Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 20:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ‍ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾವು ಹುಳಿರಹಿತ ರೊಟ್ಟಿಯ ಹಬ್ಬದ ನಂತರ ಫಿಲಿಪ್ಪಿಯಿಂದ ನೌಕಾಯಾನ ಹೊರಟೆವು. ಐದು ದಿನಗಳ ನಂತರ ತ್ರೋವದಲ್ಲಿ ಅವರನ್ನು ಸೇರಿ, ಅಲ್ಲಿ ಏಳುದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿವಸಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿವಸದಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿವಸಗಳಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೂದ್ಯರ ಹುಳಿ ರಹಿತ ರೊಟ್ಟಿ ಹಬ್ಬದ ನಂತರ ನಾವು ಫಿಲಿಪ್ಪಿ ಪಟ್ಟಣದ ಹಡಗಿನಲ್ಲಿ ಹೋದೆವು. ಐದು ದಿನಗಳಾದ ನಂತರ ನಾವು ಇವರನ್ನು ತ್ರೋವದಲ್ಲಿ ಸಂಧಿಸಿದೆವು. ಅಲ್ಲಿ ನಾವು ಏಳು ದಿನ ತಂಗಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಹುಳಿಯಿಲ್ಲದ ರೊಟ್ಟಿಯ ಹಬ್ಬದ ನಂತರ ನಾವು ಫಿಲಿಪ್ಪಿಯಿಂದ ಸಮುದ್ರ ಮಾರ್ಗವಾಗಿ ಪ್ರಯಾಣಮಾಡಿ, ಐದು ದಿನಗಳ ತರುವಾಯ ತ್ರೋವದಲ್ಲಿದ್ದ ಇತರರೊಂದಿಗೆ ಸೇರಿ, ಅಲ್ಲಿ ಏಳು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫುಗ್ ನಸಲ್ಲ್ಯಾ ಬಾಕ್ರಿಚ್ಯಾ ಸನಾಚ್ಯಾ ಮಾನಾ ಅಮಿ ಫಿಲಿಪ್ಪಿ ಮನ್ತಲ್ಯಾ ಶಾರಾಚ್ಯಾ ಢೊನಿತ್ ಗೆಲಾಂವ್, ಪಾಚ್ ದಿಸಾ ಕಳದ್ಲ್ಯಾ ಮಾನಾ ಅಮಿ ತೆಂಕಾ ತ್ರೊವಾಸ್ ಶಾರಾತ್ ಭೆಟ್ಲ್ಯಾಂವ್ ಅಮಿ ಥೈ ಸಾತ್ ದಿಸಾ ರಾಲ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 20:6
18 ತಿಳಿವುಗಳ ಹೋಲಿಕೆ  

ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?


ನಮಗೆ ಫಿಲಿಪ್ಪಿ ಪಟ್ಟಣದಲ್ಲಿ ಹಿಂಸೆಯೂ ಅವಮಾನವೂ ಮೊದಲು ಸಂಭವಿಸಿತ್ತಾದರೂ, ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಎದುರಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದ್ದೇವೆಂಬುದನ್ನು ನೀವೇ ಬಲ್ಲಿರಿ.


ಕ್ರಿಸ್ತ ಯೇಸುವಿನ ದಾಸರಾದ ಪೌಲ ಮತ್ತು ತಿಮೊಥೆಯರು, ಫಿಲಿಪ್ಪಿಯದಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವಜನರಾಗಿರುವವರೆಲ್ಲರಿಗೂ ಮತ್ತು ಅವರೊಂದಿಗಿರುವ ಸಭಾಧ್ಯಕ್ಷರಿಗೂ ಹಾಗೂ ಸಭಾಸೇವಕರಿಗೂ ಬರೆಯುವುದೇನೆಂದರೆ,


ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.


ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.


ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.


ಅವರು ಮುಂಚಿತವಾಗಿ ಹೋಗಿ ನಮಗೋಸ್ಕರ ತ್ರೋವದಲ್ಲಿ ಕಾಯುತ್ತಿದ್ದರು


ಪೌಲನು ತನಗೆ ಸಾಧ್ಯವಾದರೆ ಪಂಚಾಶತ್ತಮ ದಿನದ ಹಬ್ಬಕ್ಕೆ ಯೆರೂಸಲೇಮಿನಲ್ಲಿರಬೇಕೆಂದು ಅವಸರಪಡುತ್ತಾ ಇದ್ದುದರಿಂದ ಆಸ್ಯಸೀಮೆಯಲ್ಲಿ ಕಾಲವನ್ನು ಕಳೆಯುವುದಕ್ಕೆ ಮನಸ್ಸಿಲ್ಲದೆ ಎಫೆಸ ಪಟ್ಟಣವನ್ನು ದಾಟಿಹೋಗಬೇಕೆಂದು ತೀರ್ಮಾನಿಸಿಕೊಂಡಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು