Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು, ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡು, ಜನರಿಗೆ ಕೈಸನ್ನೆ ಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ ಮಾತನಾಡಲು ಪ್ರಾರಂಭಿಸಿದನು.,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಸಹಸ್ರಾಧಿಪತಿಯು ಅಪ್ಪಣೆ ಕೊಡಲು ಪೌಲನು ಮೆಟ್ಲುಗಳ ಮೇಲೆ ನಿಂತುಕೊಂಡು ಜನರಿಗೆ ಕೈಸನ್ನೆಮಾಡಿದನು. ಗದ್ದಲವು ಬಹಳ ಮಟ್ಟಿಗೆ ಶಾಂತವಾದ ಮೇಲೆ ಅವನು ಇಬ್ರಿಯ ಭಾಷೆಯಲ್ಲಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಜನರೊಂದಿಗೆ ಮಾತಾಡಲು ಸೇನಾಧಿಪತಿ ಪೌಲನಿಗೆ ಅಪ್ಪಣೆಕೊಟ್ಟನು. ಆದ್ದರಿಂದ ಪೌಲನು ಮೆಟ್ಟಿಲುಗಳ ಮೇಲೆ ನಿಂತುಕೊಂಡನು. ಬಳಿಕ, ಮೌನವಾಗಿರುವಂತೆ ಜನರಿಗೆ ಕೈಸನ್ನೆ ಮಾಡಿದನು. ಜನರು ಮೌನವಾದರು. ಆಗ ಪೌಲನು ಅವರೊಂದಿಗೆ ಯೆಹೂದ್ಯರ ಭಾಷೆಯಲ್ಲಿ ಮಾತಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಸಹಸ್ರಾಧಿಪತಿಯ ಅಪ್ಪಣೆ ಪಡೆದುಕೊಂಡು, ಪೌಲನು ಮೆಟ್ಟಲುಗಳ ಮೇಲೆ ನಿಂತುಕೊಂಡು ಜನಸಮೂಹಕ್ಕೆ ಸುಮ್ಮನಿರುವಂತೆ ಸನ್ನೆಮಾಡಲು, ಅವರು ಬಹು ನಿಶ್ಶಬ್ದರಾದಾಗ ಅವನು ಹೀಬ್ರೂ ಭಾಷೆಯಲ್ಲಿ ಅವರಿಗೆ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

40 ಸೆನಾಧಿಪತಿನ್ ತೆಕಾ ಅವಕಾಸ್ ದಿತಾನಾ ಪಾವ್ಲುನ್, ಪಾಯ್ರಿಯಾ ವೈನಿ ಇಬೆ ರ್‍ಹಾವ್ನ್; ಲೊಕಾಕ್ನಿ ಗಪ್‍ರಾವ್ಕ್ ಸಾಂಗುನ್, ಲೊಕಾ ಶಾಂತ್ ಹೊಲ್ಲ್ಯಾ ತನ್ನಾ, ಹಿಬ್ರು ಬಾಶೆನ್ ಬೊಲುಕ್ ಶುರು ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:40
16 ತಿಳಿವುಗಳ ಹೋಲಿಕೆ  

ಅವನು ಸುಮ್ಮನಿರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ; “ಈ ಸಂಗತಿಗಳನ್ನು ಯಾಕೋಬನಿಗೂ, ಸಹೋದರರೆಲ್ಲರಿಗೂ ತಿಳಿಸಿರೆಂದು” ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.


ಅವನು ತಮ್ಮ ಸಂಗಡ ಇಬ್ರಿಯ ಭಾಷೆಯಲ್ಲಿ ಮಾತನಾಡುವುದನ್ನು ಕೇಳಿ ಅವರು ಮತ್ತಷ್ಟು ನಿಶ್ಯಬ್ದವಾದರು. ಆಗ ಅವನು ಹೇಳಿದ್ದೇನಂದರೆ;


ಅಲ್ಲಿ ಕುರಿಬಾಗಿಲು ಎಂಬ ಸ್ಥಳದ ಬಳಿ ಐದು ಮಂಟಪಗಳಿಂದ ಕೂಡಿದ ಒಂದು ಕೊಳವಿದೆ. ಅದನ್ನು ಇಬ್ರಿಯ ಭಾಷೆಯಲ್ಲಿ ಬೇತ್ಸಥಾ ಎಂದು ಕರೆಯುತ್ತಾರೆ.


ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.


ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.


ಆಗ ಅವು ಭೂರಾಜರನ್ನು ಇಬ್ರಿಯ ಭಾಷೆಯಲ್ಲಿ ಅರ್ಮಗೆದ್ದೋನ್ ಎಂದು ಕರೆಯಲ್ಪಡುವ ಸ್ಥಳಕ್ಕೆ ಕೂಡಿಸಿದವು.


ಅಧೋಲೋಕದ ಅಧಿಕಾರಿಯಾದ ದೂತನೇ ಅವುಗಳನ್ನಾಳುವ ಅರಸನು. ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ, ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;


ಆ ದಿನಗಳಲ್ಲಿ ಶಿಷ್ಯರು ಹೆಚ್ಚುತ್ತಾ ಬರಲಾಗಿ ಅವರೊಳಗೆ ಗ್ರೀಕ್ ಭಾಷೆಯವರು ಇಬ್ರಿಯ ಭಾಷೆಯವರ ಮೇಲೆ ದೂರು ನೀಡುತ್ತಾ ಅನುದಿನದ ಉಪಚಾರದಲ್ಲಿ ನಮ್ಮ ವಿಧವೆಯರನ್ನು ಸರಿಯಾಗಿ ಪರಾಂಬರಿಸುವುದಿಲ್ಲವೆಂದು ಗೊಣಗುಟ್ಟಿದರು.


ಅವರು ಯೇಸುವನ್ನು ಶಿಲುಬೆಗೆ ಹಾಕಿದ ಸ್ಥಳವು ಪಟ್ಟಣಕ್ಕೆ ಹತ್ತಿರವಾಗಿದ್ದುದರಿಂದ ಯೆಹೂದ್ಯರಲ್ಲಿ ಅನೇಕರು ಆ ಫಲಕವನ್ನು ಓದಿದರು. ಅದು ಇಬ್ರಿಯ, ಲ್ಯಾಟಿನ್ ಮತ್ತು ಗ್ರೀಕ್ ಭಾಷೆಗಳಲ್ಲಿ ಬರೆದಿತ್ತು.


ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.


ಈ ಮಾತುಗಳನ್ನು ಪಿಲಾತನು ಕೇಳಿ ಯೇಸುವನ್ನು ಹೊರಗೆ ಕರೆದುಕೊಂಡು ಬಂದು ಇಬ್ರಿಯ ಮಾತಿನಲ್ಲಿ, ಗಬ್ಬಥಾ ಎಂದು ಕರೆಯಲ್ಪಟ್ಟ, “ಕಲ್ಲು ಹಾಸಿದ ಕಟ್ಟೆ” ಎಂಬ ಸ್ಥಳಕ್ಕೆ ಹೋಗಿ ನ್ಯಾಯಾಸನದ ಮೇಲೆ ಕುಳಿತುಕೊಂಡನು.


ಇದಲ್ಲದೆ ಆತನ ಶಿಲುಬೆಯ ಮೇಲೆ “ಇವನು ಯೆಹೂದ್ಯರ ಅರಸನು” ಎಂಬುದಾಗಿ ಲಿಖಿತವಾದ ಸೂಚನೆಯನ್ನು ಹಾಕಲಾಗಿತ್ತು.


ಕೂಡಲೆ ಅವರು ಅವನಿಗೋಸ್ಕರ ಮೆಟ್ಟಿಲುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಸಿ ತುತ್ತೂರಿಯನ್ನು ಊದಿಸಿ ಯೇಹುವು ಅರಸನಾಗಿದ್ದಾನೆಂದು ಘೋಷಣೆಗಳನ್ನು ಕೂಗಿದರು.


ಇದು ಯೆರೂಸಲೇಮ್ ಪಟ್ಟಣದ ನಿವಾಸಿಗಳಿಗೆಲ್ಲಾ ತಿಳಿದುಬಂದುದರಿಂದ ಆ ಹೊಲಕ್ಕೆ ಅವರ ಭಾಷೆಯಲ್ಲಿ ‘ಅಕೆಲ್ದಾಮಾ,’ ಅಂದರೆ ರಕ್ತದ ಹೊಲ ಎಂಬ ಹೆಸರು ಬಂದಿತು.)


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು