ಅಪೊಸ್ತಲರ ಕೃತ್ಯಗಳು 22:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಹೊಡೆಯುವುದಕ್ಕಾಗಿ ಅವನನ್ನು ಬಾರುಗಳಿಂದ ಕಟ್ಟುತ್ತಿದ್ದಾಗ ಪೌಲನು, ಹತ್ತಿರವೇ ನಿಂತಿದ್ದ ಶತಾಧಿಪತಿಯನ್ನು ನೋಡಿ, “ರೋಮಿನ ಪೌರನನ್ನು ಚಾವಟಿಯಿಂದ ಹೊಡೆಯುವುದು, ಅದೂ ವಿಚಾರಣೆಮಾಡದೆ ಹೊಡೆಯಿಸುವುದು, ನ್ಯಾಯಸಮ್ಮತವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅವರು ಪೌಲನನ್ನು ಬೊಗ್ಗಿಸಿ ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು - ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ ಕೊರಡೆಗಳಿಂದ ಹೊಡಿಸುವದು ನಿಮಗೆ ನ್ಯಾಯವೋ? ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಸೈನಿಕರು ಹೊಡೆಯುವುದಕ್ಕಾಗಿ ಪೌಲನನ್ನು ಕಟ್ಟುತ್ತಿರಲು ಅಲ್ಲಿದ್ದ ರೋಮ್ ಅಧಿಕಾರಿಗೆ ಪೌಲನು, “ಅಪರಾಧಿಯೆಂದು ತೀರ್ಪಾಗಿಲ್ಲದ ರೋಮ್ ಪ್ರಜೆಯೊಬ್ಬನನ್ನು ಹೊಡೆಯಲು ನಿಮಗೆ ಹಕ್ಕಿದೆಯೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದರೆ ಅವರು ಅವನನ್ನು ಹೊಡೆಯುವುದಕ್ಕೆ ಬಾರುಕೋಲನ್ನು ಚಾಚಿದಾಗ ಪೌಲನು ಅಲ್ಲಿ ನಿಂತಿದ್ದ ಶತಾಧಿಪತಿಗೆ, “ಅಪರಾಧಿಯೆಂದು ಸಿದ್ಧವಾಗುವ ಮೊದಲೇ ರೋಮ್ ಪೌರನನ್ನು ಕೊರಡೆಗಳಿಂದ ಹೊಡೆಯುವುದು ನ್ಯಾಯವಾದದ್ದೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಪಾವ್ಲುಕ್ ಮಾರುಕ್ ಸಿಪಾಯಿಯಾ ಭಾಂದಿತ್ ರಾತಾನಾ ಥೈ ಹೊತ್ತ್ಯಾ ರೊಮತ್ಲ್ಯಾ ಅಧಿಕಾರಿಕ್ ಪಾವ್ಲುನ್, “ಚುಕ್ದಾರಿ ಮನುನ್ ನಿರ್ಧಾರ್ ಹೊವ್ಕ್ ನಸಲ್ಲ್ಯಾ ರೊಮಾಚ್ಯಾ ಮಾನ್ಸಾಕ್ ಮಾರುಕ್ ತುಮ್ಕಾ ಹಕ್ಕ್ ಹಾಯ್ ಕಾಯ್?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |