Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವರು ಹೊಂಚಿಕೊಂಡಿರುವದನ್ನು ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಒಳಸಂಚು ಪೌಲನ ಸಹೋದರಿಯ ಮಗನಿಗೆ ತಿಳಿಯಲು ಅವನು ಸೈನಿಕ ಪಾಳ್ಯದೊಳಗೆ ಹೋಗಿ ಪೌಲನಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಹಿ ಯೆವ್ಚನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಗೊತ್ತ್ ಹೊಲಿ, ತೆನಿ ಸೈನಿಕಾಂಚ್ಯಾ ಕೊಟೆತ್ ಜಾವ್ನ್ ಹೆ ಸಗ್ಳೆ ಪಾವ್ಲುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:16
12 ತಿಳಿವುಗಳ ಹೋಲಿಕೆ  

ಜಗಳವು ಅಧಿಕವಾದಾಗ ಅವರು ಪೌಲನನ್ನು ಎಳೆದಾಡಿ ಚೂರುಚೂರು ಮಾಡಾರೆಂದು ಸಹಸ್ರಾಧಿಪತಿಯು ಭಯಪಟ್ಟು ಸಿಪಾಯಿಗಳಿಗೆ; ನೀವು ಹೋಗಿ ಅವರ ಮಧ್ಯದಿಂದ ಅವನನ್ನು ಬಲವಂತವಾಗಿ ಹಿಡಿದು ಕೋಟೆಯೊಳಗೆ ತರಬೇಕೆಂದು ಅಪ್ಪಣೆ ಮಾಡಿದನು.


ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”


ಮರುದಿನ ಅವರು ಸವಾರರನ್ನು ಅವನ ಜೊತೆಯಲ್ಲಿ ಹೋಗುವಂತೆ ಮಾಡಿ, ತಾವು ಕೋಟೆಗೆ ಹಿಂತಿರುಗಿ ಬಂದರು.


ಇವನಾರು? ಏನು ಮಾಡಿದ್ದಾನೆ? ಎಂದು ಕೇಳಲು ಕೆಲವರು ಹೀಗೆ, ಕೆಲವರು ಹಾಗೆ ಕೂಗುತ್ತಿರಲು ಗದ್ದಲದ ನಿಮಿತ್ತ ನಿಜ ಸ್ಥಿತಿಯನ್ನು ತಿಳಿಯಲಾರದೆ ಅವನನ್ನು ಕೋಟೆಯೊಳಗೆ ತೆಗೆದುಕೊಂಡು ಹೋಗಿರೆಂದು ಅಪ್ಪಣೆಕೊಟ್ಟನು.


ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?


ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.


ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೇ ಹಿಡಿದುಕೊಂಡು, ವಕ್ರಬುದ್ಧಿಯುಳ್ಳವರ ಆಲೋಚನೆಯನ್ನು ನಿರರ್ಥಕ ಮಾಡುತ್ತಾನೆ.


ಯೋನಾತಾನ ಮತ್ತು ಅಹೀಮಾಚರು ರೋಗೆಲಿನ ಬುಗ್ಗೆಯ ಬಳಿಯಲ್ಲಿದ್ದರು. ಇವರ ಮನೆಯ ದಾಸಿಯು ಎಲ್ಲಾ ವರ್ತಮಾನಗಳನ್ನು ಇವರಿಗೂ ಮತ್ತು ಇವರ ಅರಸನಾದ ದಾವೀದನಿಗೂ ಮುಟ್ಟಿಸುವಂತೆ ಗೊತ್ತುಮಾಡಿಕೊಂಡಿದ್ದರು. ತಮ್ಮನ್ನು ಯಾರೂ ನೋಡಬಾರದೆಂದು ಇವರು ತಾವಾಗಿ ಊರೊಳಕ್ಕೆ ಬರಲಿಲ್ಲ.


ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?


ಪೌಲನು ಶತಾಧಿಪತಿಗಳಲ್ಲಿ ಒಬ್ಬನನ್ನು ಕರೆಯಿಸಿ; “ಈ ಯೌವನಸ್ಥನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗು; ಅವನಿಗೆ ತಿಳಿಸಬೇಕಾದ ಒಂದು ಮಾತು ಇದೆ” ಎಂದು ಹೇಳಿದನು.


ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.


ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು