Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತನ್ನ ಕೈಕಾಲುಗಳನ್ನು ಕಟ್ಟಿಕೊಂಡು; “ಈ ನಡುಕಟ್ಟು ಯಾವನದೋ ಅವನನ್ನು ‘ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇಮಿನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿ ಕೊಡುವರು, ಎಂದು ಪವಿತ್ರಾತ್ಮನು ಹೇಳುತ್ತಾನೆಂಬುದಾಗಿ’” ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನು ಪೌಲನ ಸೊಂಟಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳನ್ನು ಬಿಗಿದುಕೊಂಡು, “ಪವಿತ್ರಾತ್ಮ ಹೀಗೆನ್ನುತ್ತಾರೆ: ‘ಈ ಸೊಂಟಪಟ್ಟಿಯು ಯಾರದೋ ಅವನನ್ನು ಜೆರುಸಲೇಮಿನಲ್ಲಿ ಯೆಹೂದ್ಯರು ಹೀಗೆಯೇ ಕಟ್ಟಿ, ಅನ್ಯಧರ್ಮೀಯರ ವಶಕ್ಕೆ ಒಪ್ಪಿಸುವರು,’ “ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಪೌಲನ ನಡುಕಟ್ಟನ್ನು ತೆಗೆದು ತನ್ನ ಕೈಕಾಲುಗಳನ್ನು ಕಟ್ಟಿಕೊಂಡು - ಈ ನಡುಕಟ್ಟು ಯಾವನದೋ ಆ ಮನುಷ್ಯನನ್ನು ಯೆಹೂದ್ಯರು ಇದೇ ರೀತಿಯಾಗಿ ಯೆರೂಸಲೇವಿುನಲ್ಲಿ ಕಟ್ಟಿ ಅನ್ಯಜನರ ಕೈಗೆ ಒಪ್ಪಿಸಿಕೊಡುವರು, ಹೀಗೆ ಪವಿತ್ರಾತ್ಮನು ಹೇಳುತ್ತಾನೆಂಬದಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ಅದರಿಂದ ತನ್ನ ಕೈಕಾಲುಗಳನ್ನು ಕಟ್ಟಿಕೊಂಡು, “ಪವಿತ್ರಾತ್ಮನು ನನಗೆ ಹೇಳುವುದೇನೆಂದರೆ, ‘ಈ ನಡುಪಟ್ಟಿಯನ್ನು ಕಟ್ಟಿಕೊಳ್ಳುವ ವ್ಯಕ್ತಿಯನ್ನು ಜೆರುಸಲೇಮಿನ ಯೆಹೂದ್ಯರು ಇದೇ ರೀತಿ ಕಟ್ಟಿಹಾಕುವರು. ಬಳಿಕ ಅವರು ಅವನನ್ನು ಯೆಹೂದ್ಯರಲ್ಲದ ಜನರಿಗೆ ಒಪ್ಪಿಸಿಕೊಡುವರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ತೆನಿ ಅಮ್ಚ್ಯಾ ಜಗ್ಗೊಳ್ ಯೆವ್ನ್ , ಪಾವ್ಲುಚೊ ಖಬ್ರೆಚೊ ಪಟ್ಟೊ ಕಾಡುನ್ ಘೆವ್ನ್ ಅಪ್ಲಿ ಹಾತಾ ಪಾಯಾ ಭಾಂದುನ್ ಘೆವ್ನ್ ಹ್ಯೊ ಕಂಬ್ರೆಚೊ ಪಟ್ಟೊ ಕೊನಾಚೊ, ತ್ಯಾ ಮಾನ್ಸಾಕ್ ಜೆರುಜಲೆಮಾತ್ಲಿ ಜುದೆವಾಂಚಿ ಲೊಕಾ ಅಶೆ ಬಾಂಧುನ್ ಘಾಲ್ತಾತ್, ಅನಿ ತೆನಿ ತೆಕಾ ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಹಾತಿತ್ ಒಪ್ಸುನ್ ದಿತ್ಯಾತ್, ಮನುನ್ ಪವಿತ್ರ್ ಆತ್ಮೊ ಸಾಂಗುಲ್ಲಾ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:11
34 ತಿಳಿವುಗಳ ಹೋಲಿಕೆ  

ಸಹಸ್ರಾಧಿಪತಿಯು ಹತ್ತಿರಕ್ಕೆ ಬಂದು ಅವನನ್ನು ಹಿಡಿದು, ಅವನಿಗೆ ಎರಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು;


ನಿನಗೆ ಬೇಡಿಗಳೂ, ಹಿಂಸೆಗಳೂ ಕಾದುಕೊಂಡಿವೆ ಎಂದು ಪವಿತ್ರಾತ್ಮನು ಎಲ್ಲಾ ಪಟ್ಟಣಗಳಲ್ಲಿಯೂ ನನಗೆ ಎಚ್ಚರಿಕೆ ನೀಡಿದ್ದಾನೆ ಎಂಬುದನ್ನು ಬಲ್ಲೆನು.


ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.


ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.


ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.


ಆದ್ದರಿಂದ ಪವಿತ್ರಾತ್ಮನು ಹೇಳುವ ಪ್ರಕಾರ, “ನೀವು ಈ ದಿನ ದೇವರ ಸ್ವರಕ್ಕೆ ಕಿವಿಗೊಡುವುದಾದರೆ,


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆ ಸುವಾರ್ತೆಯ ನಿಮಿತ್ತವಾಗಿ ರಾಯಭಾರಿಯಾದ ನಾನು ಸೆರೆಮನೆಯಲ್ಲಿ ಬಿದ್ದಿದ್ದೇನಲ್ಲಾ. ಅದರ ವಿಷಯದಲ್ಲಿ ನಾನು ಮಾತನಾಡಬೇಕಾದ ಹಾಗೆಯೇ ಧೈರ್ಯವಾಗಿ ನಾನು ಮಾತನಾಡುವಂತೆ ನನಗಾಗಿ ಬೇಡಿಕೊಳ್ಳಿರಿ.


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ಹೀಗಿರುವುದರಿಂದ ಪೌಲನೆಂಬ ನಾನು ಅನ್ಯಜನರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿದ್ದಾನೆ.


ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಪೌಲನು; “ಅಲ್ಪಪ್ರಯತ್ನದಿಂದಾಗಲಿ, ಅಧಿಕ ಪ್ರಯತ್ನದಿಂದಾಗಲಿ ನೀನು ಮಾತ್ರವಲ್ಲದೆ ಈಹೊತ್ತು ನನ್ನ ಮಾತುಗಳನ್ನು ಕೇಳುವವರೆಲ್ಲರೂ, ಈ ಬೇಡಿಗಳ ಹೊರತು, ನನ್ನಂತೆ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ” ಅಂದನು.


ಎರಡು ವರ್ಷಗಳು ತುಂಬಿದ ಮೇಲೆ ಫೇಲಿಕ್ಸನ ಸ್ಥಾನಕ್ಕೆ ಪೋರ್ಕಿಯ ಫೆಸ್ತನು ಎಂಬವನು ಬಂದನು. ಫೇಲಿಕ್ಸನು ಯೆಹೂದ್ಯರ ಪ್ರೀತಿಯನ್ನು ಸಂಪಾದಿಸಬೇಕೆಂದು ಪೌಲನನ್ನು ಹಾಗೆಯೇ ಸೆರೆಯಲ್ಲಿ ಬಿಟ್ಟು ಹೋದನು.


ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.


ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,


ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.


ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬುದನ್ನು ನಾನೇ ಅವನಿಗೆ ತೋರಿಸುವೆನು” ಎಂದು ಹೇಳಿದನು.


ನಾನು ಪ್ರವಾದಿಗಳಿಗೆ ನುಡಿದಿದ್ದೇನೆ, ಬಹಳ ದಿವ್ಯದರ್ಶನಗಳನ್ನು ದಯಪಾಲಿಸಿದ್ದೇನೆ. ಪ್ರವಾದಿಗಳ ಮೂಲಕ ಸೂಚಕಕಾರ್ಯಗಳನ್ನು ನಡೆಸಿದ್ದೇನೆ.


ಅದೇ ಸಮಯದಲ್ಲಿ ಯೆಹೋವನು ಆಮೋಚನ ಮಗನಾದ ಯೆಶಾಯನಿಗೆ, “ಹೋಗು, ನಿನ್ನ ನಡುವಿನ ಮೇಲಿರುವ ಗೋಣಿತಟ್ಟನ್ನು ಬಿಚ್ಚು. ನಿನ್ನ ಪಾದಗಳಲ್ಲಿರುವ ಪಾದರಕ್ಷೆಗಳನ್ನು ತೆಗೆದಿಡು” ಎಂದು ಹೇಳಿದನು. ಅವನು ಹಾಗೆಯೇ ಮಾಡಿ ಬೆತ್ತಲೆಯಾಗಿ ಪಾದರಕ್ಷೆಗಳಿಲ್ಲದೆ ತಿರುಗಾಡುತ್ತಿದ್ದನು.


ಯೆಹೋವನು ನನಗೆ ಹೀಗೆ ಹೇಳಿದನು, “ಹೊರಡು, ಕುಂಬಾರನು ಮಾಡಿದ ಮಣ್ಣಿನ ಮಡಕೆಯನ್ನು ಕೊಂಡುಕೊಂಡು, ಜನರ ಹಿರಿಯರಲ್ಲಿಯೂ ಮತ್ತು ಯಾಜಕರ ಹಿರಿಯರಲ್ಲಿಯೂ ಕೆಲವರನ್ನು ಆರಿಸಿಕೋ.


ಯೇಸು ಈ ಮಾತುಗಳನ್ನಾಡಿದ ಮೇಲೆ ತನ್ನ ಶಿಷ್ಯರ ಜೊತೆ ಕೆದ್ರೋನ್ ಹಳ್ಳದ ಆಚೆಗೆ ಹೋದನು. ಆತನೂ, ಆತನ ಶಿಷ್ಯರೂ ಅಲ್ಲಿದ್ದ ಒಂದು ತೋಟದೊಳಗೆ ಪ್ರವೇಶಿಸಿದರು.


ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು.


ಅಲ್ಲಿ ಶಿಷ್ಯರನ್ನು ಹುಡುಕಿ, ಕಂಡು ಏಳು ದಿನ ಉಳಿದುಕೊಂಡೆವು. ಅವರು ದೇವರಾತ್ಮನ ಪ್ರೇರಣೆಯಿಂದ ಪೌಲನಿಗೆ; ನೀನು ಯೆರೂಸಲೇಮಿಗೆ ಕಾಲಿಡಬೇಡವೆಂದು ಹೇಳಿದರು.


ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು