Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಈ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ, ಹೆಂಗಸರಿಗೂ ಬೇಡಿಹಾಕಿಸುತ್ತಾ, ಅವರನ್ನು ಸೆರೆಮನೆಗಳಿಗೆ ಹಾಕಿಸುತ್ತಾ ಇದ್ದೆನು, ಕೊಲೆ ಮಾಡಲಿಕ್ಕೂ ಹಿಂಜರಿಯದೆ ಹಿಂಸಿಸುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕ್ರಿಸ್ತಮಾರ್ಗವನ್ನು ಅನುಸರಿಸುವವರನ್ನು ಸ್ತ್ರೀ ಪುರುಷರೆನ್ನದೆ, ಬಂಧಿಸಿ ಅವರನ್ನು ಸೆರೆಮನೆಗೆ ತಳ್ಳಿದೆ. ಅವರನ್ನು ಮರಣಪರಿಯಂತರ ಪೀಡಿಸಿ ಹಿಂಸಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಕ್ರಿಸ್ತ ಮಾರ್ಗದವರನ್ನು ಹಿಂಸಿಸುವವನಾಗಿ ಗಂಡಸರಿಗೂ ಹೆಂಗಸರಿಗೂ ಬೇಡೀಹಾಕಿಸುತ್ತಾ ಅವರನ್ನು ಸೆರೆಮನೆಗಳಿಗೆ ಕೊಡಿಸುತ್ತಾ ಇದ್ದೆನು, ಅವರ ಕೊಲೆಗಾದರೂ ಹಿಂತೆಗೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೇಸುವಿನ ಮಾರ್ಗವನ್ನು ಯಾರು ಹಿಂಬಾಲಿಸುತ್ತಾರೋ ಅವರನ್ನು ನಾನು ಹಿಂಸಿಸಿದೆನು. ನನ್ನ ದೆಸೆಯಿಂದ ಅವರಲ್ಲಿ ಕೆಲವರು ಕೊಲ್ಲಲ್ಪಟ್ಟರು. ನಾನು ಪುರುಷರನ್ನು ಮತ್ತು ಸ್ತ್ರೀಯರನ್ನು ಬಂಧಿಸಿ ಸೆರೆಮನೆಗೆ ಹಾಕಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಜೆಜುಚ್ಯಾ ವಾಟೆನ್ ಕೊನ್ ಜಾತಾತ್ ತೆಂಕಾ ಮಿಯಾ ತರಾಸ್ ದಿಲಾ ಮಾಜ್ಯಾ ವೈನಾ ತೆಂಚ್ಯಾತ್ ಉಲ್ಲ್ಯಾಲೊಕಾಕ್ನಿ ಮರಿ ಪಾತರ್ ತರಾಸ್ ದಿಲೊ, ಅನಿ ಘವ್ಮಾನ್ಸಾಕ್ನಿ ಅನಿ ಬಾಯ್ಕೊಮಾನ್ಸಾಕ್ನಿ ಭಾಂದುನ್ ಬಂದಿಖಾನ್ಯಾತ್ ಘಾಲುಕ್ ಲಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:4
17 ತಿಳಿವುಗಳ ಹೋಲಿಕೆ  

ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ, ಅದೇನೆಂದರೆ; ಇವರು ನನ್ನನ್ನು ಧರ್ಮವಿರೋಧಿ ಎಂದೂ ಹೇಳುವ, ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪೂರ್ವಿಕರ ದೇವರನ್ನು ಆರಾಧಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ಆ ಕಾಲದಲ್ಲಿ ಈ ಮಾರ್ಗದ ವಿಷಯವಾಗಿ ಬಹಳ ಗಲಭೆ ಹುಟ್ಟಿತು.


ಕೆಲವರು ತಮ್ಮ ಮನಸ್ಸುಗಳನ್ನು ಕಠಿಣಮಾಡಿಕೊಂಡು ಒಡಂಬಡದೆ ಗುಂಪುಕೂಡಿದ ಜನರ ಮುಂದೆ ಈ ಮಾರ್ಗವು ಕೆಟ್ಟದ್ದೆಂದು ಹೇಳಲು ಅವನು ಅವರನ್ನು ಬಿಟ್ಟುಹೋಗಿ ಶಿಷ್ಯರನ್ನು ಬೇರೆಮಾಡಿ ತುರನ್ನ ಎಂಬುವನ ತರ್ಕಶಾಲೆಯಲ್ಲಿ ಪ್ರತಿದಿನವೂ ವಾದಿಸಿದನು.


ಅವನು ಸಭಾಮಂದಿರದಲ್ಲಿ ಧೈರ್ಯದಿಂದ ಮಾತನಾಡುವುದಕ್ಕೆ ಪ್ರಾರಂಭಿಸಿದನು. ಅವನ ಮಾತುಗಳನ್ನು ಪ್ರಿಸ್ಕಿಲ್ಲಳೂ ಮತ್ತು ಅಕ್ವಿಲನೂ ಕೇಳಿ ಅವನನ್ನು ತಮ್ಮ ಮನೆಗೆ ಕರೆದುಕೊಂಡು ಹೋಗಿ ದೇವರ ಮಾರ್ಗವನ್ನು ಅವನಿಗೆ ಇನ್ನೂ ಸೂಕ್ಷ್ಮವಾಗಿ ವಿವರಿಸಿದರು.


ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.


ಕೇಳಿದವರೆಲ್ಲರು ಬೆರಗಾಗಿ; “ಯೇಸುಕ್ರಿಸ್ತನ ಹೆಸರು ಹೇಳುವವರನ್ನು ಯೆರೂಸಲೇಮಿನಲ್ಲಿ ನಾಶಮಾಡುತ್ತಿದ್ದವನು ಇವನಲ್ಲವೇ. ಅಂಥವರನ್ನು ಬೇಡಿಹಾಕಿಸಿ ಮುಖ್ಯಯಾಜಕರ ಬಳಿಗೆ ತೆಗೆದುಕೊಂಡು ಹೋಗಬೇಕೆಂದು ಇಲ್ಲಿಗೆ ಬಂದಿರುವನಲ್ಲವೇ” ಎಂದು ಮಾತನಾಡಿಕೊಂಡರು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು