Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ತಮ್ಮತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರಿಗೆ ಅಗತ್ಯವಿದ್ದ ಹಾಗೆ ಹಂಚಿಕೊಳ್ಳುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45 ತಮ್ಮ ತಮ್ಮ ಚರಸ್ಥಿರಸೊತ್ತುಗಳನ್ನು ಮಾರಿ ಬಂದ ಹಣವನ್ನು ಎಲ್ಲರಿಗೂ ಅವರವರ ಅಗತ್ಯವಿದ್ದ ಹಾಗೆ ಹಂಚಿಕೊಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವರು ಆಸ್ತಿಪಾಸ್ತಿಯನ್ನು ಮಾರಿ ಅವರವರ ಅವಶ್ಯಕತೆಗೆ ಅನುಸಾರವಾಗಿ ಎಲ್ಲರಿಗೂ ಹಂಚುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

45 ಅಪ್ಲೆ ಸೆತ್ ಅನಿ ತೆಂಚ್ಯಾಕ್ಡೆ ಹೊತ್ತಿ ಸಗ್ಳಿ ಸಾಮಾನಾ ಇಕುನ್ ಗಾವಲ್ಲೆ ಪೈಸೆ ಕೊನಾಕ್ ಗರಜ್ ಹಾಯ್ ತೆಂಕಾ ವಾಟುನ್ ದಿಯ್ತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:45
20 ತಿಳಿವುಗಳ ಹೋಲಿಕೆ  

ಆದರೆ ಈ ಲೋಕದ ಸಂಪತ್ತುಳ್ಳ ಯಾರಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕನಿಕರಪಡದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರಲು ಸಾಧ್ಯವೇ?


ಅವರಲ್ಲಿ ಕೊರತೆಪಡುತ್ತಿದ್ದವನೂ ಒಬ್ಬನೂ ಇರಲಿಲ್ಲ, ಏಕೆಂದರೆ ಹೊಲಮನೆಗಳಿದ್ದವರು ಅವುಗಳನ್ನು ಮಾರಿ ಬಂದ ಹಣವನ್ನು ತಂದು


ಯೇಸು ಅದನ್ನು ಕೇಳಿ ಅವನಿಗೆ, “ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.


“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”


ಆಗ ಆ ಶಿಷ್ಯರಲ್ಲಿ ಪ್ರತಿಯೊಬ್ಬರೂ ಯೂದಾಯ ಸೀಮೆಯಲ್ಲಿ ವಾಸವಾಗಿದ್ದ ಸಹೋದರರಿಗೆ ತಮ್ಮತಮ್ಮ ಶಕ್ತ್ಯಾನುಸಾರ ಧನಸಹಾಯ ಮಾಡಬೇಕೆಂದು ತೀರ್ಮಾನಿಸಿಕೊಂಡರು.


ಯೇಸು ಅವನಿಗೆ, “ನೀನು ಪೂರ್ಣನಾಗುವುದಕ್ಕೆ ಬಯಸುವುದಾದರೆ, ಹೋಗಿ ನಿನಗಿರುವುದನ್ನೆಲ್ಲಾ ಮಾರಿ, ಬಡವರಿಗೆ ಕೊಡು, ಆಗ ನಿನಗೆ ಪರಲೋಕದಲ್ಲಿ ಸಂಪತ್ತಿರುವುದು. ಅನಂತರ ನೀನು ಬಂದು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.


“ಅನ್ಯಾಯದ ಧನದ ಮೂಲಕವಾಗಿ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ. ಹೀಗೆ ಮಾಡಿದರೆ ಅದು ನಿಮ್ಮ ಕೈಬಿಟ್ಟುಹೋದಾಗ ಅವರು ನಿಮ್ಮನ್ನು ಶಾಶ್ವತವಾದ ವಾಸಸ್ಥಾನಗಳಲ್ಲಿ ಸೇರಿಸಿಕೊಳ್ಳುವರು ಎಂದು ನಾನು ನಿಮಗೆ ಹೇಳುತ್ತೇನೆ.


ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ.


ಅಪೊಸ್ತಲರ ಪಾದಗಳ ಬಳಿಯಲ್ಲಿ ಇಡುತ್ತಿದ್ದರು; ಅದನ್ನು ಪ್ರತಿಯೊಬ್ಬನಿಗೆ ಅವನವನ ಅವಶ್ಯಕತೆಗೆ ತಕ್ಕಂತೆ ಹಂಚಿ ಕೊಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು