Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಇವರು ಮುಖ್ಯಯಾಜಕರ ಮತ್ತು ಹಿರಿಯರ ಬಳಿಗೆ ಹೋಗಿ; “ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವುದಿಲ್ಲವೆಂದು ಕಠಿಣ ಶಪಥವನ್ನು ಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಇವರು ಮಹಾಯಾಜಕರ ಮತ್ತು ಸಭೇಹಿರಿಯರ ಬಳಿಗೆ ಹೋಗಿ - ನಾವು ಪೌಲನನ್ನು ಕೊಲ್ಲುವ ತನಕ ಬಾಯಲ್ಲಿ ಏನೂ ಹಾಕುವದಿಲ್ಲವೆಂದು ಕಠಿನ ಶಪಥವನ್ನು ಮಾಡಿಕೊಂಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಈ ಯೆಹೂದ್ಯರು ಮಹಾಯಾಜಕರ ಮತ್ತು ಯೆಹೂದ್ಯರ ಹಿರಿಯ ನಾಯಕರ ಬಳಿಗೆ ಹೋಗಿ, “ನಾವು ಪೌಲನನ್ನು ಕೊಲ್ಲುವ ತನಕ ತಿನ್ನುವುದೂ ಇಲ್ಲ ಕುಡಿಯುವುದೂ ಇಲ್ಲ ಎಂಬ ಕಠಿಣವಾದ ಹರಕೆ ಮಾಡಿಕೊಂಡಿದ್ದೇವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವರು ಮುಖ್ಯಯಾಜಕರ ಹಾಗೂ ಹಿರಿಯರ ಬಳಿಗೆ ಹೋಗಿ, “ಪೌಲನನ್ನು ಕೊಲ್ಲುವವರೆಗೆ ನಾವು ಊಟಮಾಡುವುದಿಲ್ಲ ಎಂದು ಗಂಭೀರ ಶಪಥಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮೊಟೊ ಯಾಜಕ್ ಅನಿ ಜಾಂಟ್ಯಾ ಲೊಕಾಂಚ್ಯಾಕ್ಡೆ ಜಾವ್ನ್ ಪಾವ್ಲುಕ್ ಜಿವ್ ಕಾಡಿ ಪತರ್ ಅಮಿ ಕಾಯ್ ಬಿ ಖಾಯ್ನಾಂವ್ ಅನಿ ಫಿಯ್ನಾವ್ ಮನುನ್ ಆನ್ ಕರ್ಲಾತ್ ಮನುನ್ ಸಾಂಗಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:14
10 ತಿಳಿವುಗಳ ಹೋಲಿಕೆ  

ಬೆಳಗಾದ ಮೇಲೆ ಯೆಹೂದ್ಯರು ಒಳಸಂಚು ಮಾಡಿ; ನಾವು ಪೌಲನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥಮಾಡಿಕೊಂಡರು.


ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.


ಎರಡು ಕೈಗಳನ್ನು ಹಾಕಿ ಕೆಟ್ಟ ಕೆಲಸವನ್ನು ಚೆನ್ನಾಗಿ ಮಾಡುತ್ತಾರೆ. ಪ್ರಭುವು ಧನವನ್ನು ಕೇಳುತ್ತಾನೆ. ನ್ಯಾಯಾಧಿಪತಿಯು ಲಂಚಕ್ಕೆ ಕೈಯೊಡ್ಡುತ್ತಾನೆ. ದೊಡ್ಡ ಮನುಷ್ಯನು ತನ್ನ ದುರಾಶೆಯನ್ನು ತಿಳಿಸುತ್ತಾನೆ. ಹೀಗೆ ಕುಯುಕ್ತಿಯನ್ನು ಹೆಣೆಯುತ್ತಾರೆ.


ಜನರೂ, ಯಾಜಕರೂ ಒಂದೇ; ಅವರ ದುಷ್ಕಾರ್ಯಗಳಿಗೆ ಅವರನ್ನು ದಂಡಿಸುವೆನು, ಅವರ ದುಷ್ಕೃತ್ಯಗಳನ್ನು ಅವರಿಗೆ ಕಟ್ಟುವೆನು.


ಅವರ ಮುಖಭಾವವೇ ಅವರಿಗೆ ವಿರುದ್ಧ ಸಾಕ್ಷಿಯಾಗಿದೆ. ತಮ್ಮ ಪಾಪವನ್ನು ಮರೆಮಾಡದೇ ಸೊದೋಮಿನವರಂತೆ ಪ್ರಕಟಿಸುತ್ತಾರೆ. ಅಯ್ಯೋ, ಅವರ ಆತ್ಮದ ಗತಿಯೇ! ತಮಗೆ ತಾವೇ ಕೇಡು ಮಾಡಿಕೊಂಡಿದ್ದಾರೆ.


ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.


ಹೀಗೆ ಮಾಡಿದವರು ನಲವತ್ತು ಮಂದಿಗಿಂತ ಹೆಚ್ಚಾಗಿದ್ದರು.


ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.


ನೀವು ಅವರ ಮಾತಿಗೆ ಬದ್ಧರಾಗಬೇಡಿ; ಏಕೆಂದರೆ ನಲವತ್ತಕ್ಕಿಂತ ಹೆಚ್ಚು ಮಂದಿ ಯೆಹೊದ್ಯರು ತಾವು ಅವನನ್ನು ಕೊಲ್ಲುವ ತನಕ ಅನ್ನಪಾನವೇನೂ ಮುಟ್ಟುವುದಿಲ್ಲವೆಂದು ಶಪಥವನ್ನು ಮಾಡಿಕೊಂಡು, ಅವನಿಗೋಸ್ಕರ ಹೊಂಚುಹಾಕುತ್ತಾ ಇದ್ದಾರೆ. ಈಗ ಅವರು ನಿಮ್ಮ ಒಪ್ಪಿಗೆಯನ್ನೇ ಎದುರುನೋಡುತ್ತಾ ಸಿದ್ಧವಾಗಿದ್ದಾರೆ” ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು