Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಕೂಡ ಕರೆಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಗಲಭೆಯು ನಿಂತುಹೋದ ಮೇಲೆ, ಪೌಲನು ಯೇಸುವಿನ ಶಿಷ್ಯರನ್ನು ಕರೆಯಿಸಿ ಅವರನ್ನು ಧೈರ್ಯಪಡಿಸಿದನು. ಬಳಿಕ ಪೌಲನು ಅಲ್ಲಿಂದ ಹೊರಟು ಮಕೆದೋನಿಯಾಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಲಭೆಯು ಶಾಂತಗೊಂಡ ನಂತರ ಪೌಲನು ಶಿಷ್ಯರನ್ನು ಕರೆಕಳುಹಿಸಿ ಅವರಿಗೆ ಧೈರ್ಯ ಹೇಳಿ, ಅವರನ್ನು ಬೀಳ್ಕೊಟ್ಟು ಮಕೆದೋನ್ಯಕ್ಕೆ ಪ್ರಯಾಣಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ದಾಂದಲ್ ಇಬೆ ಹೊತ್ತ್ಯಾ ಮಾನಾ, ಪಾವ್ಲುನ್ ವಿಶ್ವಾಸಿ ಲೊಕಾಕ್ನಿ ಗೊಳಾ ಕರುನ್ ತೆಂಕಾ ಧೈರ್ಯಾಚಿ ಗೊಸ್ಟಿಯಾ ಸಾಂಗುನ್, ಅನಿ ಜಾವ್ನ್ ಯೆತಾ ಮನುನ್ ಮೆಸೆದೊನಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:1
20 ತಿಳಿವುಗಳ ಹೋಲಿಕೆ  

ನಾವು ಮಕೆದೋನ್ಯಕ್ಕೆ ಬಂದ ಮೇಲೂ ನಮ್ಮ ದೇಹಕ್ಕೆ ನೆಮ್ಮದಿ ಇರಲಿಲ್ಲ, ಬದಲಾಗಿ ಎಲ್ಲಾ ವಿಷಯಗಳಲ್ಲಿಯೂ ನಮಗೆ ತೊಂದರೆಗಳಿದ್ದವು. ಹೊರಗೆ ಜಗಳ, ಒಳಗೆ ಭಯ


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ನಾನು ಮಕೆದೋನ್ಯಕ್ಕೆ ಹೋಗುತ್ತಿದ್ದಾಗ ನೀನು ಎಫೆಸದಲ್ಲೇ ಇದ್ದುಕೊಂಡು ಅಲ್ಲಿರುವ ಕೆಲವರಿಗೆ, ನೀವು ಬೇರೆ ಉಪದೇಶವನ್ನು ಮಾಡಬಾರದೆಂತಲೂ,


ಪವಿತ್ರವಾದ ಮುದ್ದಿಟ್ಟು ಸಹೋದರರೆಲ್ಲರನ್ನೂ ವಂದಿಸಿರಿ.


ಸಹೋದರರೆಲ್ಲರೂ ನಿಮಗೆ ವಂದನೆ ಹೇಳುತ್ತಿದ್ದಾರೆ. ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ನಾನು ಹಾದುಹೋಗಬೇಕೆಂದಿರುವ ಮಕೆದೋನ್ಯ ಸೀಮೆಯನ್ನು ದಾಟುವಾಗ ನಿಮ್ಮ ಬಳಿಗೆ ಬಂದು ಬಹುಶಃ ನಿಮ್ಮ ಬಳಿಯಲ್ಲೇ ಉಳಿದುಕೊಳ್ಳುವೆನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ. ಕ್ರಿಸ್ತನ ಸಭೆಗಳಲ್ಲಿರುವವರೆಲ್ಲರೂ ನಿಮ್ಮನ್ನು ವಂದಿಸುತ್ತಿದ್ದಾರೆ.


ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.


ಆದರೆ ಪೌಲನು ಇಳಿದು ಹೋಗಿ ಅವನ ಮೇಲೆ ಬಿದ್ದು ತಬ್ಬಿಕೊಂಡು; “ಗೋಳಾಡಬೇಡಿರಿ, ಅವನು ಜೀವಂತವಾಗಿದ್ದಾನೆ” ಎಂದು ಹೇಳಿದನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.


ಆಮೇಲೆ ಅವರು ಒಂದು ವರ್ಷ ಪೂರ್ತಿಯಾಗಿ ಸಭೆಯವರೊಂದಿಗಿದ್ದುಕೊಂಡು ಬಹು ಜನರಿಗೆ ಉಪದೇಶಮಾಡಿದರು. ಅಂತಿಯೋಕ್ಯದಲ್ಲಿಯೇ ಶಿಷ್ಯರಿಗೆ ಪ್ರಥಮಬಾರಿಗೆ ‘ಕ್ರೈಸ್ತರು’ ಎಂಬ ಹೆಸರು ಬಂದದ್ದು.


ಇಸ್ರಾಯೇಲನು ವೃದ್ಧಾಪ್ಯದಿಂದ ಮೊಬ್ಬು ಕಣ್ಣುಳ್ಳವನಾಗಿ ನೋಡಲಾರದೆ ಇದ್ದನು. ಯೋಸೇಫನು ಅವರನ್ನು ಅವನ ಬಳಿಗೆ ಕರೆದುಕೊಂಡು ಬರಲು ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.


ಪವಿತ್ರವಾದ ಮುದ್ದಿಟ್ಟು ಒಬ್ಬರನ್ನೊಬ್ಬರು ವಂದಿಸಿರಿ.


ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.


ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.


ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು