Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 2:46 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

46 ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

46 ದಿನಂಪ್ರತಿ ಅವರು ಒಮ್ಮನಸ್ಸಿನಿಂದ ದೇವಾಲಯದಲ್ಲಿ ಸಭೆ ಸೇರುತ್ತಿದ್ದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುವ ಸಹಭೋಜನವನ್ನು ಏರ್ಪಡಿಸಿ ಸಂತೋಷದಿಂದಲೂ ಸಹೃದಯದಿಂದಲೂ ಭಾಗವಹಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

46 ಅವರು ದಿನಾಲು ಏಕಮನಸ್ಸಿನಿಂದ ದೇವಾಲಯದಲ್ಲಿ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ ಸರಲ ಹೃದಯದಿಂದಲೂ ಊಟಮಾಡುತ್ತಾ ಇದ್ದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

46 ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

46 ಪ್ರತಿದಿನವೂ ದೇವಾಲಯದಲ್ಲಿ ಒಮ್ಮನಸ್ಸಿನಿಂದ ಸಭೆ ಕೂಡಿಬರುವುದನ್ನು ಕ್ರಮವಾಗಿ ಮುಂದುವರೆಸಿದರು. ತಮ್ಮ ಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಆನಂದದಿಂದಲೂ ಸರಳ ಹೃದಯದಿಂದಲೂ ಊಟಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

46 ಸದ್ದಿಚ್ ತೆನಿ ಜಮಾ ಹೊವ್ನ್ ದೆವಾಚ್ಯಾ ಗುಡಿತ್ ಎಕ್ವಟ್ಟಾನಿ ಯೆಯ್ತ್ ಅನಿ ಅಪ್ಲ್ಯಾ ಘರಾತ್ನಿ ಎಕುಚ್ ಕಡೆ ಮಿಳುನ್ ಜೆವಾನ್ ಕರಿತ್, ಕುಶಿನ್ ಅನಿ ಖಾಲ್ತಿ ಹೊವ್ನ್ ಚಲ್ತಲ್ಯಾ ಮನಾನಿ ಜೆವಾನ್ ಕರಿತ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 2:46
25 ತಿಳಿವುಗಳ ಹೋಲಿಕೆ  

ಹಿರೀಸಭೆಯ ಎದುರಿನಿಂದ ಹೊರಟುಹೋಗಿ, ಪ್ರತಿದಿನ ಎಡೆಬಿಡದೆ ದೇವಾಲಯದಲ್ಲಿಯೂ, ಮನೆಮನೆಗಳಲ್ಲಿಯೂ, ಉಪದೇಶಮಾಡುತ್ತಾ ಕ್ರಿಸ್ತನಾದ ಯೇಸುವಿನ ಕುರಿತು ಶುಭವರ್ತಮಾನವನ್ನು ಸಾರುತ್ತಾ ಇದ್ದರು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.


ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.


ಬೋಧಿಸುವವನು ಬೋಧಿಸುವುದರಲ್ಲಿಯೂ, ಬುದ್ಧಿಹೇಳುವವನು ಬುದ್ಧಿ ಹೇಳುವುದರಲ್ಲಿಯೂ ನಿರತನಾಗಿರಲಿ. ದಾನಕೊಡುವವನು ಯಥಾರ್ಥಮನಸ್ಸಿನಿಂದ ಕೊಡಲಿ. ದಾರಿ ತೋರಿಸುವವನು ಆಸಕ್ತಿಯಿಂದ ಅದನ್ನು ಮಾಡಲಿ. ಕಷ್ಟದಲ್ಲಿರುವವರಿಗೆ ಉಪಕಾರಮಾಡುವವನು ಸಂತೋಷವಾಗಿ ಮಾಡಲಿ.


ಇದಲ್ಲದೆ ನೆಹೆಮೀಯನು ಅವರಿಗೆ, “ಹೋಗಿ, ಮೃಷ್ಟಾನ್ನವನ್ನೂ, ಮಧುರಪಾನವನ್ನೂ ತೆಗೆದುಕೊಳ್ಳಿರಿ, ತಮಗೋಸ್ಕರ ಏನೂ ಸಿದ್ಧಮಾಡದವರಿಗೆ ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಕರ್ತನಿಗೆ ಪರಿಶುದ್ಧ ದಿನವಾಗಿರುವುದರಿಂದ ದುಃಖಪಡಬೇಡಿರಿ; ಯೆಹೋವನ ಆನಂದವೇ ನಿಮ್ಮ ಬಲವಾಗಿದೆ” ಎಂದನು.


ನಿರಂತರವಾಗಿ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.


ಮತ್ತು ಆತನು ತನ್ನ ಹೆಸರನ್ನು ಸ್ಥಾಪಿಸುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲಿ ನೀವೂ ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ, ನಿಮ್ಮ ಊರಲ್ಲಿರುವ ಲೇವಿಯರೂ, ಪರದೇಶದವರೂ, ಅನಾಥರು ಮತ್ತು ವಿಧವೆಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂಭ್ರಮಿಸಬೇಕು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ಒಂದು ದಿನ ಪೇತ್ರ ಮತ್ತು ಯೋಹಾನನು ಮಧ್ಯಾಹ್ನದ ಮೇಲೆ ಮೂರು ಘಂಟೆಗೆ ನಡೆಯತ್ತಿದ್ದ ಪ್ರಾರ್ಥನೆಗಾಗಿ ದೇವಾಲಯಕ್ಕೆ ಹೋದರು.


ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,


“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


ಅಲ್ಲಿ ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸ ದಾಸಿಯರೂ ಮತ್ತು ನಿಮ್ಮೊಡನೆ ಸ್ವತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.


ಹೇಗೂ ಒಳಗಿರುವಂಥದನ್ನು ದಾನಕೊಡಿರಿ, ಆಗ ಸಕಲವೂ ನಿಮಗೆ ಶುದ್ಧವಾಗಿರುವುದು.


ಅಲ್ಲಿಯೇ ಆತನ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ಮತ್ತು ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು