Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಸಲ್ಲಾಪಮಾಡಿ ಹಾಗೆ ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪೌಲನು ಮತ್ತೆ ಮೇಲಂತಸ್ತಿಗೆ ಹೋಗಿ ರೊಟ್ಟಿಯನ್ನು ಮುರಿದು ಊಟಮಾಡಿದನು. ಪೌಲನು ಅವರೊಂದಿಗೆ ದೀರ್ಘಕಾಲ ಮಾತಾಡಿದನು. ಅಷ್ಟರಲ್ಲಿಯೇ ಮುಂಜಾನೆಯಾಗಿತ್ತು. ಬಳಿಕ ಪೌಲನು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅನಂತರ ಪೌಲನು ಮೇಲಂತಸ್ತಿಗೆ ಹೋಗಿ ವಿಶ್ವಾಸಿಗಳೊಂದಿಗೆ ರೊಟ್ಟಿ ಮುರಿದು ಊಟಮಾಡಿ, ಬೆಳಗಾಗುವವರೆಗೆ ಅವರೊಡನೆ ಮಾತನಾಡಿ, ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತನ್ನಾ ತೆನಿ ಅನಿ ಪರ್ತುನ್ ಮಾಳ್ಗಿಕ್ ಜಾವ್ನ್ ಭಾಕ್ರಿ ಮೊಡುನ್ ಜೆವಾನ್ ಕರ್‍ಲ್ಯಾನಿ, ಅನಿ ತೆಂಚ್ಯಾ ವಾಂಗ್ಡಾ ಉಜ್ವಾಡಿ ಪತರ್ಬಿ ಬೊಲ್ಯಾನ್, ಮಾನಾ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:11
4 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.


ಯೂತಿಖನೆಂಬ ಒಬ್ಬ ಯೌವನಸ್ಥನು ಕಿಟಿಕಿಯ ಹೊಸ್ತಿಲಿನಲ್ಲಿ ಕುಳಿತುಕೊಂಡು ಗಾಢನಿದ್ರೆಯಿಂದ ತೂಕಡಿಸುತ್ತಿದ್ದನು. ಪೌಲನು ಇನ್ನೂ ಬೋಧನೆ ಮಾಡುತ್ತಾ ಇದ್ದಾಗ ಆ ಯೌವನಸ್ಥನು ಗಾಢವಾದ ನಿದ್ರೆಯಿಂದ ತೂಕಡಿಸಿ ಮೂರನೆಯ ಅಂತಸ್ತಿನಿಂದ ಕೆಳಕ್ಕೆ ಬಿದ್ದುಬಿಟ್ಟನು; ಅವನನ್ನು ಎಬ್ಬಿಸಲು ಹೋದಾಗ ಅವನು ಸತ್ತುಹೋಗಿದ್ದನು.


ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.


ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು