Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಸಂದೇಶಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಆ ಪ್ರದೇಶದಲ್ಲಿ ಸಂಚಾರಮಾಡಿ ಭಕ್ತಾದಿಗಳನ್ನು ಹಲವಾರು ವಿಧದಲ್ಲಿ ಪ್ರೋತ್ಸಾಹಿಸಿದನು. ಅನಂತರ ಅಲ್ಲಿಂದ ಅಖಾಯಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆ ಸೀಮೆಯಲ್ಲಿ ಸಂಚಾರಮಾಡಿ ಅಲ್ಲಿಯವರನ್ನು ಅನೇಕ ಮಾತುಗಳಿಂದ ಧೈರ್ಯಪಡಿಸಿ ಗ್ರೀಸ್ ದೇಶಕ್ಕೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನು ಆ ಪ್ರದೇಶದಲ್ಲಿ ಪ್ರಯಾಣ ಮಾಡುತ್ತಾ ಅನೇಕ ಊರುಗಳಿಗೆ ಭೇಟಿನೀಡಿ, ಯೇಸುವಿನ ಶಿಷ್ಯರಿಗೆ ಅನೇಕ ಸಂಗತಿಗಳನ್ನು ತಿಳಿಸಿ ಬಲಪಡಿಸಿದನು. ಬಳಿಕ ಪೌಲನು ಗ್ರೀಸಿಗೆ (ಅಖಾಯ) ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆ ಪ್ರದೇಶದಲ್ಲೆಲ್ಲಾ ಜನರಿಗೆ ಅನೇಕ ಪ್ರೋತ್ಸಾಹದ ಮಾತುಗಳನ್ನು ಹೇಳುತ್ತಾ ಪ್ರಯಾಣಮಾಡಿ ಗ್ರೀಸ್ ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತೊ ತ್ಯಾ ಶಾರಾತ್ನಿ ಫಿರುನ್ಗೆತ್ ಉಲ್ಲ್ಯಾ ಗಾಂವಾಕ್ನಿ ಭೆಟ್ಲ್ಯಾನ್, ಜೆಜುಚ್ಯಾ ಶಿಸಾಕ್ನಿ ಉಲ್ಲಿ ಸಂಗ್ತಿಯಾ ಸಾಂಗುನ್ ಬಳ್‍ ದಿಲ್ಲ್ಯಾನ್, ಮಾನಾ ಪಾವ್ಲು ಗ್ರಿಸಿ ಮನ್ತಲ್ಯಾ ಅಖಾಯಿಯಾಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:2
17 ತಿಳಿವುಗಳ ಹೋಲಿಕೆ  

ಕಡೆಯದಾಗಿ, ಸಹೋದರರೇ, ನಾವು ಕರ್ತನಾದ ಯೇಸುವಿನ ಮುಖಾಂತರ ನಿಮಗೆ ಕೊಟ್ಟಿರುವ ಆಜ್ಞೆಗಳನ್ನು ತಿಳಿದಿದ್ದೀರಷ್ಟೆ.


ಯಾಕೆಂದರೆ ನಮ್ಮ ಬೋಧನೆಯು ತಪ್ಪಾದದ್ದಲ್ಲ, ಅಶುದ್ಧವಾದದ್ದೂ ಅಲ್ಲ, ಮೋಸವೂ ಅಲ್ಲ.


ನಾವು ಆತನನ್ನು ಸಾರುತ್ತಲಿದ್ದೇವೆ, ಸಕಲರಿಗೂ ಬುದ್ಧಿ ಹೇಳುತ್ತಾ, ಸರ್ವರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ, ದೇವರ ಮುಂದೆ ಎಲ್ಲರನ್ನೂ ಕ್ರಿಸ್ತನಲ್ಲಿ ಪ್ರವೀಣರನ್ನಾಗಿ ನಿಲ್ಲಿಸುವುದಕ್ಕೆ ಪ್ರಯತ್ನಿಸುತ್ತಿದ್ದೇವೆ.


ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬರಿಗೂ ಬುದ್ಧಿ ಹೇಳುತ್ತಾ,


ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಪೌಲ ಮತ್ತು ಸೀಲರು ಮುಂದೆ ಪ್ರಯಾಣಮಾಡಿ ಅಂಫಿಫೊಲಿ ಮತ್ತು ಅಪೊಲೋನ್ಯ ಎಂಬ ಪಟ್ಟಣಗಳನ್ನು ದಾಟಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಅಲ್ಲಿ ಶಿಷ್ಯರ ಮನಸ್ಸುಗಳನ್ನು ದೃಢಪಡಿಸಿ ಕ್ರಿಸ್ತ ನಂಬಿಕೆಯಲ್ಲಿ ಸ್ಥಿರವಾಗಿ ನಿಲ್ಲಿರಿ ಎಂದು ಪ್ರೋತ್ಸಾಹಿಸಿದರು. ನಾವು ಬಹು ಸಂಕಟಗಳನ್ನು ತಾಳಿ ದೇವರ ರಾಜ್ಯದೊಳಗೆ ಸೇರಬೇಕಾಗಿದೆ ಎಂದು ಬೋಧಿಸಿದರು.


ಬೇರೆ ಅನೇಕ ವಿಧವಾದ ಮಾತುಗಳಿಂದ ಅವನು ಖಂಡಿತವಾಗಿ ಸಾಕ್ಷಿನುಡಿದು, “ಈ ದುಷ್ಟ ಪೀಳಿಗೆಯಿಂದ ನಿಮ್ಮನ್ನು ಸಂರಕ್ಷಿಸಿಕೊಳ್ಳಿರಿ” ಎಂದು ಅವರನ್ನು ಎಚ್ಚರಿಸಿದನು.


ಯೆಹೂದವೆಂಬ ಬಿಲ್ಲನ್ನು ಬೊಗ್ಗಿಸಿಕೊಂಡಿದ್ದೇನೆ. ಅದರಲ್ಲಿ ಎಫ್ರಾಯೀಮ್ ಎಂಬ ಬಾಣವನ್ನು ಹೂಡಿದ್ದೇನೆ; ಚೀಯೋನೇ, ನಾನು ನಿನ್ನ ಸಂತಾನವನ್ನು ಗ್ರೀಕ್ ಸಂತಾನಕ್ಕೆ ವಿರುದ್ಧವಾಗಿ ಎಬ್ಬಿಸಿ ನಿನ್ನನ್ನು ಶೂರನ ಕತ್ತಿಯನ್ನಾಗಿ ಮಾಡುವೆನು.


ಇನ್ನು ಬೇರೆ ಅನೇಕ ಮಾತುಗಳಿಂದ ಆತನು ಇಸ್ರಾಯೇಲ್ ಜನರಿಗೆ ಬುದ್ಧಿಹೇಳಿ ಶುಭವಾರ್ತೆಯನ್ನು ಸಾರುತ್ತಿದ್ದನು.


ಗದ್ದಲವು ನಿಂತ ತರುವಾಯ ಪೌಲನು ಶಿಷ್ಯರನ್ನು ಜೊತೆಗೆ ಕರೆಯಿಸಿ ಧೈರ್ಯಗೊಳಿಸಿ ಅವರ ಅಪ್ಪಣೆ ತೆಗೆದುಕೊಂಡು ಮಕೆದೋನ್ಯಕ್ಕೆ ಹೊರಟನು.


ಅಲ್ಲಿ ಮೂರು ತಿಂಗಳು ಕಳೆದ ನಂತರ ಸಿರಿಯ ದೇಶಕ್ಕೆ ಸಮುದ್ರಮಾರ್ಗವಾಗಿ ಹೋಗಬೇಕೆಂದಿದ್ದಾಗ ಅವನಿಗೆ ವಿರುದ್ಧವಾಗಿ ಯೆಹೂದ್ಯರು ಒಳಸಂಚುಮಾಡಿದ್ದು ಅವನಿಗೆ ತಿಳಿದು ಬಂದ್ದುದರಿಂದ ಅವನು ಮಕೆದೋನ್ಯದ ಮಾರ್ಗವಾಗಿ ಹಿಂತಿರುಗಿ ಹೋಗುವುದಕ್ಕೆ ತೀರ್ಮಾನಿಸಿದನು.


ಆದರೆ ಕರ್ತನ ಚಿತ್ತವಾದರೆ ನಾನು ಬೇಗನೆ ನಿಮ್ಮ ಬಳಿಗೆ ಬಂದು ಉಬ್ಬಿಕೊಂಡಿರುವವರ ಮಾತನ್ನು ಮಾತ್ರವಲ್ಲ ಅವರ ಬಲವನ್ನು ಕಂಡುಹಿಡಿಯುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು