ಅಪೊಸ್ತಲರ ಕೃತ್ಯಗಳು 21:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮರುದಿನ ಹೊರಟು ಕೈಸರೈಯಕ್ಕೆ ಬಂದು, ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳು ಮಂದಿಯಲ್ಲಿ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಮಾರನೆಯ ದಿನ ಅಲ್ಲಿಂದ ಹೊರಟು ಸೆಜರೇಯಕ್ಕೆ ಬಂದೆವು. ಅಲ್ಲಿ ಶುಭಸಂದೇಶ ಪ್ರಚಾರಕ ಫಿಲಿಪ್ಪನ ಮನೆಗೆ ಹೋಗಿ ಅವನೊಡನೆ ತಂಗಿದೆವು. ಜೆರುಸಲೇಮಿನಲ್ಲಿ ಆಯ್ಕೆಯಾದ ಏಳುಮಂದಿಯಲ್ಲಿ ಇವನೂ ಒಬ್ಬನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮರುದಿನ ಹೊರಟು ಕೈಸರೈಯಕ್ಕೆ ಬಂದು ಸೌವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನ ಬಳಿಯಲ್ಲಿಯೇ ಇಳುಕೊಂಡೆವು. ಅವನು ಆ ಏಳ್ವರಲ್ಲಿ ಒಬ್ಬನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಮರುದಿನ ನಾವು ಪ್ಟೊಲೊಮಾಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಹೋದೆವು. ಅಲ್ಲಿ ನಾವು ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ತಂಗಿದೆವು. ಸುವಾರ್ತೆಯನ್ನು ತಿಳಿಸುವುದೇ ಫಿಲಿಪ್ಪನ ಕೆಲಸವಾಗಿತ್ತು. ಏಳುಮಂದಿ ಸಹಾಯಕರುಗಳಲ್ಲಿ ಅವನೂ ಒಬ್ಬನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಮರುದಿನ ಹೊರಟು ಕೈಸರೈಯ ಪಟ್ಟಣವನ್ನು ತಲುಪಿದೆವು. ಅಲ್ಲಿ ಏಳು ಜನರಲ್ಲಿ ಒಬ್ಬನಾದ, ಫಿಲಿಪ್ಪನೆಂಬ ಸುವಾರ್ತಿಕನ ಮನೆಯಲ್ಲಿ ತಂಗಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ದುಸ್ರೆ ದಿಸಿ ಸೆಜಾರೆಯ ಶಾರಾಕ್ ಯೆವ್ನ್ ಪಾವ್ನ್ ಫಿಲಿಪ್ಪಾಚ್ಯಾ ಘರಾತ್ ರಾಲ್ಯಾಂವ್, ಬರಿ ಖಬರ್ ಲೊಕಾಕ್ನಿ ಪರ್ಗಟ್ ಕರ್ತಲೆಚ್ ಹೆಜೆ ಕಾಮ್, ಹ್ಯೊ ಜೆರುಜಲೆಮಾಕ್ ಮಜತ್ ಕಾರಿ ಕರುನ್ ಎಚುನ್ ಕಾಡಲ್ಲ್ಯಾ ಸಾತ್ ಲೊಕಾತ್ನಿ ಎಕ್ಲೊ. ಅಧ್ಯಾಯವನ್ನು ನೋಡಿ |