ಅಪೊಸ್ತಲರ ಕೃತ್ಯಗಳು 20:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 “ಈಗ ನಿಮ್ಮನ್ನು ದೇವರ ಕೈಗೂ, ಅವರ ಅನುಗ್ರಹ ಸಂದೇಶಕ್ಕೂ ಒಪ್ಪಿಸಿಕೊಡುತ್ತೇನೆ. ಅದು ನಿಮ್ಮನ್ನು ಅಭಿವೃದ್ಧಿಗೊಳಿಸಬಲ್ಲದು. ಮಾತ್ರವಲ್ಲ, ಪಾವನಪುರುಷರ ಬಾಧ್ಯತೆಯಲ್ಲಿ ಭಾಗಿಗಳಾಗುವಂತೆ ಮಾಡಬಲ್ಲದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಾನೀಗ ನಿಮ್ಮನ್ನು ಕರ್ತನಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವದಕ್ಕೂ ಪವಿತ್ರರಾದವರೆಲ್ಲರಲ್ಲಿ ನಿಮಗೆ ಹಕ್ಕನ್ನು ಅನುಗ್ರಹಿಸುವದಕ್ಕೂ ಶಕ್ತನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 “ಈಗ ನಾನು ನಿಮ್ಮನ್ನು ದೇವರಿಗೂ ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತಿದ್ದೇನೆ. ಆತನ ಕೃಪಾವಾಕ್ಯವು ನಿಮ್ಮ ಭಕ್ತಿಯನ್ನು ವೃದ್ಧಿಪಡಿಸಿ ಪರಿಶುದ್ಧರ ಬಾಧ್ಯತೆಯಲ್ಲಿ ಪಾಲುಗಾರರನ್ನಾಗಿ ಮಾಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 “ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್32 ಅತ್ತಾ ಮಿಯಾ ತುಮ್ಕಾ ದೆವಾಚ್ಯಾ, ಅನಿ ತೆಚ್ಯಾ ಕುರ್ಪೆಚ್ಯಾ ಬರ್‍ಯಾ ಖಬ್ರೆಚ್ಯಾ ಜಗ್ಗೊಳ್ ಒಪ್ಸುನ್ ದಿತಾ,ತೆಕಾ ತುಮ್ಕಾ ಪವಿತ್ರ್ ಕರ್ತಲಿ ಬಳ್ ಹಾಯ್, ಅನಿ ತುಮ್ಕಾ ದೆವ್ ಅಪ್ಲ್ಯಾ ಸಗ್ಳ್ಯಾ ಲೊಕಾಕ್ನಿ ದಿತಲೊ ಆಶಿರ್ವಾದ್ ದಿತಾ, ಅಧ್ಯಾಯವನ್ನು ನೋಡಿ |