Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇಗೋ, ಇಷ್ಟು ದಿವಸ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ಕಾಣುವದಿಲ್ಲವೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಈಗ ನನಗೆ ಕಿವಿಗೊಡಿ. ನಿಮ್ಮಲ್ಲಿ ಒಬ್ಬರಾಗಲಿ ನನ್ನನ್ನು ಮತ್ತೆಂದಿಗೂ ನೋಡುವುದಿಲ್ಲವೆಂದು ನನಗೆ ಗೊತ್ತಿದೆ. ನಿಮ್ಮೊಂದಿಗೆ ಇದ್ದ ಸಮಯದಲ್ಲೆಲ್ಲಾ ದೇವರ ರಾಜ್ಯದ ವಿಷಯವಾದ ಸುವಾರ್ತೆಯನ್ನು ನಾನು ನಿಮಗೆ ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ನಿಮ್ಮ ಮಧ್ಯದಲ್ಲಿ ನಾನು ದೇವರ ರಾಜ್ಯದ ಬಗ್ಗೆ ಬೋಧಿಸುತ್ತಾ ಇದ್ದೆನು. ನಿಮ್ಮಲ್ಲಿ ಯಾರೂ ನನ್ನ ಮುಖವನ್ನು ಇನ್ನೊಮ್ಮೆ ಕಾಣಲಾರಿರಿ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 “ಅತ್ತಾ ಮಾಜ್ಯಾಕ್ಡೆ ಆಯ್ಕಾ ತುಮ್ಚೊ ಎಕ್ಲೊಬಿ ಮಾಕಾ ಅನಿ ಕನ್ನಾಬಿ ಬಗಿನಾಸಿ ಮನ್ತಲೆ ಮಾಕಾ ಗೊತ್ತ್ ಹಾಯ್, ತುಮ್ಚ್ಯಾ ವಾಂಗ್ಡಾ ಹೊತ್ತ್ಯಾ ವೆಳಾರುಚ್ ದೆವಾಚ್ಯಾ ವಿಶಯಾಚೆ ಖಬರ್ ಮಿಯಾ ತುಮ್ಕಾ ಸಾಂಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:25
13 ತಿಳಿವುಗಳ ಹೋಲಿಕೆ  

ಯಾವ ಅಡ್ಡಿಯೂ ಇಲ್ಲದೆ, ತುಂಬಾ ಧೈರ್ಯದಿಂದ ದೇವರ ರಾಜ್ಯದ ಕುರಿತು ಬೋಧಿಸುತ್ತಾ, ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ನಿಮಗಾಗಿಯೂ, ಲವೊದಿಕೀಯದವರಿಗಾಗಿಯೂ ಹಾಗೂ ನನ್ನನ್ನು ಮುಖಾಮುಖಿಯಾಗಿ ನೋಡದಿರುವವರೆಲ್ಲರಿಗಾಗಿಯೂ,


ಆದರೆ ಕ್ರಿಸ್ತನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ಆದರೆ ಇನ್ನು ಮೇಲೆ ಈ ಪ್ರಾಂತ್ಯಗಳಲ್ಲಿ ನನಗೆ ಸ್ಥಳವಿಲ್ಲದ್ದರಿಂದಲೂ ನಿಮ್ಮ ಬಳಿಗೆ ಬರುವುದಕ್ಕೆ ಅನೇಕ ವರ್ಷಗಳಿಂದ ಆಸಕ್ತಿ ಇದ್ದುದರಿಂದಲೂ


ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯದಲ್ಲಿಯೂ ಶುಭವರ್ತಮಾನವನ್ನು ಸಾರಲು ಗಂಡಸರೂ ಹೆಂಗಸರೂ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


“ಧರ್ಮಶಾಸ್ತ್ರವೂ ಪ್ರವಾದನೆಗಳೂ ಯೋಹಾನನ ತನಕವೇ. ಆ ನಂತರದ ದಿನಗಳಿಂದ ದೇವರ ರಾಜ್ಯದ ಸುವಾರ್ತೆಯು ಸಾರಲ್ಪಡುತ್ತಲಿದೆ. ಅದರಲ್ಲಿ ಎಲ್ಲರೂ ಬಲವಂತವಾಗಿ ನುಗ್ಗಲು ಯತ್ನಿಸುತ್ತಿದ್ದಾರೆ.


ಆದರೆ ಯೇಸು ಅವನಿಗೆ, “ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ, ನೀನಂತೂ ಹೋಗಿ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸು” ಎಂದು ಹೇಳಿದನು.


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ಯಾವನಾದರೂ ಪರಲೋಕ ರಾಜ್ಯದ ವಾಕ್ಯವನ್ನು ಕೇಳಿ ತಿಳಿದುಕೊಳ್ಳದೆ ಇದ್ದರೆ ದುಷ್ಟನು ಬಂದು ಆತನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಹಾಕುತ್ತಾನೆ. ಇವನೇ ಬೀಜ ಬಿದ್ದ ದಾರಿಯ ಮಗ್ಗುಲಾಗಿರುವನು.


‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.


ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು