Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ನಾನು ಈಗ ಪವಿತ್ರಾತ್ಮನ ನಿರ್ಬಂಧವುಳ್ಳವನಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೆ ಏನು ಸಂಭವಿಸುವುದೋ ನಾನರಿಯೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಈಗಲಾದರೋ, ಪವಿತ್ರಾತ್ಮ ಪರವಶನಾಗಿ ನಾನು ಜೆರುಸಲೇಮಿಗೆ ಹೋಗುತ್ತಿದ್ದೇನೆ. ಅಲ್ಲಿ ನನಗೇನು ಸಂಭವಿಸುವುದೋ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇವಿುಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸುವದೋ ನಾನರಿಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಆದರೆ ಈಗ ನಾನು ಪವಿತ್ರಾತ್ಮನಿಗೆ ವಿಧೇಯನಾಗಿ ಜೆರುಸಲೇಮಿಗೆ ಹೋಗಬೇಕು. ಅಲ್ಲಿ ನನಗೆ ಏನು ಸಂಭವಿಸುವುದೋ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಈಗಲಾದರೋ, ನಾನು ಪವಿತ್ರಾತ್ಮ ಪ್ರೇರಿತನಾಗಿ ಯೆರೂಸಲೇಮಿನಲ್ಲಿ ನನಗೇನಾಗುವುದೋ ಎಂಬುದನ್ನು ತಿಳಿಯದೆ, ಅಲ್ಲಿಗೆ ಹೋಗುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ಅನಿ ಅತ್ತಾ ಮಿಯಾ ಪವಿತ್ರ್ ಆತ್ಮ್ಯಾಕ್ ಮಾನುನ್ ಘೆವ್ನ್ ಜೆರುಜಲೆಮಾಕ್ ಜಾವ್ಕ್ ಲಾಗ್ಲಾ, ಮಾಜ್ಯಾ ವಾಂಗ್ಡಾ ಕಾಯ್ ಹೊತಾ ಮನ್ತಲೆ ಮಾಕಾ ಗೊತ್ತ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:22
12 ತಿಳಿವುಗಳ ಹೋಲಿಕೆ  

ನಾಳೆ ಏನಾಗುವುದೋ ನಿಮಗೆ ತಿಳಿಯದು. ನಿಮ್ಮ ಜೀವಮಾನವು ಎಂಥದ್ದು? ನೀವು ಸ್ವಲ್ಪ ಹೊತ್ತು ಕಾಣಿಸಿಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದ್ದೀರಿ.


ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.


ಏಕೆಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನು ನನಗೆ ತಿಳಿಸಿದ ಪ್ರಕಾರ ನಾನು ಈ ಗುಡಾರವನ್ನು ಬಿಟ್ಟುಹೋಗುವ ಕಾಲವು ಸಮೀಪವಾಗಿದೆಯೆಂದು ಬಲ್ಲೆನು.


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ಈ ಸಂಗತಿಗಳು ಆದ ಮೇಲೆ ಪೌಲನು ತಾನು ಮಕೆದೋನ್ಯದಲ್ಲಿಯೂ, ಅಖಾಯದಲ್ಲಿಯೂ ಸಂಚಾರಮಾಡಿ ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸಿನಲ್ಲಿ ಯೋಚಿಸಿ; “ಅಲ್ಲಿಗೆ ಹೋದ ಮೇಲೆ ರೋಮಾಪುರವನ್ನು ಸಹ ನೋಡಬೇಕೆಂದು” ಹೇಳಿದನು.


ಪೌಲನು ಅವರಿಗೋಸ್ಕರ ಅಥೇನೆಯಲ್ಲಿ ಕಾದುಕೊಂಡಿರುವಾಗ ಆ ಪಟ್ಟಣದಲ್ಲಿ ಎಲ್ಲೆಲ್ಲಿಯೂ ವಿಗ್ರಹಗಳೇ ಇರುವುದನ್ನು ನೋಡಿ ಅವನ ಆತ್ಮವು ಕುದಿಯಿತು.


ಆಗ ಯೇಸು ತನಗೆ ಸಂಭವಿಸಲಿರುವುದನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ “ನೀವು ಯಾರನ್ನು ಹುಡುಕುತ್ತೀರಿ?” ಎಂದು ಕೇಳಿದನು.


ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು, ಅದು ನೆರವೇರುವ ತನಕ ನನಗೆ ನೆಮ್ಮದಿಯಿಲ್ಲ.


ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು