Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪೌಲನು ನಮಗಿತ್ತ ಸೂಚನೆಯ ಪ್ರಕಾರ ನಾವು ಹಡಗುಹತ್ತಿ ಅಸ್ಸೊಸಿ ಎಂಬ ಊರಿಗೆ ಮುಂಚಿತವಾಗಿ ಪ್ರಯಾಣಮಾಡಿದೆವು. ತಾನು ಅಲ್ಲಿಗೆ ಭೂಮಾರ್ಗವಾಗಿ ಬರುವುದಾಗಿಯೂ ಅಲ್ಲಿ ತನ್ನನ್ನು ಹಡಗಿಗೆ ಏರಿಸಿಕೊಳ್ಳಬೇಕೆಂದೂ ಪೌಲನು ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾವು ಮೊದಲು ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ಹತ್ತಿಸಿಕೊಳ್ಳಬೇಕೆಂದು ಅಲ್ಲಿಗೆ ಸಮುದ್ರಪ್ರಯಾಣ ಮಾಡಿದೆವು. ಪೌಲನು ತಾನು ಕಾಲುನಡೆಯಾಗಿ ಹೋಗಬೇಕೆಂದು ಹಾಗೆಯೇ ನಮಗೆ ಅಪ್ಪಣೆ ಮಾಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಾವು ಪೌಲನಿಗಿಂತ ಮುಂಚಿತವಾಗಿಯೇ ಅಸ್ಸೊಸಿ ಎಂಬ ಪಟ್ಟಣಕ್ಕೆ ನೌಕಾಯಾನ ಮಾಡಿದೆವು. ತಾನು ಭೂಮಾರ್ಗವಾಗಿ ಬರುವುದಾಗಿಯೂ ಅಸ್ಸೊಸಿನಲ್ಲಿ ನಮ್ಮನ್ನು ಸಂಧಿಸಿ ಅಲ್ಲಿಂದ ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡುವುದಾಗಿಯೂ ಪೌಲನು ನಮಗೆ ತಿಳಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಮೊದಲು ನಾವು ನೌಕೆ ಇದ್ದ ಸ್ಥಳಕ್ಕೆ ಹೋಗಿ ಅಸ್ಸೊಸಿ ಎಂಬಲ್ಲಿಗೆ ಸಮುದ್ರ ಪ್ರಯಾಣಮಾಡಿದೆವು. ಅಲ್ಲಿ ಪೌಲನು ಬಂದು ನಮ್ಮೊಂದಿಗೆ ನೌಕೆಯಲ್ಲಿ ಪ್ರಯಾಣ ಮಾಡಬೇಕಿತ್ತು. ಅಲ್ಲಿಗೆ ಕಾಲ್ನಡಿಗೆಯಾಗಿ ಹೋಗಬೇಕಾದ್ದರಿಂದ ಅವನು ಈ ಏರ್ಪಾಡು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಮಿ ಪಿಡೆ ಢೊನಿತ್ನಾ ಜಗ್ಗೊಳ್ ಜಾವ್ನ್ ಅಸ್ಸೊಸ್ಸಿ ಶಾರಾಕ್ ಜಾವ್ಕ್ ಲಾಗಲಾಂವ್ , ಅನಿ ಪಾವ್ಲುಕ್‍ಬಿ ಅಮ್ಚ್ಯಾಕ್ನಾ ನ್ಹೆವ್ಚೆ ಮನುನ್ ಚಿಂತಲಾಂವ್, ತೊ ಪಾಯ್ ವಾಟೆನ್ ಚಲುನ್ ಥೈ ಜಾನಾರ್ ಹೊಲ್ಲೊ, ತೆಚ್ಯಾ ಸಾಟ್ನಿ ತೆನಿ ಅಮ್ಕಾ ತಯಾರಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:13
7 ತಿಳಿವುಗಳ ಹೋಲಿಕೆ  

ಆತನು ಜನರನ್ನು ಕಳುಹಿಸಿಕೊಟ್ಟ ನಂತರ ಪ್ರಾರ್ಥನೆ ಮಾಡುವುದಕ್ಕಾಗಿ ಬೆಟ್ಟಕ್ಕೆ ಹೋದನು.


ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.


ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.


ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು


ಅವರು ಜೀವಿತನಾದ ಆ ಹುಡುಗನನ್ನು ಕರೆದುಕೊಂಡು ಬರಲು ಅವರಿಗೆ ಬಹಳ ಸಮಾಧಾನವಾಯಿತು.


ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು