Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನಾನೊಬ್ಬ ಯೆಹೂದ್ಯನು, ಸಿಲಿಸಿಯದ ತಾರ್ಸ ಎಂಬಲ್ಲಿ ಹುಟ್ಟಿದವನು. ಆದರೆ, ಇದೇ ಜೆರುಸಲೇಮಿನಲ್ಲಿ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪೂರ್ವಜರ ಧರ್ಮಶಾಸ್ತ್ರವನ್ನು ಕಟ್ಟುನಿಟ್ಟಾಗಿ ಕಲಿತವನು. ಇಲ್ಲಿ ಇಂದು ನೆರೆದಿರುವ ನೀವೆಲ್ಲರೂ ದೈವಾಭಿಮಾನಿಗಳಾಗಿರುವಂತೆಯೇ ನಾನು ದೈವಾಭಿಮಾನಿಯಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಪೌಲನು ಹೀಗೆಂದನು: “ನಾನು ಯೆಹೂದ್ಯನು. ನಾನು ಹುಟ್ಟಿದ್ದು ಸಿಲಿಸಿಯ ದೇಶದ ತಾರ್ಸದಲ್ಲಿ. ಆದರೆ ನಾನು ಬೆಳೆದದ್ದು ಈ ಪಟ್ಟಣದಲ್ಲಿ. ನಾನು ಗಮಲಿಯೇಲನ ವಿದ್ಯಾರ್ಥಿಯಾಗಿದ್ದೆನು. ನಮ್ಮ ಪಿತೃಗಳ ಧರ್ಮಶಾಸ್ತ್ರದ ಬಗ್ಗೆ ಪ್ರತಿಯೊಂದನ್ನೂ ಅವನು ನನಗೆ ಬಹು ಸೂಕ್ಷ್ಮವಾಗಿ ಬೋಧಿಸಿದ್ದಾನೆ. ಇಂದು ಇಲ್ಲಿರುವ ನಿಮ್ಮೆಲ್ಲರಂತೆಯೇ ನಾನೂ ದೇವರ ಸೇವೆಯ ಬಗ್ಗೆ ಬಹಳ ಅಭಿಮಾನ ಉಳ್ಳವನಾಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನಾನು ಕಿಲಿಕ್ಯದ ತಾರ್ಸದಲ್ಲಿ ಜನಿಸಿದ ಯೆಹೂದ್ಯನು, ಈ ಪಟ್ಟಣದಲ್ಲಿಯೇ ಬೆಳೆದವನು, ಗಮಲಿಯೇಲನ ಪಾದ ಸನ್ನಿಧಿಯಲ್ಲಿ ನಮ್ಮ ಪಿತೃಗಳ ನಿಯಮವನ್ನು ಸೂಕ್ಷ್ಮವಾಗಿ ಅಭ್ಯಾಸ ಮಾಡಿದೆ. ದೇವರ ವಿಷಯದಲ್ಲಿ, ಇಂದು ನೀವೆಲ್ಲರೂ ಇರುವಂತೆಯೇ ನಾನೂ ಆಸಕ್ತಿವುಳ್ಳವನಾಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತನ್ನಾ ಪಾವ್ಲು ಅಶೆ ಸಾಂಗ್ಲ್ಯಾನ್: ಮಿಯಾ ಜುದೆವಾಂಚೊ, ಮಿಯಾ ಉಪಾಜಲ್ಲೆ ಸಿಲಿಸಿ ದೆಶಾಚ್ಯಾ ತಾರ್ಸಿಸ್ ಮನ್ತಲ್ಯಾ ಶಾರಾತ್, ಹೊಲ್ಯಾರ್, ಮಿಯಾ ಮೊಟೊ ಹೊಲ್ಲೊ ಜೆರುಜಲೆಮಾತ್. ಮಿಯಾ ಗಮಲಿಯಲಾಚ್ಯಾ ಹಾತಿತ್ ಶಿಕಲ್ಲೊ ಪೊರ್, ಅಮ್ಚ್ಯಾಪುರ್ವಜ್ಯಾಂಚ್ಯಾ ಖಾಯ್ದ್ಯಾಚ್ಯಾ ಪುಸ್ತಕಾಂಚ್ಯಾ ವಿಶಯಾತ್ ಹರ್ ಎಕ್ಬಿ ಮಾಕಾ ಬರೆ ಕರುನ್ ಶಿಕಾಪ್ ಕರ್‍ಲಾ, ಆಜ್ ಹಿತ್ತೆ ಹೊತ್ತ್ಯಾ ತುಮ್ಚ್ಯಾ ಸಾರ್ಕೆ ಮಿಯಾ ದೆವಾಚ್ಯಾ ಸೆವಾಚ್ಯಾ ವಿಶಯಾತ್ ಲೈ ಅಭಿಮಾನ್ ಥವಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:3
27 ತಿಳಿವುಗಳ ಹೋಲಿಕೆ  

ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.


ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.


ಆದರೆ ಎಲ್ಲಾ ಜನರಿಂದ ಗೌರವಿಸಲ್ಪಟ್ಟ ಧರ್ಮಶಾಸ್ತ್ರಿಯಾದ ಗಮಲಿಯೇಲನೆಂಬ ಒಬ್ಬ ಫರಿಸಾಯನು ಹಿರೀಸಭೆಯಲ್ಲಿ ಎದ್ದುನಿಂತು ಈ ಮನುಷ್ಯರನ್ನು ಸ್ವಲ್ಪ ಹೊತ್ತು ಹೊರಗೆ ಕಳುಹಿಸಬೇಕೆಂದು ಅಪ್ಪಣೆಕೊಟ್ಟನು.


ಅದಕ್ಕೆ ಪೌಲನು; ನಾನು ಯೆಹೂದ್ಯನು, ತಾರ್ಸದವನು, ಕಿಲಿಕ್ಯಸೀಮೆಯ ಪ್ರಖ್ಯಾತವಾದ ಪಟ್ಟಣದವನು. ಈ ಜನರಿಗೆ ಕೆಲವು ಮಾತುಗಳನ್ನು ಹೇಳುವುದಕ್ಕೆ ನನಗೆ ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳುತ್ತೇನೆ ಅಂದನು.


ಅವರು ಅದನ್ನು ಕೇಳಿ ದೇವರನ್ನು ಕೊಂಡಾಡಿದರು. ಆಗ ಅವರು ಅವನಿಗೆ; “ಸಹೋದರನೇ, ಯೆಹೂದ್ಯರಲ್ಲಿ ಯೇಸುವನ್ನು ನಂಬಿರುವವರು ಸಾವಿರಾರು ಮಂದಿ ಇದ್ದಾರೆಂಬುದನ್ನು ನೋಡುತ್ತಿದ್ದೀಯಲ್ಲಾ. ಅವರೆಲ್ಲರೂ ಧರ್ಮಶಾಸ್ತ್ರದ ಅಭಿಮಾನಿಗಳಾಗಿದ್ದಾರೆ.


ಅವರು ಇಬ್ರಿಯರೋ? ನಾನೂ ಇಬ್ರಿಯನು. ಅವರು ಇಸ್ರಾಯೇಲ್ಯರೋ? ನಾನೂ ಇಸ್ರಾಯೇಲ್ಯನು. ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು.


ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.


ಎಲೀಷನು ತಿರುಗಿ ಗಿಲ್ಗಾಲಿಗೆ ಹೋದನು. ಆಗ ದೇಶದಲ್ಲಿ ಬರವಿದ್ದಿತು. ಪ್ರವಾದಿಮಂಡಳಿಯವರು ತನ್ನ ಮುಂದೆ ಒಟ್ಟಿಗೆ ಸೇರಿ ಬರಲು ಅವನು ತನ್ನ ಸೇವಕನಿಗೆ, “ದೊಡ್ಡ ಪಾತ್ರೆಯನ್ನು ತೆಗೆದುಕೊಂಡು ಇವರಿಗೋಸ್ಕರ ಅಡಿಗೆ ಮಾಡು” ಎಂದು ಆಜ್ಞಾಪಿಸಿದನು.


“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.


ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.


ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.


ಗಿಬ್ಯೋನ್ಯರು ಇಸ್ರಾಯೇಲ್ಯರ ಕುಲಕ್ಕೆ ಸೇರಿದವರಲ್ಲ. ಸಂಹೃತರಾಗದೆ ಉಳಿದ ಅಮೋರಿಯರಷ್ಟೆ. ಇಸ್ರಾಯೇಲ್ಯರು ತಾವು ಇವರನ್ನು ಕೊಲ್ಲುವುದಿಲ್ಲವೆಂದು ಪ್ರಮಾಣಮಾಡಿದ್ದರು. ಆದರೂ ಸೌಲನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳ ಮೇಲೆ ತನಗಿದ್ದ ಅಭಿಮಾನದ ನಿಮಿತ್ತ ಇವರನ್ನು ನಿರ್ನಾಮಗೊಳಿಸಬೇಕೆಂದಿದ್ದನು.


ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಇದಲ್ಲದೆ ನಾನು ನನ್ನ ಪೂರ್ವಿಕರಿಂದ ಬಂದ ಸಂಪ್ರದಾಯಗಳ ಬಗ್ಗೆ ಬಹು ಅಭಿಮಾನವುಳ್ಳವನಾಗಿ, ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ದೇಶಾಧಿಪತಿಯು ಆ ಕಾಗದವನ್ನು ಓದಿ, ಪೌಲನು ಯಾವ ಸೀಮೆಯವನು? ಎಂದು ಕೇಳಿ ಅವನು ಕಿಲಿಕ್ಯದವನೆಂದು ತಿಳಿದು;


ಹೊರಟು ಸಿರಿಯ ಮತ್ತು ಕಿಲಿಕ್ಯ ಸೀಮೆಗಳಲ್ಲಿ ಸಂಚರಿಸುತ್ತಾ ಸಭೆಗಳನ್ನು ದೃಢಪಡಿಸಿದನು.


ಅವರ ಕೈಯಲ್ಲಿ ಬರೆದುಕೊಟ್ಟದ್ದೇನಂದರೆ; “ಸಹೋದರರೂ, ಅಪೊಸ್ತಲರೂ ಮತ್ತು ಹಿರಿಯರೂ, ಅಂತಿಯೋಕ್ಯ, ಸಿರಿಯ, ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೂ ಮಾಡುವ ವಂದನೆ;


ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.


ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.


ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.


ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.


ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;


ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು