Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ತೂರ್ ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿನ ಇದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಟೈರ್‍ನಿಂದ ಹೊರಟು ಪ್ತೊಲೊಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿ ಭಕ್ತಾದಿಗಳನ್ನು ವಂದಿಸಿ ಅವರೊಡನೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ತೂರ್‍ಪಟ್ಟಣದಿಂದ ಹೊರಟು ಪ್ತೊಲೆಮಾಯಕ್ಕೆ ಸೇರಿ ಸಮುದ್ರಪ್ರಯಾಣವನ್ನು ಮುಗಿಸಿದೆವು. ಅಲ್ಲಿದ್ದ ಸಹೋದರರನ್ನು ವಂದಿಸಿ ಅವರ ಬಳಿಯಲ್ಲಿ ಒಂದು ದಿವಸ ಇದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾವು ಟೈರ್ ನಿಂದ ನಮ್ಮ ಪ್ರಯಾಣವನ್ನು ಮುಂದುವರೆಸಿ ಪ್ಟೊಲೊಮಾಯ ಎಂಬಲ್ಲಿಗೆ ಹೋದೆವು. ಅಲ್ಲಿಯ ಸಹೋದರರನ್ನು (ವಿಶ್ವಾಸಿಗಳು) ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಟೈರ್ ಪಟ್ಟಣದಿಂದ ನಮ್ಮ ಪ್ರಯಾಣ ಮುಂದುವರಿಸಿ ಪ್ತೊಲೆಮಾಯ ಎಂಬಲ್ಲಿಗೆ ಬಂದಿಳಿದೆವು. ಅಲ್ಲಿಯ ಸಹೋದರರನ್ನು ವಂದಿಸಿ ಅವರೊಂದಿಗೆ ಒಂದು ದಿನ ಇದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಮಿ ತುರ್ ಶಾರಾತ್ನಾ ಅಮ್ಚೆ ಪ್ರಯಾನ್ ಫಿಡೆ ಕರುನ್ ಪ್ತೊಲೊಮಾ ಮನ್ತಲೊ ಶಾರಾಕ್ ಗೆಲ್ಯಾಂವ್ ಥೈ ಹೊತ್ತ್ಯಾ ದೆವಾಚೆರ್ ವಿಶ್ವಾಸ್ ಥವಲ್ಲ್ಯಾ ಲೊಕಾಕ್ನಿ ವಂದನ್ ಕರುನ್ ಎಕ್ ದಿಸ್ ಥೈ ಹೊತ್ತ್ಯಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:7
13 ತಿಳಿವುಗಳ ಹೋಲಿಕೆ  

ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.


ನಾವು ಸುರಕೂಸಿಗೆ ತಲುಪಿ ಅಲ್ಲಿ ಮೂರು ದಿನ ತಂಗಿದೆವು.


ಕೆಲವು ದಿನಗಳು ಕಳೆದನಂತರ ಅಗ್ರಿಪ್ಪರಾಜನೂ, ಬೆರ್ನಿಕೆರಾಣಿಯೂ, ಫೆಸ್ತನನ್ನು ಭೇಟಿಯಾಗುವುದಕ್ಕೆ ಕೈಸರೈಯಕ್ಕೆ ಬಂದರು.


ಪೌಲನು ಅವರನ್ನು ವಂದಿಸಿ ತನ್ನ ಸೇವೆಯ ಮೂಲಕವಾಗಿ ದೇವರು ಅನ್ಯಜನರಲ್ಲಿ ಮಾಡಿದ ಕಾರ್ಯಗಳನ್ನು ಒಂದೊಂದಾಗಿ ವಿವರಿಸಿದನು.


ನಾವು ಅಲ್ಲಿ ಅನೇಕ ದಿನಗಳು ಇದ್ದ ನಂತರ, ಅಗಬನೆಂಬ ಒಬ್ಬ ಪ್ರವಾದಿಯು ಯೂದಾಯದಿಂದ ನಮ್ಮ ಬಳಿಗೆ ಬಂದು, ಪೌಲನ ನಡುಕಟ್ಟನ್ನು ತೆಗೆದು,


ಯೆರೂಸಲೇಮಿಗೆ ಹೋಗಿ ಸಭೆಯನ್ನು ವಂದಿಸಿ ಅಂತಿಯೋಕ್ಯಕ್ಕೆ ಬಂದನು.


ಆ ಕಾಲದಲ್ಲಿ ತೂರ್ ಮತ್ತು ಸೀದೋನ್ ಪಟ್ಟಣಗಳ ನಿವಾಸಿಗಳು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿಕೊಂಡಿರುವುದನ್ನು ನೋಡಿ ಒಮ್ಮನಸ್ಸಿನಿಂದ ಅವನ ಸನ್ನಿಧಿಗೆ ಬಂದು ಅರಸನ ಅಂತಃಪುರದ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ಒಲಿಸಿಕೊಂಡು ಸಮಾಧಾನವಾಗಿರಬೇಕೆಂದು ಅರಸನನ್ನು ಬೇಡಿಕೊಂಡರು. ಏಕೆಂದರೆ ಅರಸನ ಸೀಮೆಯಿಂದಲೇ ಅವರ ಸೀಮೆಗೆ ದವಸಧಾನ್ಯ ಬರುತ್ತಿತ್ತು.


ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.


ಅದು ಮುಗಿಯುವಷ್ಟರಲ್ಲೇ ಸಮುವೇಲನು ಬಂದನು. ಸೌಲನು ಅವನನ್ನು ವಂದಿಸುವುದಕ್ಕೋಸ್ಕರ ಎದುರಿಗೆ ಹೋಗಲು


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಮುಂದೆ ಕುಪ್ರದ್ವೀಪವನ್ನು ಕಂಡು ಎಡಗಡೆಗೆ ಬಿಟ್ಟು ಸಿರಿಯದೇಶದ ಕಡೆಗೆ ಸಾಗಿ ತೂರ್ ಪಟ್ಟಣಕ್ಕೆ ಬಂದು ಇಳಿದೆವು. ಏಕೆಂದರೆ, ಅಲ್ಲಿ ಸರಕನ್ನು ಇಳಿಸಬೇಕಾಗಿತ್ತು.


ನಾವು ಯೆರೂಸಲೇಮಿಗೆ ಬಂದಾಗ ಸಹೋದರರು ನಮ್ಮನ್ನು ಸಂತೋಷದಿಂದ ಬರಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು