Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 22:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಈ ವಿಷಯದಲ್ಲಿ ಮಹಾಯಾಜಕನೂ, ಹಿರೀಸಭೆಯರೆಲ್ಲರೂ ಸಾಕ್ಷಿಗಳಾಗಿದ್ದಾರೆ; ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ಬಂಧಿಸಿ ದಂಡನೆಗಾಗಿ ಯೆರೂಸಲೇಮಿಗೆ ತರಬೇಕೆಂದು ಹೊರಟವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಕ್ಕೆ ಪ್ರಧಾನಯಾಜಕರು ಮತ್ತು ಪ್ರಮುಖರ ಇಡೀ ಸಭೆಯೇ ಸಾಕ್ಷಿ. ನಾನು ಅವರಿಂದಲೇ ದಮಸ್ಕಸಿನಲ್ಲಿರುವ ಯೆಹೂದ್ಯ ಬಾಂಧವರಿಗೆ ಪತ್ರಗಳನ್ನು ಪಡೆದು, ಆ ಪಟ್ಟಣಕ್ಕೆ ಹೊರಟೆ. ಅಲ್ಲಿಂದ ಕ್ರೈಸ್ತರನ್ನು ಬಂಧಿಸಿ, ಜೆರುಸಲೇಮಿಗೆ ತಂದು ಶಿಕ್ಷಿಸಬೇಕೆಂಬುದೇ ನನ್ನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಈ ವಿಷಯದಲ್ಲಿ ಮಹಾಯಾಜಕನೂ ಹಿರೀಸಭೆಯವರೆಲ್ಲರೂ ಸಾಕ್ಷಿಗಳಾಗಿದ್ದಾರೆ. ಅವರಿಂದಲೇ ನಾನು ದಮಸ್ಕದಲ್ಲಿದ್ದ ಸಹೋದರರಿಗೆ ಕಾಗದಗಳನ್ನು ತೆಗೆದುಕೊಂಡು ಅಲ್ಲಿಗೆ ಹೋದವರನ್ನೂ ಬೇಡಿಗಳಿಂದ ದಂಡನೆಗಾಗಿ ಯೆರೂಸಲೇವಿುಗೆ ತರಬೇಕೆಂದು ಹೊರಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಇದು ಸತ್ಯವೆಂಬುದಕ್ಕೆ ಪ್ರಧಾನಯಾಜಕರು ಮತ್ತು ಯೆಹೂದ್ಯರ ಹಿರೀನಾಯಕರ ಸಭೆಯವರೆಲ್ಲರು ಸಾಕ್ಷಿಗಳಾಗಿದ್ದಾರೆ. ಒಂದು ಸಲ, ಈ ನಾಯಕರು ನನಗೆ ಕೆಲವು ಪತ್ರಗಳನ್ನು ಕೊಟ್ಟರು. ದಮಸ್ಕ ಪಟ್ಟಣದಲ್ಲಿನ ಯೆಹೂದ್ಯ ಸಹೋದರರಿಗೆ ಆ ಪತ್ರಗಳನ್ನು ಬರೆಯಲಾಗಿತ್ತು. (ಯೇಸುವಿನ) ಶಿಷ್ಯರನ್ನು ಬಂಧಿಸಿ ದಂಡಿಸುವುದಕ್ಕಾಗಿ ಅವರನ್ನು ಜೆರುಸಲೇಮಿಗೆ ಎಳೆದುಕೊಂಡು ಬರಲು ನಾನು ಅಲ್ಲಿಗೆ ಹೋಗುತ್ತಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮಹಾಯಾಜಕನೂ ಹಿರಿಸಭೆಯವರೆಲ್ಲರೂ ಇದಕ್ಕೆ ಸಾಕ್ಷಿ. ಅವರಿಂದಲೇ ದಮಸ್ಕದಲ್ಲಿದ್ದ ಸಹೋದರರಿಗೆ ಪತ್ರಗಳನ್ನು ತೆಗೆದುಕೊಂಡು, ಅಲ್ಲಿಗೆ ಹೋದವರನ್ನೂ ದಂಡಿಸುವುದಕ್ಕಾಗಿಯೂ ಸೆರೆಹಿಡಿದು ಯೆರೂಸಲೇಮಿಗೆ ತರುವುದಕ್ಕಾಗಿಯೂ ದಮಸ್ಕಕ್ಕೆ ಪ್ರಯಾಣಮಾಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹೆ ಖರೆ ಮನನುಕ್ ಮುಖ್ಯ್ ಯಾಜಕ್ ಅನಿ ಜುದೆವಾಂಚ್ಯಾ ಜಾನ್ತ್ಯಾ ಲೊಕಾಂಚ್ಯಾ ತಾಂಡ್ಯಾತ್ಲಿ ಲೊಕಾ ಸಗ್ಳಿ ಸಾಕ್ಷಿ ಹೊವ್ನ್ ಹಾತ್, ಎಗ್ದಾ ಹ್ಯಾ ಮುಂಖಡಾನಿ ಮಾಕಾ ಉಲ್ಲಿ ಚಿಟಿಯಾ ದಿಲ್ಯಾನಿ, ದಮಸ್ಕಾ ಮನ್ತಲ್ಯಾ ಶಾರಾತ್ಲ್ಯಾ ಜುದೆವಾಂಚ್ಯಾ ಭಾವಾಕ್ನಿ ತಿ ಸಗ್ಳ್ಯಿ ಚಿಟಿಯಾ ಲಿವಲ್ಲಿ ಹೊತ್ತಿ ಮಿಯಾ ಜೆಜುಚ್ಯಾ ಶಿಸಾಕ್ನಿ ಬಂಧಿಕರುನ್ ಶಿಕ್ಷಾ ದಿವ್ಕ್ ಸಾಟ್ನಿ ತೆಂಕಾ ಜೆರುಜಲೆಮಾಕ್ ವಡುನ್ ಘೆವ್ನ್ ಯೆವ್ಕ್ ಥೈ ಜಾವ್ಲಾಗಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 22:5
21 ತಿಳಿವುಗಳ ಹೋಲಿಕೆ  

ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,


ಅದನ್ನು ಕೇಳಿದ ಅವರು ಬೆಳಗಿನ ಜಾವದಲ್ಲಿಯೇ ದೇವಾಲಯದೊಳಗೆ ಹೋಗಿ ಸುವಾರ್ತೆಯನ್ನು ಸಾರಿದರು. ಇತ್ತ ಮಹಾಯಾಜಕನೂ, ಅವನ ಜೊತೆಯಲ್ಲಿದ್ದವರೂ ಬಂದು ಹಿರೀಸಭೆಯನ್ನೂ, ಇಸ್ರಾಯೇಲ್ಯರ ಹಿರಿಯರೆಲ್ಲರನ್ನೂ ಕೂಡಿಸಿ, ಅವರನ್ನು ಕರತರುವುದಕ್ಕೆ ಓಲೇಕಾರರನ್ನು ಸೆರೆಮನೆಗೆ ಕಳುಹಿಸಿದರು.


ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ.


ಅದಕ್ಕೆ ಅವರು ಅವನಿಗೆ; “ನಿನ್ನ ವಿಷಯವಾಗಿ ನಮಗೆ ಯೂದಾಯದಿಂದ ವರದಿ ಬರಲಿಲ್ಲ, ಸಹೋದರರಲ್ಲಿ ಒಬ್ಬರೂ ಬಂದು ನಿನ್ನ ವಿಷಯವಾಗಿ ಕೆಟ್ಟದ್ದನ್ನು ತಿಳಿಸಲೂ ಇಲ್ಲ, ಮಾತನಾಡಲೂ ಇಲ್ಲ.


ಈ ಉದ್ದೇಶದಿಂದ ನಾನು ಮುಖ್ಯಯಾಜಕರಿಂದ ಅಧಿಕಾರವನ್ನೂ, ಆದೇಶವನ್ನೂ ಹೊಂದಿ ದಮಸ್ಕಕ್ಕೆ ಹೋಗುವ ದಾರಿಯಲ್ಲಿ ರಾಜನೇ,


ಯೆರೂಸಲೇಮಿನಲ್ಲಿ ಹಾಗೆಯೇ ಮಾಡಿದ್ದೆನು. ಮುಖ್ಯಯಾಜಕರಿಂದ, ಅಧಿಕಾರವನ್ನು ಪಡೆದು ದೇವಜನರಲ್ಲಿ ಅನೇಕರನ್ನು ಸೆರೆಮನೆಗಳಲ್ಲಿ ಇರಿಸಿ, ಅವರಿಗೆ ಮರಣದ ತೀರ್ಪಾದಾಗ, ನಾನು ಅದಕ್ಕೆ ಸಮ್ಮತಿಯನ್ನು ಸೂಚಿಸಿದೆನು.


“ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.


“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.


ಮತ್ತು ಇಲ್ಲಿಯೂ ನಿನ್ನ ಹೆಸರನ್ನು ಸ್ಮರಿಸುವವರೆಲ್ಲರಿಗೆ ಬೇಡಿಹಾಕಿಸುವ ಅಧಿಕಾರವನ್ನು ಮುಖ್ಯಯಾಜಕರಿಂದ ಹೊಂದಿದ್ದಾನೆ” ಅಂದನು.


ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


“ಸಹೋದರರೇ, ಮೂಲಪಿತೃವಾದ ದಾವೀದನ ವಿಷಯದಲ್ಲಿ ನಾನು ಧೈರ್ಯದಿಂದ ನಿಮ್ಮ ಸಂಗಡ ಮಾತನಾಡಬಹುದು ಏನೆಂದರೆ,, ಅವನು ಮರಣಹೊಂದಿ ಹೂಣಲ್ಪಟ್ಟನು, ಅವನ ಸಮಾಧಿ ಈ ದಿನದ ವರೆಗೂ ನಮ್ಮಲ್ಲಿ ಇದೆ.


“ಸಹೋದರರೇ, ಅದಿರಲಿ, ನೀವು ಆ ಕಾರ್ಯವನ್ನು ತಿಳಿಯದೆ ಮಾಡಿದಿರೆಂದು ಬಲ್ಲೆನು; ನಿಮ್ಮ ಅಧಿಕಾರಿಗಳೂ ಅದನ್ನು ತಿಳಿಯದೆ ಮಾಡಿದರು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ; “ಸಹೋದರರೇ, ನಾನು ಈ ದಿನದವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ” ಅಂದನು.


ಸಭೆಯವರಲ್ಲಿ ಒಂದು ಪಾಲು ಸದ್ದುಕಾಯರೂ, ಒಂದು ಪಾಲು ಫರಿಸಾಯರೂ, ಇರುವುದನ್ನು ಪೌಲನು ಕಂಡು; “ಸಹೋದರರೇ, ನಾನು ಫರಿಸಾಯನು, ಫರಿಸಾಯನ ಮಗನು; ಸತ್ತವರು ಪುನರುತ್ಥಾನಹೊಂದುವರು ಎಂಬ ನಿರೀಕ್ಷೆಯ ನಿಮಿತ್ತವಾಗಿ ನಾನು ವಿಚಾರಣೆಮಾಡಲ್ಪಡುತ್ತಿದ್ದಾನೆ” ಎಂದು ಕೂಗಿದನು.


ಎಲ್ಲಾ ಸಭಾಮಂದಿರಗಳಲ್ಲಿಯೂ, ನಾನು ಅನೇಕ ಸಾರಿ ಅವರನ್ನು ದಂಡಿಸಿ ಅವರಿಂದ ದೇವದೂಷಣೆಯ ಮಾತುಗಳನ್ನಾಡಿಸುವುದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಬೇರೆ ಪಟ್ಟಣಗಳವರೆಗೂ ಹೋಗಿ, ಅವರನ್ನು ಹಿಂಸೆಪಡಿಸಿದೆನು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ಪ್ರಮುಖರನ್ನು ತನ್ನ ಬಳಿಗೆ ಕರೆಯಿಸಿಕೊಂಡನು. ಅವರು ಬಂದಾಗ ಅವನು ಅವರಿಗೆ; “ಸಹೋದರರೇ, ನಾನು ನಮ್ಮ ಜನರಿಗೂ, ನಮ್ಮ ಪೂರ್ವಿಕರ ಆಚಾರಗಳಿಗೂ ವಿರುದ್ಧವಾಗಿ ಏನೂ ಮಾಡದವನಾದರೂ ಯೆರೂಸಲೇಮಿನಿಂದ ರೋಮಾಯರ ಕೈಗೆ ಸೆರೆಯವನಾಗಿ ಒಪ್ಪಿಸಲ್ಪಟ್ಟೆನು.


ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.


ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು