ಅಪೊಸ್ತಲರ ಕೃತ್ಯಗಳು 21:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಇವನಾರು? ಏನು ಮಾಡಿದ್ದಾನೆ ಎಂದು ಕೇಳಲು ಕೆಲವರು ಹೀಗೆ ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿವಿುತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್34 ಅಲ್ಲಿದ್ದ ಜನರಲ್ಲಿ ಕೆಲವರು ಒಂದು ವಿಷಯದ ಬಗ್ಗೆ ಬೊಬ್ಬೆಹಾಕುತ್ತಿದ್ದರೆ, ಉಳಿದವರು ಇತರ ವಿಷಯಗಳ ಬಗ್ಗೆ ಬೊಬ್ಬೆಹಾಕುತ್ತಿದ್ದರು. ಈ ಗಲಿಬಿಲಿಯಿಂದಾಗಿಯೂ ಕೂಗಾಟದಿಂದಾಗಿಯೂ ಏನು ನಡೆಯಿತೆಂಬುದರ ಬಗ್ಗೆ ಸತ್ಯವನ್ನು ತಿಳಿದುಕೊಳ್ಳಲಾಗಲಿಲ್ಲ. ಆದ್ದರಿಂದ ಸೇನಾಧಿಪತಿಯು ಪೌಲನನ್ನು ಸೈನ್ಯದ ಕೋಟೆಯೊಳಕ್ಕೆ ತೆಗೆದುಕೊಂಡು ಹೋಗಲು ಸೈನಿಕರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಜನಸಮೂಹದಲ್ಲಿದ್ದ ಇತರರು ವಿವಿಧ ರೀತಿಯಿಂದ ಕೂಗುತ್ತಿರಲು ಗಲಭೆಯ ನಿಮಿತ್ತ ಸಹಸ್ರಾಧಿಪತಿಗೆ ಸತ್ಯಾಂಶ ತಿಳಿಯಲಾಗಲಿಲ್ಲ. ಆದ್ದರಿಂದ ಪೌಲನನ್ನು ಸೈನಿಕ ಪಾಳ್ಯದೊಳಗೆ ತೆಗೆದುಕೊಂಡು ಹೋಗಲು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ಥೈತ್ಲಿ ಉಲ್ಲಿ ಲೊಕಾ ಯೆವ್ನ್ ಎಕ್ ವಿಶಯಾತ್ ಬೊಬ್ ಮಾರುಕ್ಲಾಗಲಿ ಹುರಲ್ಲಿ ಲೊಕಾ, ಅನಿ ದುಸ್ರ್ಯಾ ವಿಶಯಾತ್ ಬೊಬ್ ಮಾರುಕ್ಲಾಗಲಿ, ಹ್ಯೊ ಗದ್ದಲ್ ಬೊಬ್ ಮಾರುಲಾಗಲ್ಯಾನ್ ಭರುನ್ ಹೊತ್ತ್ಯಾ ಸಾಟ್ನಿ ಕಾಯ್ ಚಲುಲ್ಲಾ ಮನ್ತಲೆ ಖರೆ ಕಳ್ವುನ್ಗೆವ್ಕ್ ಹೊವ್ಕ್ ನಾ, ತಸೆ ಹೊವ್ನ್, ಸೆನಾಧಿಪತಿನ್ ಪಾವ್ಲುಕ್ ಕೊಟೆತ್ ಘೆವ್ನ್ ಜಾವ್ಕ್ ಹುಕುಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |