Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಿನ್ನ ವಿಷಯ ಅವರಿಗೆ ತಿಳಿದುಬಂದಿದೆ. ಅದೇನೆಂದರೆ ನೀನು ಅನ್ಯಧರ್ಮೀಯರ ನಡುವೆ ವಾಸಿಸುತ್ತಿರುವ ಯೆಹೂದ್ಯರೆಲ್ಲರಿಗೆ, ‘ನೀವು ಮೋಶೆಯ ನೇಮನಿಯಮಗಳನ್ನು ಅನುಸರಿಸಬಾರದು, ನಿಮ್ಮ ಮಕ್ಕಳಿಗೆ ಸುನ್ನತಿಯನ್ನು ಮಾಡಿಸಬಾರದು, ಯೆಹೂದ್ಯ ಸಂಪ್ರದಾಯಗಳನ್ನು ಆಚರಿಸಬಾರದು,’ ಎಂದು ಬೋಧಿಸುತ್ತಿರುವಿಯಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀನು ಅನ್ಯಜನರಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ - ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ ಮೋಶೆಯ ಧರ್ಮವನ್ನು ತ್ಯಾಗಮಾಡಬೇಕೆಂಬದಾಗಿ ಬೋಧಿಸುತ್ತೀ ಎಂದು ನಿನ್ನ ವಿಷಯದಲ್ಲಿ ಬಹಳವಾಗಿ ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಯೆಹೂದ್ಯರು ನಿನ್ನ ಉಪದೇಶದ ಬಗ್ಗೆ ಕೇಳಿದ್ದಾರೆ. ಬೇರೆ ದೇಶಗಳಲ್ಲಿ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರಿಗೆ, “ನೀವು ಮೋಶೆಯ ಧರ್ಮಶಾಸ್ತ್ರವನ್ನು ತ್ಯಜಿಸಿರಿ; ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಬೇಡಿರಿ ಯೆಹೂದ್ಯರ ಸಂಪ್ರದಾಯಗಳಿಗೆ ವಿಧೇಯರಾಗಬೇಡಿರಿ ಎಂಬುದಾಗಿ ಹೇಳುತ್ತಿರುವಿಯೆಂದು ಅವರು ಕೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನೀನು ಯೆಹೂದ್ಯರಲ್ಲದವರ ಮಧ್ಯದಲ್ಲಿ ವಾಸಿಸುತ್ತಿರುವ ಯೆಹೂದ್ಯರಿಗೆ, ‘ನೀವು ಮೋಶೆಯ ನಿಯಮವನ್ನು ಅನುಸರಿಸಬೇಡಿರಿ, ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಬೇಡಿರಿ,’ ಎಂದು ಬೋಧಿಸುವುದಾಗಿ ನಿನ್ನ ವಿಷಯದಲ್ಲಿ ಅವರಿಗೆ ತಿಳಿದು ಬಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜುದೆವ್ ನ್ಹಯ್ ಹೊತ್ತ್ಯಾ ಲೊಕಾಂಚ್ಯಾ ಮದ್ದಿ ಜಿವನ್ ಕರ್‍ತಲ್ಯಾ ಜುದೆವಾಕ್ನಿ ತುಮ್ಚ್ಯಾ ಪೊರಾಕ್ನಿ ಸುನ್ನತ್ ಕರ್ಸುನಕಾಸಿ, ತೆಂಚಿ ಪದ್ದತಿಯಾ ಕರುನಕಾಸಿ ಮೊಯ್ಜೆಚ್ಯಾ ಖಾಯ್ದ್ಯಾಕ್ನಿ ಮಾನುನಕಾಸಿ ಮನುನ್ ತಿಯಾ ಶಿಕಾಪಾ ಕರುಲೈಯ್ ಮನುನ್ ತುಜ್ಯಾ ವಿಶಯಾತ್ ಸಾಂಗುಲ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:21
12 ತಿಳಿವುಗಳ ಹೋಲಿಕೆ  

“ಇಸ್ರಾಯೇಲ್‍ ಜನರೇ, ನಮಗೆ ಸಹಾಯಮಾಡಿರಿ, ನಮ್ಮ ಜನರಿಗೂ, ಧರ್ಮಶಾಸ್ತ್ರಕ್ಕೂ, ಈ ಆಲಯಕ್ಕೂ ವಿರುದ್ಧವಾಗಿ ಎಲ್ಲೆಲ್ಲಿಯೂ, ಎಲ್ಲರಿಗೂ ಬೋಧನೆ ಹೇಳುವ ಆ ಮನುಷ್ಯನು ಇವನೇ. ಇದಲ್ಲದೆ ಇವನು ಗ್ರೀಕರನ್ನು ದೇವಾಲಯದೊಳಗೆ ಕರೆದುಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆಮಾಡಿದ್ದಾನೆ” ಎಂದು ಕೂಗಿದರು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.


ನೀನು ಬಂದಿರುವುದನ್ನು ಅವರು ಹೇಗೂ ತಿಳಿದುಕೊಳ್ಳುವರು. ಹೀಗಿರುವಲ್ಲಿ ನಾವು ಏನು ಮಾಡಬೇಕು?


ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು