Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿವಸದ ಹಬ್ಬಕ್ಕೆ ಯೆರೂಸಲೇವಿುನಲ್ಲಿರಬೇಕೆಂದು ಅವಸರಪಡುತ್ತಾ ಇದ್ದದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವದಕ್ಕೆ ಮನಸ್ಸಿಲ್ಲದೆ ಎಫೆಸಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಎಫೆಸದಲ್ಲಿ ತಂಗಬಾರದೆಂದು ಪೌಲನು ಆಗಲೇ ನಿರ್ಧಾರ ಮಾಡಿದ್ದನು. ಏಷ್ಯಾದಲ್ಲಿ ದೀರ್ಘಕಾಲ ತಂಗಲು ಅವನಿಗೆ ಇಷ್ಟವಿರಲಿಲ್ಲ. ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂದು ಅವನು ತನ್ನ ಪ್ರಯಾಣವನ್ನು ತ್ವರಿತಗೊಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಸಾಧ್ಯವಾದರೆ, ಪೆಂಟೆಕೋಸ್ಟ್ ಎಂಬ ಐವತ್ತನೆಯ ದಿನದ ಹಬ್ಬಕ್ಕೆ ಯೆರೂಸಲೇಮನ್ನು ತಲುಪಬೇಕೆಂಬ ಅವಸರ ಪೌಲನಿಗಿದ್ದುದ್ದರಿಂದ, ಏಷ್ಯಾ ಪ್ರಾಂತದಲ್ಲಿ ಕಾಲ ಕಳೆಯುವುದನ್ನು ತಪ್ಪಿಸಿ ಎಫೆಸವನ್ನು ದಾಟಿ ಹೋಗಬೇಕೆಂದು ನಿರ್ಧರಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಪಾವ್ಲುನ್ ಆಶಿಯಾ ಪ್ರಾಂತ್ಯಾತ್ ಅಪ್ಲಿ ದಿಸಾ ಕಳ್ದುಕ್ ಮನ್ ನಸ್ತಾನಾ ಎಪೆಸಾ ಶಾರಾಕ್ ದಾಟುನ್ ಜಾವ್ಚೆ ಮನುನ್ ನಿರ್ಧಾರ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಹೊತಾ ತೊವ್ಡೆ ಲಗುನಾಚ್ ಪಂತೆಕೊಸ್ತಾ ದಿಸಿ ಜೆರುಜೆಲೆಮಾಕ್ ಜಾವ್ನ್ ಪಾವ್ನಾರ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:16
17 ತಿಳಿವುಗಳ ಹೋಲಿಕೆ  

ಪಂಚಾಶತ್ತಮ ದಿನ ಹಬ್ಬದ ತನಕ ಎಫೆಸದಲ್ಲಿರುವೆನು;


ಪಂಚಾಶತ್ತಮ ದಿನದ ಹಬ್ಬವು ಬಂದಿರಲಾಗಿ ಅವರೆಲ್ಲರೂ ಒಮ್ಮಸ್ಸಿನಿಂದ ಒಂದೇ ಸ್ಥಳದಲ್ಲಿ ಕೂಡಿಬಂದಿದ್ದರು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


“ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.


ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.


ನಾವು ಮೊದಲೇ ಅಲ್ಲಿಗೆ ಹೋಗಿ ಅಸ್ಸೊಸಿನಲ್ಲಿ ಪೌಲನನ್ನು ತಮ್ಮೊಂದಿಗೆ ಹತ್ತಿಸಿಕೊಳ್ಳಬೇಕೆಂದು ಸಮುದ್ರ ಪ್ರಯಾಣಮಾಡಿದೆವು. ಪೌಲನು ಹಾಗೆಯೇ ನಮಗೆ ಅಪ್ಪಣೆ ಮಾಡಿ ತಾನು ಕಾಲುನಡಿಗೆಯಾಗಿ ಹೋಗಬೇಕೆಂದು ಮನಸ್ಸು ಮಾಡಿದ್ದನು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.


“ದೇವರ ಚಿತ್ತವಾದರೆ ಪುನಃ ನಿಮ್ಮ ಬಳಿಗೆ ಬರುತ್ತೇನೆಂದು” ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೊರಟುಹೋದನು. ಅನಂತರ ಎಫೆಸದಿಂದ ಸಮುದ್ರಪ್ರಯಾಣ ಮಾಡಿ ಕೈಸರೈಯದಲ್ಲಿ ಇಳಿದು,


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟು, ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


“ಗೋದಿ ಬೆಳೆಯ ಪ್ರಥಮ ಫಲದ ಸಮರ್ಪಣೆಯನ್ನು ಪಸ್ಕಹಬ್ಬವಾಗಿ ಏಳು ವಾರಗಳ ನಂತರ ಸುಗ್ಗಿ ಹಬ್ಬವನ್ನು ಆಚರಿಸುವಾಗ ಸಮರ್ಪಿಸಬೇಕು. ವರ್ಷದ ಅಂತ್ಯದಲ್ಲಿ ಫಲಸಂಗ್ರಹದ ಹಬ್ಬವನ್ನೂ ಆಚರಿಸಬೇಕು.


ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಕೆಲಸದವಳು ನೋಡುವುದಕ್ಕೆ ಬಂದಳು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು;


ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ಅವರು ಅವನ ಬಳಿಗೆ ಬಂದಾಗ ಅವರಿಗೆ ಅವನು ಹೇಳಿದ್ದೇನಂದರೆ; “ನಾನು ಆಸ್ಯಸೀಮೆಯಲ್ಲಿ ಕಾಲಿಟ್ಟ ಮೊದಲನೆಯ ದಿನದಿಂದ ನಿಮ್ಮ ಮಧ್ಯೆ ಎಲ್ಲಾ ಕಾಲಗಳಲ್ಲಿಯೂ ಹೇಗೆ ನಡೆದುಕೊಂಡೆನೆಂಬುದನ್ನು ನೀವೇ ಬಲ್ಲಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು