆಹೋವನನ್ನೂ, ಆತನ ದಯೆಯನ್ನೂ ಭಯಭಕ್ತಿಯಿಂದ ಪಡೆಯುವರು.


ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.


ಪೇತ್ರನು ಅವನಿಗೆ, “ಐನೇಯನೇ, ಯೇಸು ಕ್ರಿಸ್ತನು ನಿನ್ನನ್ನು ವಾಸಿಮಾಡುತ್ತಾನೆ; ಎದ್ದು ನಿನ್ನ ಹಾಸಿಗೆಯನ್ನು ನೀನೇ ಹಾಸಿಕೋ” ಎಂದು ಹೇಳಿದನು. ಕೂಡಲೆ ಅವನು ಎದ್ದನು.


“ಇಸ್ರಾಯೇಲ್ ಜನರೇ, ನನ್ನ ಮಾತುಗಳನ್ನು ಕೇಳಿರಿ;, ನಜರೇತಿನ ಯೇಸು ಇದ್ದನಲ್ಲಾ, ನಿಮಗೂ ತಿಳಿದಿರುವಂತೆ ದೇವರು ಆತನ ಕೈಯಿಂದ ಮಹತ್ತುಗಳನ್ನೂ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ನಿಮ್ಮಲ್ಲಿ ನಡಿಸಿ ಆತನನ್ನು ತನಗೆ ಮೆಚ್ಚಿಕೆಯಾದವನೆಂದು ನಿಮಗೆ ತೋರಿಸಿಕೊಟ್ಟನು.


ಈ ಮಾತುಗಳನ್ನು ಅನನೀಯನು ಕೇಳಿದ ತಕ್ಷಣವೇ ಬಿದ್ದು ಪ್ರಾಣಬಿಟ್ಟನು; ಕೇಳಿದವರೆಲ್ಲರಿಗೂ ಮಹಾ ಭಯ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು