ಅಪೊಸ್ತಲರ ಕೃತ್ಯಗಳು 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಂದು ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು; “ಧೈರ್ಯದಿಂದಿರು; ನೀನು ಯೆರೂಸಲೇಮಿನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವುದು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಮರುದಿನ ರಾತ್ರಿ ಪ್ರಭು ಯೇಸುವು ಬಂದು ಪೌಲನ ಬಳಿ ನಿಂತುಕೊಂಡು, “ಧೈರ್ಯದಿಂದಿರು! ನೀನು ನನ್ನ ಬಗ್ಗೆ ಜೆರುಸಲೇಮಿನ ಜನರಿಗೆ ತಿಳಿಸಿರುವೆ. ನೀನು ರೋಮಿಗೂ ಹೋಗಿ ಅಲ್ಲಿರುವ ಜನರಿಗೆ ನನ್ನ ಬಗ್ಗೆ ತಿಳಿಸಬೇಕು!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತ್ಯಾ ದಿಸಿ ರಾತ್ತಿನಿ ಧನಿಯಾ ಜೆಜು ಪಾವ್ಲುಚ್ಯಾ ಜಗ್ಗೊಳ್ ಯೆವ್ನ್ ಇಬೆ ರಾವ್ನ್ ಭಿಂವ್‍ನಕ್ಕೊ! ತಿಯಾ ಮಾಜ್ಯಾ ವಿಶಯಾತ್ ಜೆರುಜಲೆಮಾತ್ ಸಾಂಗಲ್ಲ್ಯಾ ಸಾರ್ಕೆಚ್ ರೊಮಾತ್ ಬಿ ಜಾವ್ನ್ ಮಾಜಿ ಸಾಕ್ಷಿ ಸಾಂಗುಚೆ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |